ಭಾರತ vs ಇಂಗ್ಲೆಂಡ್ ಪ್ರಥಮ ಟೆಸ್ಟ್: 183ಕ್ಕೆ ಇಂಗ್ಲೆಂಡ್ ಆಲ್ಔಟ್

ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡ 183 ರನ್‌ಗಳಿಗೆ ಆಲ್ಔಟ್ ಆಗಿದೆ. ಟೀಮ್ ಇಂಡಿಯಾ ಪರ ಜಸ್ಪ್ರೀತ್ ಬುಮ್ರಾ 4 ವಿಕೆಟ್ ಪಡೆದು ಮಿಂಚಿದ್ದಾರೆ.

ಕಳೆದ ತಿಂಗಳು ಇಂಗ್ಲೆಂಡ್ ಪ್ರವಾಸ ಕೈಗೊಂಡಿದ್ದ ವಿರಾಟ್ ಕೊಹ್ಲಿ ನೇತೃತ್ವದ ಟೀಮ್ ಇಂಡಿಯಾ ತಂಡ ನ್ಯೂಜಿಲೆಂಡ್ ವಿರುದ್ಧದ ಪ್ರತಿಷ್ಠಿತ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದಲ್ಲಿ ಸೋಲುವುದರ ಮೂಲಕ ನಿರಾಸೆ ಅನುಭವಿಸಿತ್ತು. ಈ ಪಂದ್ಯ ಮುಗಿದ ಬಳಿಕ ಇಂಗ್ಲೆಂಡ್‌ನಲ್ಲಿಯೇ ಬೀಡುಬಿಟ್ಟಿರುವ ಭಾರತೀಯ ಆಟಗಾರರು ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲು ತಯಾರಿಯನ್ನೂ ನಡೆಸಿತ್ತು.

ಇನ್ನು ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿ ಬುಧವಾರ (ಆಗಸ್ಟ್ 4) ಆರಂಭವಾಗುತ್ತಿದ್ದು ಕ್ರೀಡಾ ಜಗತ್ತಿನಲ್ಲಿ ದೊಡ್ಡ ಕುತೂಹಲ ಮತ್ತು ನಿರೀಕ್ಷೆಯನ್ನು ಹುಟ್ಟುಹಾಕಿದೆ. ಈ ಸರಣಿಯ ಮೊದಲನೇ ಪಂದ್ಯದ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಎರಡನೇ ಆವೃತ್ತಿ ಕೂಡ ಆರಂಭವಾಗುತ್ತಿದ್ದು ಪಂದ್ಯದ ಮೇಲೆ ಮತ್ತಷ್ಟು ಕುತೂಹಲ ಹೆಚ್ಚಿಸಲು ಇದು ಕಾರಣವಾಗಿದೆ. ಹೀಗಾಗಿ ಈ ಸರಣಿ ಎರಡೂ ತಂಡಗಳಿಗೂ ಅತ್ಯಮೂಲ್ಯವಾಗಿದ್ದು ಎರಡೂ ತಂಡಗಳು ಸಹ ಗೆಲ್ಲುವ ವಿಶ್ವಾಸದೊಂದಿಗೆ ಕಣಕ್ಕಿಳಿದಿದ್ದು ಸರಣಿ ಕೈವಶ ಮಾಡಿಕೊಳ್ಳುವ ತವಕದಲ್ಲಿವೆ.

ಇನ್ನು ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿ ಬುಧವಾರದಿಂದ ಆರಂಭವಾಗುತ್ತಿದೆ. 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲನೇ ಪಂದ್ಯ ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ದುಕೊಂಡಿದೆ.

1
49712

ಭಾರತ ತಂಡದ ಆಡುವ ಬಳಗ: ರೋಹಿತ್ ಶರ್ಮಾ, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿಮಿ, ಮೊಹಮ್ಮದ್ ಸಿರಾಜ್

ಇಂಗ್ಲೆಂಡ್ ತಂಡದ ಆಡುವ ಬಳಗ: ರೋರಿ ಬರ್ನ್ಸ್, ಡೊಮಿನಿಕ್ ಸಿಬ್ಲಿ, ಜ್ಯಾಕ್ ಕ್ರಾವ್ಲಿ, ಜೋ ರೂಟ್ (ನಾಯಕ), ಜಾನಿ ಬೈರ್‌ಸ್ಟೊ, ಡೇನಿಯಲ್ ಲಾರೆನ್ಸ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಸ್ಯಾಮ್ ಕರನ್, ಒಲ್ಲಿ ರಾಬಿನ್ಸನ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್

