ಭಾರತ vs ಇಂಗ್ಲೆಂಡ್: 2ನೇ ಟೆಸ್ಟ್‌ನ ಎರಡನೇ ದಿನ, Live ಸ್ಕೋರ್: ಸ್ಪಿನ್ ದಾಳಿಗೆ ಇಂಗ್ಲೆಂಡ್ ತತ್ತರ

ಭಾರತದ ವಿರುದ್ಧದ ಎರಡನೇ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ವಿಕೆಟ್ ಉಳಿಸಿಕೊಳ್ಳಲು ಪರದಾಡುತ್ತಿದೆ. ಟೀಮ್ ಇಂಡಿಯಾದ ಸ್ಪಿನ್ ಬೌಲಿಂಗ್ ದಾಳಿಗೆ ಇಂಗ್ಲೆಂಡ್ ಆಟಗಾರರು ಫೆವಿಲಿಯನ್ ಪೆರೇಡ್ ನಡೆಸಿದ್ದಾರೆ. ಇಂಗ್ಲೆಂಡ್ ತಂಡದ ಐವರು ಬ್ಯಾಟ್ಸ್‌ಮನ್‌ಗಳು ಈಗಾಗಲೇ ಫೆವಿಲಿಯನ್ ಸೇರಿಕೊಂಡಿದ್ದಾರೆ.
ಇದಕ್ಕೂ ಮುನ್ನ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್‌ನ ಎರಡನೇ ದಿನದಾಟದ ಮೊದಲ ಸೆಶನ್‌ನಲ್ಲಿ ಟೀಮ್ ಇಂಡಿಯಾ ಆಲೌಟ್ ಆಗಿದೆ. 329 ರನ್‌ಗಳಿಸಿದ ಟೀಮ್ ಇಂಡಿಯಾ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ಟೀಮ್ ಇಂಡಿಯಾ ಪರವಾಗಿ ರಿಷಬ್ ಪಂತ್ 58 ರನ್‌ಗಿಸಿ ಅಜೇಯವಾಗುಳಿದರು.
ಮೊದಲ ದಿನದಾಟದಲ್ಲಿ ಟೀಮ್ ಇಂಡಿಯಾ ಉತ್ತಮ ಪ್ರದರ್ಶವನ್ನು ನೀಡಿದ್ದು ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದೆ. ಟೀಮ್ ಇಂಡಿಯಾ ಮೊದಲ ದಿನದಾಟದಲ್ಲಿ ಭರ್ತಿ 300 ರನ್ ಗಳಿಸಿ 6 ವಿಕೆಟ್ ಕಳೆದುಕೊಂಡಿತ್ತು. ಇಂದು ಕ್ರೀಸ್‌ನಲ್ಲಿ ರಿಷಭ್ ಪಂತ್ ಹಾಗೂ ಅಕ್ಷರ್ ಪಟೇಲ್ ಬ್ಯಾಟಿಂಗ್ ಆರಂಭಿಸಿದರು. ಆದರೆ ಅಕ್ಷರ್ ಪಟೇಲ್ ಆರಂಭದಲ್ಲೇ ವಿಕೆಟ್ ಒಪ್ಪಿಸಿದರು. ಬಳಿಕ ಇಶಾಂತ್ ಶರ್ಮಾ, ಕುಲ್‌ದೀಪ್ ಯಾದವ್ ಹಾಗೂ ಮೊಹಮ್ಮದ್ ಸಿರಾಜ್ ಕೂಡ ವಿಕೆಟ್ ಕಳೆದುಕೊಂಡರು.
ಟೀಮ್ ಇಂಡಿಯಾ ಪರವಾಗಿ ಮೊದಲ ದಿನದಾಟದಲ್ಲಿ ರೋಹಿತ್ ಶರ್ಮಾ ಭರ್ಜರಿ ಶತಕ ಬಾರಿಸಿ ಮಿಂಚಿದ್ದಾರೆ. ಈ ಮೂಲಕ 231 ಎಸೆತಗಳನ್ನು ಎದುರಿಸಿದ ರೋಹಿತ್ ಶರ್ಮಾ 161 ರನ್ ಬಾರಿಸಿದ್ದಾರೆ. ಉಪನಾಯಕ ಅಜಿಂಕ್ಯ ರಹಾನೆ ಕೂಡ ಉತ್ತಮ ಆಟವನ್ನು ಪ್ರದರ್ಶಿಸಿದ್ದು 67 ರನ್‌ಗಳ ಕೊಡುಗೆಯನ್ನು ನೀಡಿದ್ದಾರೆ.
ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದ ಪಿಚ್ ಮೊದಲ ದಿನದಿಂದಲೇ ಸ್ಪಿನ್ನರ್‌ಗಳಿಗೆ ಹೆಚ್ಚು ಪೂರಕವಾಗಿರುವಂತೆ ಕಂಡು ಬಂದಿದೆ. ಮೊದಲ ದಿನದಾಟದಲ್ಲೇ ಸಾಕಷ್ಟು ತಿರುವುಗಳನ್ನು ಪಡೆಯುವ ಮೂಲಕ ಬ್ಯಾಟ್ಸ್‌ಮನ್‌ಗಳಿಗೆ ಕಂಟಕವಾಗಿದೆ. ಆದರೆ ಇದರ ಮಧ್ಯೆಯೂ ಟೀಮ್ ಇಂಡಿಯಾ ಉತ್ತಮ ಆಟವನ್ನು ಪ್ರದರ್ಶಿಸಿದೆ.
Live ಸ್ಕೋರ್ ಪಟ್ಟಿ ಹೀಗಿದೆ:
ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕುಲದೀಪ್ ಯಾದವ್, ಇಶಾಂತ್ ಶರ್ಮಾ, ಮೊಹಮ್ಮದ್ ಸಿರಾಜ್.
ಇಂಗ್ಲೆಂಡ್ ಪ್ಲೇಯಿಂಗ್ XI: ರೋರಿ ಬರ್ನ್ಸ್, ಡೊಮಿನಿಕ್ ಸಿಬ್ಲಿ, ಡೇನಿಯಲ್ ಲಾರೆನ್ಸ್, ಜೋ ರೂಟ್ (ನಾಯಕ), ಬೆನ್ ಸ್ಟೋಕ್ಸ್, ಆಲ್ಲಿ ಪೋಪ್, ಬೆನ್ ಫೋಕ್ಸ್ (ವಿಕೆಟ್ ಕೀಪರ್), ಮೊಯೀನ್ ಅಲಿ, ಸ್ಟುವರ್ಟ್ ಬ್ರಾಡ್, ಜ್ಯಾಕ್ ಲೀಚ್, ಆಲಿ ಸ್ಟೋನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications