ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಇಂಗ್ಲೆಂಡ್ vs ಭಾರತ: ಎರಡನೇ ಟೆಸ್ಟ್‌ಗೆ ಆನ್‌ಲೈನ್ ಟಿಕೆಟ್ ಮಾರಾಟ ಆರಂಭ

India vs England 2021: Online ticket sales for second Test to begin from February 8

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ನಡೆಯುತ್ತಿದೆ. ಈ ಮಧ್ಯೆ ಎರಡನೇ ಪಂದ್ಯವೂ ಈಗ ನಡೆಯುತ್ತಿರುವ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿಯೇ ನಡೆಯಲಿದೆ. ಆದರೆ ಎರಡನೇ ಪಂದ್ಯ ಪ್ರೇಕ್ಷಕರ ಸಮ್ಮುಖದಲ್ಲಿ ನಡೆಯಲಿದ್ದು ಅದಕ್ಕೆ ಬೇಕಾದ ಸಿದ್ಧತೆಗಳನ್ನು ತಮಿಳುನಾಡು ಕ್ರಿಕೆಟ್ ಅಸೊಸಿಯೇಶನ್(ಟಿಎನ್‌ಸಿಎ) ನಡೆಸಿದೆ.

ಎರಡನೇ ಟೆಸ್ಟ್ ಪಂದ್ಯದಲ್ಲೇ ಕ್ರೀಡಾಂಗಣದ ಸಾಮರ್ಥ್ಯದ ಅರ್ಧದಷ್ಟು ಪ್ರೇಕ್ಷಕರಿಗೆ ಕ್ರೀಡಾಂಗಣದಲ್ಲಿ ಪಂದ್ಯವನ್ನು ವೀಕ್ಷಿಸಲು ಅನುಮತಿ ದೊರೆತಿದೆ. ಹೀಗಾಗಿ ತಮಿಳುನಾಡು ಕ್ರಿಕೆಟ್ ಅಸೊಸಿಯೇಶನ್ ಫೆಬ್ರವರಿ 8 ರಿಂದ ಎರಡನೇ ಟೆಸ್ಟ್ ಪಂದ್ಯಕ್ಕೆ ಆಗಮಿಸುವ ಪ್ರೇಕ್ಷಕರಿಗೆ ಆನ್‌ಲೈನ್‌ನಲ್ಲಿ ಟಿಕೆಟ್ ಮಾರಾಟ ಮಾಡಲು ಆರಂಭಿಸಿದೆ.

ಡೊಮಿನಿಕ್ ಬೆಸ್ ಮೇಲೆರಗಿದ ಜಾಹೀರಾತು ಬೋರ್ಡ್: ವಿಡಿಯೋಡೊಮಿನಿಕ್ ಬೆಸ್ ಮೇಲೆರಗಿದ ಜಾಹೀರಾತು ಬೋರ್ಡ್: ವಿಡಿಯೋ

ಟಿಎನ್‌ಸಿಎನ ಆಡಳಿತ ಮಂಡಳಿ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿದೆ. ಜೊತೆಗೆ ಈ ಟಿಕೆಟ್‌ಗಳನ್ನು ಕೇವಲ ಆನ್‌ಲೈನ್ ಮೂಲಕ ಮಾತ್ರವೇ ಮಾರಾಟ ಮಾಡಲಾಗುತ್ತಿದೆ ಎಂದು ಸ್ಪಷ್ಟವಾಗಿ ತಿಳಿಸಿದೆ. ಜೊತೆಗೆ ಯಾವೆಲ್ಲಾ ಆನ್‌ಲೈನ್ ಆ್ಯಪ್‌ಗಳ ಮೂಲಕ ಟಿಕೆಟ್ ಪಡೆಯಬಹುದು ಎಂಬುದನ್ನು ಕೂಡ ತಿಳಿಸಿದೆ.

ಕೊರೊನಾ ವೈರಸ್‌ನ ಬಳಿಕ ಭಾರತದಲ್ಲಿ ನಡೆಯುತ್ತಿರುವ ಮೊದಲ ಕ್ರಿಕೆಟ್ ಸರಣಿ ಇದಾಗಿದೆ. ಪ್ರೇಕ್ಷಕರಿಗೆ ನಿರ್ಬಂಧವಿದ್ದ ಕಾರಣ ಮೊದಲ ಟೆಸ್ಟ್ ಪಂದ್ಯವನ್ನು ಖಾಲಿ ಮೈದಾನದಲ್ಲಿ ಆಡಿಸಲಾಗುತ್ತಿದೆ. ಆದರೆ ಕೇಂದ್ರ ಸರ್ಕಾರ ಇತ್ತೀಚೆಗೆ ಬಿಡುಗಡೆಗೊಳಿಸಿದ ಹೊಸ ಮಾರ್ಗಸೂಚಿಯಲ್ಲಿ ಅರ್ಧದಷ್ಟು ಪ್ರೇಕ್ಷಕರು ಸೇರಲು ಅವಕಾಶವನ್ನು ನೀಡಲಾಗಿತ್ತು. ಹೀಗಾಗಿ ಎರಡನೇ ಟೆಸ್ಟ್ ಪಂದ್ಯ ಪ್ರೇಕ್ಷಕರ ಸಮ್ಮುಖದಲ್ಲಿ ನಡೆಯಲಿದೆ.

ಮೊಹಮ್ಮದ್ ಸಿರಾಜ್ ಕುಲದೀಪ್ ಯಾದವ್ ಕುತ್ತಿಗೆ ಹಿಡಿದಿದ್ದೇಕೆ?: ವಿಡಿಯೋಮೊಹಮ್ಮದ್ ಸಿರಾಜ್ ಕುಲದೀಪ್ ಯಾದವ್ ಕುತ್ತಿಗೆ ಹಿಡಿದಿದ್ದೇಕೆ?: ವಿಡಿಯೋ

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯ ಜನವರಿ 9ರಂದು ಅಂತ್ಯವಾಗಲಿದ್ದು ಫೆಬ್ರವರಿ 13ರಿಂದ 17ರವರೆಗೆ ಎರಡನೇ ಟೆಸ್ಟ್ ಪಂದ್ಯ ನಡೆಯಲಿದೆ. ಟೆಸ್ಟ್ ಸರಣಿಯ ಮೂರನೇ ಹಾಗೂ ನಾಲ್ಕನೇ ಪಂದ್ಯಗಳು ಅಹ್ಮದಾಬಾದ್‌ನಲ್ಲಿ ಹೊಸದಾಗಿ ನಿರ್ಮಾಣವಾಗಿರುವ ಮೊಟೆರಾ ಕ್ರೀಡಾಂಗಣದಲ್ಲಿ ನಡೆಯಲಿದೆ.

Story first published: Monday, February 8, 2021, 16:38 [IST]
Other articles published on Feb 8, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X