ಇಂಗ್ಲೆಂಡ್ ನೆಲದಲ್ಲಿ ಸರಣಿ ಗೆಲ್ಲುವ ತವಕದಲ್ಲಿ ವಿರಾಟ್ ಕೊಹ್ಲಿ ಪಡೆ:
ಇಂಗ್ಲೆಂಡ್ ನೆಲದಲ್ಲಿ ಭಾರತ ತಂಡ ಟೆಸ್ಟ್ ಸರಣಿಯನ್ನು ಗೆದ್ದು ಬರೋಬ್ಬರಿ 14 ವರ್ಷಗಳೇ ಕಳೆದಿವೆ! 2007ರಲ್ಲಿ ಇಂಗ್ಲೆಂಡ್ ನೆಲದಲ್ಲಿ ಟೆಸ್ಟ್ ಸರಣಿಯನ್ನು ಗೆದ್ದು ಬೀಗಿದ್ದ ಟೀಂ ಇಂಡಿಯಾ ತದನಂತರ ನಡೆದ 2011, 2014 ಮತ್ತು 2018ರ ಟೆಸ್ಟ್ ಸರಣಿಗಳಲ್ಲಿ ಸೋಲುವುದರ ಮೂಲಕ ಕೆಟ್ಟ ದಾಖಲೆಯನ್ನು ಮುಂದುವರಿಸುತ್ತಾ ಬಂದಿದೆ. ಹೀಗಾಗಿ ಈ ಬಾರಿಯ ಸರಣಿಯನ್ನು ಕೈವಶ ಮಾಡಿಕೊಳ್ಳುವುದರ ಮೂಲಕ 14 ವರ್ಷಗಳಿಂದ ನಡೆದುಕೊಂಡು ಬಂದಿರುವ ಕೆಟ್ಟ ದಾಖಲೆಗೆ ಅಂತ್ಯ ಹಾಡಲು ವಿರಾಟ್ ಕೊಹ್ಲಿ ಪಡೆ ಸಜ್ಜಾಗಿದೆ.

ಇಂಗ್ಲೆಂಡ್ ತಂಡ ಕೂಡ ಗೆಲ್ಲುವ ನಿರೀಕ್ಷೆಯಲ್ಲಿದೆ:
ಅತ್ತ ಇಂಗ್ಲೆಂಡ್ ತಂಡ ಕೂಡ ಸರಣಿಗೆ ಬೇಕಾದ ಎಲ್ಲಾ ರೀತಿಯ ತಯಾರಿಗಳನ್ನು ನಡೆಸಿಕೊಂಡಿದ್ದು ಟೀಮ್ ಇಂಡಿಯಾ ವಿರುದ್ಧ ಸರಣಿ ಜಯ ಸಾಧಿಸುವುದರ ಮೂಲಕ ಕಳೆದ ಬಾರಿ ಭಾರತ ಪ್ರವಾಸ ಕೈಗೊಂಡು ಭಾರತ ನೆಲದಲ್ಲಿ ಸರಣಿ ಸೋತಿದ್ದ ಸೇಡನ್ನು ತೀರಿಸಿಕೊಳ್ಳುವ ಹಂಬಲದಲ್ಲಿದೆ. ಆದರೆ ಭಾರತ ವಿರುದ್ಧದ ಈ ಸರಣಿಗೆ ತಂಡದ ಪ್ರಮುಖ ಆಟಗಾರ ಬೆನ್ ಸ್ಟೋಕ್ಸ್ ಅಲಭ್ಯರಾಗಿದ್ದು ಇಂಗ್ಲೆಂಡ್ ತಂಡಕ್ಕೆ ದೊಡ್ಡ ಹಿನ್ನಡೆಯುಂಟಾಗಿರುವುದಂತೂ ನಿಜ. ಬೆನ್ ಸ್ಟೋಕ್ಸ್ ಅಲಭ್ಯತೆಯ ಕುರಿತು ಈಗಾಗಲೇ ಸಾಕಷ್ಟು ಚರ್ಚೆಗಳು ನಡೆದಿದ್ದು ಬೆನ್ ಸ್ಟೋಕ್ಸ್ ಇಲ್ಲದ ಇಂಗ್ಲೆಂಡ್ ತಂಡ ಭಾರತವನ್ನು ಮಣಿಸುವುದು ತೀರಾ ಕಷ್ಟ ಎಂದು ಹರ್ಭಜನ್ ಸಿಂಗ್ ಕೂಡ ಅಭಿಪ್ರಾಯಪಟ್ಟಿದ್ದರು.

