2ನೇ ಟೆಸ್ಟ್, ಇಂಗ್ಲಂಡ್‌ಗೆ 317 ರನ್‌ಗಳ ಅಂತರದ ಸೋಲುಣಿಸಿದ ಟೀಮ್ ಇಂಡಿಯಾ

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯವನ್ನು ಟೀಮ್ ಇಂಡಿಯಾ ಭರ್ಜರಿಯಾಗಿ ಗೆದ್ದುಕೊಂಡಿದೆ. 317 ರನ್‌ಗಳ ಬೃಹತ್ ಅಂತರದ ಗೆಲುವನ್ನು ಸಾಧಿಸುವ ಮೂಲಕ ಟೀಮ್ ಇಂಡಿಯಾ ಟೆಸ್ಟ್ ಸರಣಿಯನ್ನು 1-1 ಅಂತರದಿಂದ ಸಮಬಲಗೊಳಿಸುವಲ್ಲಿ ಯಶಸ್ವಿಯಾಗಿದೆ.
ಎರಡನೇ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡ ಗೆಲ್ಲಲು 482 ರನ್‌ಗಳ ಬೃಹತ್ ಗುರಿಯನ್ನು ಮುಂದಿಟ್ಟಿತ್ತು. ಈ ಮೊತ್ತವನ್ನು ಬೆನ್ನಟ್ಟಿದ ಇಂಗ್ಲೆಂಡ್ ಎರಡನೇ ಇನ್ನಿಂಗ್ಸ್‌ನಲ್ಲಿ 164 ರನ್‌ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಭಾರತಕ್ಕೆ ಸುಲಭವಾಗಿ ಶರಣಾಗಿದೆ.
ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸಂಪೂರ್ಣವಾಗಿ ಆರಂಭದಿಂದಲೇ ಮೇಲುಗೈ ಸಾಧಿಸಿತ್ತು. ಕಡೇ ತನಕವೂ ಪಂದ್ಯದಲ್ಲಿನ ಹಿಡಿತವನ್ನು ಸಡಿಲಿಸದ ಕೊಹ್ಲಿ ಪಡೆ ಭರ್ಜರಿಯಾಗಿ ಗೆದ್ದು ಬೀಗಿದೆ. ಈ ಮೂಲಕ ಮೊದಲ ಟೆಸ್ಟ್ ಪಂದ್ಯದ ಸೋಲಿಗೆ ಸರಿಯಾಗಿಯೇ ತಿರುಗೇಟನ್ನು ನೀಡುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿದೆ.
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲುವ ಹುಮ್ಮಸ್ಸಿನಲ್ಲಿದೆ. ಇಂಗ್ಲೆಂಡ್ ತಂಡಕ್ಕೆ ಎರಡನೇ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ ಬೃಹತ್ ಮೊತ್ತದ ಗುರಿಯನ್ನು ಮುಂದಿಟ್ಟಿದೆ. ಜೊತೆಗೆ ಎರಡನೇ ಇನ್ನಿಂಗ್ಸನಲ್ಲಿ 3 ವಿಕೆಟ್‌ಗಳನ್ನು ಮೂರನೇ ದಿನದಂತ್ಯಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಟೀಮ್ ಇಂಡಿಯಾದ ಗೆಲುವಿಗೆ ಇನ್ನು ಕೇವಲ 7 ವಿಕೆಟ್‌ಗಳ ಅಗತ್ಯವಿದೆ. ಆದರೆ ಇಂಗ್ಲೆಂಡ್‌ಗೆ ಗೆಲ್ಲಬೇಕಾದರೆ ಅಂತಿಮ ಎರಡು ದಿನಗಳ ಆಟ ಉಳಿದಿದ್ದು ಇನ್ನು 429 ರನ್ ಗಳಿಸಬೇಕಾಗಿದೆ. ಮೊದಲ ಮೂರು ವಿಕೆಟ್ ಕಳೆದುಕೊಂಡಿರುವ ಕಾರಣ ಈಗಾಗಲೇ ಇಂಗ್ಲೆಂಡ್ ಸಂಕಷ್ಟಕ್ಕೆ ಸಿಲುಕಿದೆ.
ಸದ್ಯ ಕ್ರೀಸ್‌ನಲ್ಲಿ 19 ರನ್ ಗಳಿಸಿರುವ ಡೇನಿಯಲ್ ಲಾರೆನ್ಸ್ ಹಾಗೂ ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ 2 ರನ್ ಗಳಿಸಿ ನಾಲ್ಕನೇ ದಿನದಾಟವನ್ನು ಆರಂಭಿಸಲಿದ್ದಾರೆ. ಇಂಗ್ಲೆಂಡ್ ತಂಡಕ್ಕೆ ಈ ಜೋಡಿಯ ಜೊತೆಯಾಟ ಬಹಳ ಮುಖ್ಯವಾಗಿದೆ. ಮತ್ತೊಂದೆಡೆ ಟೀಮ್ ಇಂಡಿಯಾ ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ ವಿಕೆಟ್ ಕಿತ್ತು ಗೆಲುವನ್ನು ಸುಲಭವಾಗಿಸಿಕೊಳ್ಳುವ ಉತ್ಸಾಹದಲ್ಲಿದೆ.
ಟೀಮ್ ಇಂಡಿಯಾ ಪರವಾಗಿ ಎರಡನೇ ಇನ್ನಿಂಗ್ಸ್‌ನಲ್ಲಿ ಅಕ್ಷರ್ ಪಟೇಲ್ ಎರಡು ವಿಕೆಟ್ ಪಡೆದಿದ್ದರೆ ಆರ್ ಅಶ್ವಿನ್ ಒಂದು ವಿಕೆಟ್ ಕಬಳಿಸಿದ್ದಾರೆ.
Live ಸ್ಕೋರ್ ಪಟ್ಟಿ ಹೀಗಿದೆ:
ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕುಲದೀಪ್ ಯಾದವ್, ಇಶಾಂತ್ ಶರ್ಮಾ, ಮೊಹಮ್ಮದ್ ಸಿರಾಜ್.
ಇಂಗ್ಲೆಂಡ್ ಪ್ಲೇಯಿಂಗ್ XI: ರೋರಿ ಬರ್ನ್ಸ್, ಡೊಮಿನಿಕ್ ಸಿಬ್ಲಿ, ಡೇನಿಯಲ್ ಲಾರೆನ್ಸ್, ಜೋ ರೂಟ್ (ನಾಯಕ), ಬೆನ್ ಸ್ಟೋಕ್ಸ್, ಆಲ್ಲಿ ಪೋಪ್, ಬೆನ್ ಫೋಕ್ಸ್ (ವಿಕೆಟ್ ಕೀಪರ್), ಮೊಯೀನ್ ಅಲಿ, ಸ್ಟುವರ್ಟ್ ಬ್ರಾಡ್, ಜ್ಯಾಕ್ ಲೀಚ್, ಆಲಿ ಸ್ಟೋನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications