Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ಇಂಗ್ಲೆಂಡ್: ಅಶ್ವಿನ್ ಭರ್ಜರಿ ಶತಕ, ಇಂಗ್ಲೆಂಡ್‌ಗೆ ಗೆಲ್ಲಲು 482 ರನ್‌ಗಳ ಬೃಹತ್ ಗುರಿ: Live ಸ್ಕೋರ್

India vs England 2021, test series 2nd match, day 3 Live score

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಬೃಹತ್ ಮೊತ್ತದ ಗುರಿಯನ್ನು ಪ್ರವಾಸಿಗರ ಮುಂದಿಟ್ಟಿದೆ. ಆರ್ ಅಶ್ವಿನ್ ಭರ್ಜರಿ ಶತಕ ಹಾಗೂ ವಿರಾಟ್ ಕೊಹ್ಲಿ ಸಿಡಿಸಿದ ಅರ್ಧ ಶತಕದ ನೆರವಿನಿಂದ ಟೀಮ್ ಇಂಡಿಯಾ ಎರಡನೇ ಇನ್ನಿಂಗ್ಸ್‌ನಲ್ಲಿ 286 ರನ್‌ಗಳನ್ನು ಪೆರಿಸಿ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ 481 ರನ್‌ಗಳ ಬೃಹತ್ ಮುನ್ನಡೆಯನ್ನು ಪಡೆದುಕೊಂಡಿದೆ.

ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಬಿಗಿ ಹಿಡಿತವನ್ನು ಸಾಧಿಸಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ 329 ರನ್ ಗಳಿಸಿದ ನಂತರ ಬ್ಯಾಟಿಂಗ್‌ಗೆ ಇಳಿದ ಇಂಗ್ಲೆಂಡ್ ಕೇವಲ 134 ರನ್ ಮಾತ್ರವೇ ಗಳಿಸಿ ಆಲೌಟ್ ಆಯಿತು. ಈ ಮೂಲಕ ಟೀಮ್ ಇಂಡಿಯಾಗೆ ಮೊದಲ ಇನ್ನಿಂಗ್ಸ್‌ನಲ್ಲಿ 195 ರನ್‌ಗಳ ಮುನ್ನಡೆಯನ್ನು ನೀಡಿತ್ತು.

ಭಾರತ ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮುಂದುವರಿಸಿದ್ದು 54 ರನ್‌ಗಳಿಗೆ 1 ವಿಕೆಟ್ ಕಳೆದುಕೊಂಡಿದೆ. ಅನುಭವಿ ಆಟಗಾರ ರೋಹಿತ್ ಶರ್ಮಾ ಜೊತೆಗೆ ಚೇತೇಶ್ವರ್ ಪೂಜಾರ ಮೂರನೇ ದಿನಕ್ಕೆ ಆಟವನ್ನು ಕಾಯ್ದುಕೊಂಡಿದ್ದಾರೆ. ಭಾರತ ಇಂಗ್ಲೆಂಡ್‌ಗೆ ಕಠಿಣ ಗುರಿ ನಿಗದಿಪಡಿಸುವ ಗುರಿಯಿಟ್ಟುಕೊಂಡಿದೆ.

Live ಸ್ಕೋರ್ ಪಟ್ಟಿ ಹೀಗಿದೆ:

ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕುಲದೀಪ್ ಯಾದವ್, ಇಶಾಂತ್ ಶರ್ಮಾ, ಮೊಹಮ್ಮದ್ ಸಿರಾಜ್.

ಇಂಗ್ಲೆಂಡ್ ಪ್ಲೇಯಿಂಗ್ XI: ರೋರಿ ಬರ್ನ್ಸ್, ಡೊಮಿನಿಕ್ ಸಿಬ್ಲಿ, ಡೇನಿಯಲ್ ಲಾರೆನ್ಸ್, ಜೋ ರೂಟ್ (ನಾಯಕ), ಬೆನ್ ಸ್ಟೋಕ್ಸ್, ಆಲ್ಲಿ ಪೋಪ್, ಬೆನ್ ಫೋಕ್ಸ್ (ವಿಕೆಟ್ ಕೀಪರ್), ಮೊಯೀನ್ ಅಲಿ, ಸ್ಟುವರ್ಟ್ ಬ್ರಾಡ್, ಜ್ಯಾಕ್ ಲೀಚ್, ಆಲಿ ಸ್ಟೋನ್.

Story first published: Monday, February 15, 2021, 16:03 [IST]
Other articles published on Feb 15, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+