ಭಾರತ ಇಂಗ್ಲೆಂಡ್ ತಂಡವನ್ನು ಮಣಿಸಿ ಸರಣಿಯನ್ನು ಜಯಗಳಿಸಲಿದೆ ಎಂದು ಇಂಗ್ಲೆಂಡ್ ತಂಡದ ಮಾಜಿ ಆಟಗಾರ ಮೈಕಲ್ ವಾನ್ ಸರಣಿ ಆರಂಭಕ್ಕೂ ಮುನ್ನವೇ ಭವಿಷ್ಯವನ್ನು ನುಡಿದಿದ್ದರು. ಸದಾ ಭಾರತ ತಂಡದ ಕಾಲೆಳೆಯುತ್ತಿದ್ದ ಮೈಕಲ್ ವಾನ್ ಈ ರೀತಿಯ ಹೇಳಿಕೆಯನ್ನು ನೀಡುವುದರ ಮೂಲಕ ಎಲ್ಲರಲ್ಲಿಯೂ ಅಚ್ಚರಿಯನ್ನು ಮೂಡಿಸಿದ್ದರು. ಹಾಗೂ ಭಾರತದ ಮಾಜಿ ಆಟಗಾರ ಹರ್ಭಜನ್ ಸಿಂಗ್ ಕೂಡ ಭಾರತ ಇಂಗ್ಲೆಂಡ್ ವಿರುದ್ಧ ಗೆಲುವು ಸಾಧಿಸಲಿದೆ ಎಂದು ಭವಿಷ್ಯವನ್ನು ನುಡಿದಿದ್ದರು.

ಇನ್ನು ಸರಣಿಗೂ ಮುನ್ನ ಭಾರತ ತಂಡದಲ್ಲಿ ಯಾವ ಆಟಗಾರರಿಗೆ ಸ್ಥಾನ ಕೊಡಲಿದ್ದಾರೆ ಎಂಬ ಚರ್ಚೆಗಳು ಹೆಚ್ಚಾಗಿ ನಡೆದಿದ್ದವು. ಭಾರತ ತಂಡದ ಆರಂಭಿಕ ಆಟಗಾರರಾದ ಶುಬ್ಮನ್ ಗಿಲ್ ಮತ್ತು ಮಯಾಂಕ್ ಅಗರ್ವಾಲ್ ಇಬ್ಬರೂ ಕೂಡ ಗಾಯದ ಸಮಸ್ಯೆಗೆ ಒಳಗಾಗಿದ್ದರಿಂದ ಮೊದಲನೇ ಪಂದ್ಯದಿಂದ ಹೊರಗುಳಿದಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ಜೊತೆ ಯಾರು ಆರಂಭಿಕ ಆಟಗಾರರಾಗಿ ಕಣಕ್ಕಿಳಿಯಲಿದ್ದಾರೆ ಎಂಬ ಪ್ರಶ್ನೆ ಕಾಡಿತ್ತು. ಸದ್ಯ ಟೀಮ್ ಇಂಡಿಯಾ ಆಡುವ ಬಳಗ ಘೋಷಣೆಯಾಗಿದ್ದು ತಂಡದಲ್ಲಿರುವ ಆಟಗಾರರನ್ನು ನೋಡಿದರೆ ರೋಹಿತ್ ಶರ್ಮಾ ಜೊತೆ ಕೆಎಲ್ ರಾಹುಲ್ ಆರಂಭಿಕ ಆಟಗಾರನಾಗಿ ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

For Quick Alerts
ALLOW NOTIFICATIONS
For Daily Alerts
Story first published: Wednesday, August 4, 2021, 15:22 [IST]
Other articles published on Aug 4, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X