For Quick Alerts
ALLOW NOTIFICATIONS  
For Daily Alerts
 

ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾಗೆ 317 ರನ್‌ಗಳ ಅಂತರದ ಭರ್ಜರಿ ಗೆಲುವು

India vs England 2021, India win by 317 runs against England

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯವನ್ನು ಟೀಮ್ ಇಂಡಿಯಾ ಭರ್ಜರಿಯಾಗಿ ಗೆದ್ದುಕೊಂಡಿದೆ. 317 ರನ್‌ಗಳ ಬೃಹತ್ ಅಂತರದ ಗೆಲುವನ್ನು ಸಾಧಿಸುವ ಮೂಲಕ ಟೀಮ್ ಇಂಡಿಯಾ ಟೆಸ್ಟ್ ಸರಣಿಯನ್ನು 1-1 ಅಂತರದಿಂದ ಸಮಬಲಗೊಳಿಸುವಲ್ಲಿ ಯಶಸ್ವಿಯಾಗಿದೆ.

ಎರಡನೇ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡ ಗೆಲ್ಲಲು 482 ರನ್‌ಗಳ ಬೃಹತ್ ಗುರಿಯನ್ನು ಮುಂದಿಟ್ಟಿತ್ತು. ಈ ಮೊತ್ತವನ್ನು ಬೆನ್ನಟ್ಟಿದ ಇಂಗ್ಲೆಂಡ್ ಎರಡನೇ ಇನ್ನಿಂಗ್ಸ್‌ನಲ್ಲಿ 164 ರನ್‌ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಭಾರತಕ್ಕೆ ಸುಲಭವಾಗಿ ಶರಣಾಗಿದೆ.

ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸಂಪೂರ್ಣವಾಗಿ ಆರಂಭದಿಂದಲೇ ಮೇಲುಗೈ ಸಾಧಿಸಿತ್ತು. ಕಡೇ ತನಕವೂ ಪಂದ್ಯದಲ್ಲಿನ ಹಿಡಿತವನ್ನು ಸಡಿಲಿಸದ ಕೊಹ್ಲಿ ಪಡೆ ಭರ್ಜರಿಯಾಗಿ ಗೆದ್ದು ಬೀಗಿದೆ. ಈ ಮೂಲಕ ಮೊದಲ ಟೆಸ್ಟ್ ಪಂದ್ಯದ ಸೋಲಿಗೆ ಸರಿಯಾಗಿಯೇ ತಿರುಗೇಟನ್ನು ನೀಡುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿದೆ.

ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರವಾಗಿ ಆರ್ ಅಶ್ವಿನ್ ಆಲ್‌ರೌಂಡರ್ ಪ್ರದರ್ಶನ ನೀಡಿ ಮಿಂಚಿದರು. ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಅಶ್ವಿನ್ ಶ್ರೇಷ್ಠ ಪ್ರದರ್ಶನ ನೀಡಿದರು. ಮೊದಲ ಇನ್ನಿಂಗ್ಸ್‌ನಲ್ಲಿ ಬೌಲಿಂಗ್ ವೇಳೆ 5 ವಿಕೆಟ್‌ಗಳ ಗೊಂಚಲು ಪಡೆದ ಅಶ್ವಿನ್ ಎರಡನೇ ಇನ್ನಿಂಗ್ಸ್‌ನ ಬ್ಯಾಟಿಂಗ್ ವೇಳೆ ಶತಕವನ್ನು ಸಿಡಿಸಿದರು. ಬೌಲಿಂಗ್ ಎರಡನೇ ಇನ್ನಿಂಗ್ಸ್‌ನ ಬೌಲಿಂಗ್‌ನಲ್ಲಿಯೂ ಮೂರು ವಿಕೆಟ್ ಕಬಳಿಸಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡಿತ್ತು. ರೊಹಿತ್ ಶರ್ಮಾ ಸಿಡಿಸಿದ ಭರ್ಜರಿ ಶತಕ 161 ರನ್ ಹಾಗೂ ಅಜಿಂಕ್ಯ ರಹಾನೆ ಮತ್ತು ರಿಷಬ್ ಪಂತ್ ಅರ್ಧ ಶತಕದ ನೆರವಿನಿಂದ 329 ರನ್‌ಗಳನ್ನು ಗಳಿಸಿತ್ತು. ಇದಕ್ಕೆ ಪ್ರತಿಯಾಗಿ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ ಗಳಿಸಿದ್ದು ಕೇವಲ 134 ರನ್ ಮಾತ್ರ. ನಂತರ ಬ್ಯಾಟಿಂಗ್ ನಡೆಸಿದ ಭಾರತ ಅಶ್ವಿನ್ ಶತಕದ ಸಹಾಯದಿಂದ 286 ರನ್ ಗಳಿಸಿತ್ತು.

ಈ ಮೂಲಕ ಟೀಮ್ ಇಂಡಿಯಾ 482 ರನ್‌ಗಳ ಬೃಹತ್ ಗುರಿಯನ್ನು ಇಂಗ್ಲೆಂಡ್ ಮುಂದಿಟ್ಟಿತ್ತು. ಆದರೆ ಈ ಬೃಹತ್ ಮೊತ್ತವನ್ನು ಬೆನ್ನಟ್ಟುವ ಯಾವ ಉತ್ಸಾಹವನ್ನೂ ಇಂಗ್ಲೆಂಡ್ ತೋರಿಸಲು ಶಕ್ತವಾಗಿಲ್ಲ. ಅಕ್ಷರ್ ಪಟೇಲ್ ಹಾಗೂ ಆರ್ ಅಶ್ವಿನ್ ದಾಳಿಯಿಂದ ಕುಸಿದ ಇಂಗ್ಲೆಂಡ್ 164 ರನ್‌ಗಳಿಗೆ ಆಲೌಡ್ ಆಗಿ ಎರಡನೇ ಪಂದ್ಯದಲ್ಲಿ ದೊಡ್ಡ ಅಂತರದ ಸೋಲು ಕಂಡಿದೆ.

Story first published: Tuesday, February 16, 2021, 13:10 [IST]
Other articles published on Feb 16, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+