IND vs ENG Test: ಇಂದಿನಿಂದ ಭಾರತ, ಇಂಗ್ಲೆಂಡ್ ಮೊದಲ ಟೆಸ್ಟ್: ಹೇಗಿರಲಿದೆ ಭಾರತದ ಪ್ಲೇಯಿಂದ ಇಲೆವೆನ್?
ಬಹು ನಿರೀಕ್ಷಿತ ಭಾರತ ಹಾಗೂ ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿ ಇಂದಿನಿಂದ (ಜೂನ್ 12) ಆರಂಭವಾಗಲಿದೆ. ಈ ಟೆಸ್ಟ್ ಸರಣಿಯ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಟೀಮ್ ಇಂಡಿಯಾ ಈ ಟೆಸ್ಟ್ ಸರಣಿಯಲ್ಲಿ ಯುವ ಆಟಗಾರರನ್ನು ಕಣಕ್ಕೆ ಇಳಿಸಿದೆ. ಅನುಭವಿ ಆಟಗಾರರ ಅನುಪಸ್ಥಿತಿ ತಂಡಕ್ಕೆ ಬಹುವಾಗಿ ಕಾಡಲಿದೆ. ಈ ವೇಳೆ ಹಲವು ಪ್ರಶ್ನೆಗಳಿಗೆ ಟಾಸ್ ಸಮಯದಲ್ಲಿ ಉತ್ತರ ಸಿಗುವ ಸಾಧ್ಯತೆ ಇದೆ.
ಹೆಡಿಂಗ್ಲಿಯಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಪಿಚ್ ಬ್ಯಾಟರ್‌ಗಳಿಗೆ ಸಹಾಯ ಮಾಡಲಿದೆ. ಭಾರತ ಈ ಸವಾಲಿನ ಟೆಸ್ಟ್ ಪಂದ್ಯಕ್ಕೆ ಹೇಗೆ ತಂಡವನ್ನು ಪ್ರಕಟಿಸುತ್ತದೆ ಎಂಬುದರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಇನ್ನು ಶುಭಮನ್ ಗಿಲ್ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ಹೊಸ ಅಧ್ಯಾಯ ಸೃಷ್ಟಿಸಲಿದೆ. ರೋಹಿತ್ ಶರ್ಮಾ ಅವರಿಂದ ತೆರವಾದ ನಾಯಕತ್ವ ಸ್ಥಾನವನ್ನು ಗಿಲ್ ತುಂಬಿದ್ದಾರೆ. ಗಿಲ್ ಅವರಿಗೆ ಇದು ಮೊದಲ ಸತ್ವ ಪರೀಕ್ಷೆ ಆಗಿದೆ.

ಈಗಾಗಲೇ ಉಭಯ ದೇಶಗಳ ನಡುವೆ ಒಟ್ಟು 136 ಟೆಸ್ಟ್ ಪಂದ್ಯಗಳು ನಡೆದಿದ್ದು, ಭಾರತ 35ರಲ್ಲಿ, ಇಂಗ್ಲೆಂಡ್ 51ರಲ್ಲಿ ಗೆಲುವು ದಾಖಲಿಸಿದೆ. ಇನ್ನು ಟೆಸ್ಟ್ ಪಂದ್ಯಗಳು ಡ್ರಾನಲ್ಲಿ ಅಂತ್ಯವಾಗಿವೆ. ಈ ಪಂದ್ಯ ಗೆದ್ದು ಟೀಮ್ ಇಡಿಯಾ ಸರಣಿಯಲ್ಲಿ ಮುನ್ನಡೆ ಸಾಧಿಸುವ ಕನಸು ಕಾಣುತ್ತಿದೆ.
3,4ನೇ ಕ್ರಮಾಂಕದಲ್ಲಿ ಆಡುವುದು ಯಾರು?
ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ ಹಾಗೂ ಕೆಎಲ್ ರಾಹುಲ್ ಆರಂಭಿಕರಾಗಿ ಕಣಕ್ಕೆ ಇಳಿಯುವುದು ಬಹುತೇಕ ಖಚಿತವಾಗಿದೆ. ಆದರೆ ಮೂರನೇ ಹಾಗೂ ನಾಲ್ಕನೇ ಕ್ರಮಾಂಕದಲ್ಲಿ ಯಾರು ಆಡುತ್ತಾರೆ ಎಂಬ ಪ್ರಶ್ನೆಗಳಿಗೆ ಇನ್ನು ಉತ್ತರ ಸಿಗಬೇಕಿದೆ. ಈ ಟೆಸ್ಟ್ ಸರಣಿಯಲ್ಲಿ ಕರುಣ್ ನಾಯರ್ ಕಂ ಬ್ಯಾಕ್ ಮಾಡುವುದು ಪಕ್ಕಾ ಆಗಿದೆ. ಇನ್ನು ಅಭಿಮನ್ಯು ಈಶ್ವರನ್ ಹಾಗೂ ಸಾಯಿ ಸುದರ್ಶನ್ ಇಬ್ಬರಲ್ಲಿ ಒಬ್ಬರಿಗೆ ಅವಕಾಶ ಸಿಗುವ ಸಾಧ್ಯತೆ ದಟ್ಟವಾಗಿದೆ. ಇನ್ನು ಶುಭಮನ್ ಗಿಲ್, ರಿಷಭ್ ಪಂತ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಶಕ್ತಿಯಾಗಿದ್ದಾರೆ.

ಆಲ್‌ರೌಂಡರ್‌ಗಳಾಗಿ ರವೀಂದ್ರ ಜಡೇಜಾ ಸ್ಥಾನ ಪಡೆಯುವುದು ಫಿಕ್ಸ್ ಅನಿಸುತ್ತಿದೆ. ಇವರ ಜೊತೆ ಇನ್ನೊಬ್ಬ ಆಲ್‌ರೌಂಡರ್ ಯಾರು ಎಂಬ ಪ್ರಶ್ನೆ ಉದ್ಭವಿಸಿದೆ. ಈ ಒಂದು ಸ್ಥಾನಕ್ಕಾಗಿ ಮೂರು ಆಟಗಾರರು ಫೈಟ್ ನಡೆಸಲಿದ್ದಾರೆ. ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ನಿತೀಶ್ ಕುಮಾರ್ ರೆಡ್ಡಿ ಈ ಸ್ಥಾನದ ಮೇಲೆ ಕಣ್ಣು ನೆಟ್ಟಿದ್ದಾರೆ. ಇನ್ನು ವೇಗದ ಬೌಲರ್‌ಗಳಾಗಿ ಜಸ್ಪ್ರಿತ್ ಬುಮ್ರಾ ಜೊತೆ ಮೊಹಮ್ಮದ್ ಸಿರಾಜ್ ಅಂಗಳ ಪ್ರವೇಶಿಸಲಿದ್ದಾರೆ. ಮೂರನೇ ವೇಗದ ಬೌಲರ್ ಆಗಿ ಕನ್ನಡಿಗ ಪ್ರಸಿದ್ಧ ಕೃಷ್ಣಾಗೂ ಅವಕಾಶ ಸಿಗಬಹುದಾಗಿದೆ.
ಇಂಗ್ಲೆಂಡ್ ತಂಡದಲ್ಲಿ ಹೊಸಬರಿಗೆ ಮಣೆ
ಇಂಗ್ಲೆಂಡ್‌ನ ಲೀಡ್ಸ್ ಟೆಸ್ಟ್ ಪಂದ್ಯಕ್ಕಾಗಿ ಘೋಷಿಸಲಾದ ಪ್ಲೇಯಿಂಗ್ 11 ರಲ್ಲಿ ಬ್ರೈಡೆನ್ ಕಾರ್ಸ್ ಮತ್ತು ಜೋಶ್ ಟಂಗ್ ಅವರ ಹೆಸರುಗಳನ್ನು ಸಹ ಸೇರಿಸಲಾಗಿದೆ, ಇದರಲ್ಲಿ ಈ ಇಬ್ಬರೂ ವೇಗದ ಬೌಲರ್‌ಗಳು ಮೊದಲ ಬಾರಿಗೆ ಟೀಮ್ ಇಂಡಿಯಾ ವಿರುದ್ಧ ಟೆಸ್ಟ್ ಪಂದ್ಯವನ್ನು ಆಡಲಿದ್ದಾರೆ. ಇಂಗ್ಲೆಂಡ್ ಈ ಪಂದ್ಯಕ್ಕಾಗಿ ಗುರುವಾರವೇ ತಂಡವನ್ನು ಪ್ರಕಟಿಸಿದೆ.
ಪ್ರಕಟಿತ ಇಂಗ್ಲೆಂಡ್ ತಂಡ: ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ಓಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೇಮೀ ಸ್ಮಿತ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಬ್ರೈಡನ್ ಕಾರ್ಸೆ, ಜೋಶ್ ಟಂಗ್, ಶೋಯೆಬ್ ಬಶೀರ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications