ಭಾರತ vs ಇಂಗ್ಲೆಂಡ್, 2ನೇ ಏಕದಿನ :ಬೃಹತ್ ಮೊತ್ತ ಬೆನ್ನಟ್ಟಿ ಗೆದ್ದು ಸರಣಿ ಸಮಬಲಗೊಳಿಸಿದ ಇಂಗ್ಲೆಂಡ್

ಪೂಣೆ: ಭಾರತದ ವಿರುದ್ಧದ ಏಕದಿನ ಸರಣಿಯ ಎರಡನೇ ಪಂದ್ಯವನ್ನು ಇಂಗ್ಲೆಂಡ್ ಸುಲಭವಾಗಿ ಗೆದ್ದುಕೊಂಡಿದೆ. ಭಾರತ ನೀಡಿದ ಬೃಹತ್ ಮೊತ್ತವನ್ನು ಸಮರ್ಥವಾಗಿ ಬೆನ್ನಟ್ಟಿದ ಇಂಗ್ಲೆಂಡ್ ಇನ್ನೂ ಓವರ್‌ಗಳು ಇರುವಂತೆಯೇ ಗೆದ್ದು ಸರಣಿಯನ್ನು 1-1 ಅಂತರದಿಂದ ಸಮಬಲಗೊಳಿಸುವಲ್ಲಿ ಯಶಸ್ವಿಯಾಗಿದೆ.
ಭಾರತ ಮತ್ತು ಇಂಗ್ಲೆಂಡ್ ಮಧ್ಯೆ ಇಂದು ದ್ವಿತೀಯ ಏಕದಿನ ಪಂದ್ಯ ನಡೆಯುತ್ತಿದೆ. ಪೂಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಸ್ಟೇಡಿಯಂನಲ್ಲಿ ಇತ್ತಂಡಗಳು ಪಂದ್ಯಕ್ಕಿಳಿದಿವೆ. ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಈಗಾಗಲೇ ಭಾರತ 1-0ಯ ಮುನ್ನಡೆಯಲ್ಲಿದೆ. ಇಂದಿನ ಪಂದ್ಯದಲ್ಲೂ ಭಾರತ ಗೆದ್ದರೆ ಸರಣಿ ಭಾರತೀಯರ ವಶವಾಗಲಿದೆ. ಭಾರತ ತಂಡಕ್ಕೆ ಕೆಎಲ್ ರಾಹುಲ್ ಶತಕ, ರಿಷಭ್ ಪಂತ್ ಅರ್ಧಶತಕದ ಕೊಡುಗೆ ಲಭಿಸಿದೆ.
ಇಂದಿನ ಪಂದ್ಯದಲ್ಲಿ ಭಾರತದ ಪ್ಲೇಯಿಂಗ್ XIನಿಂದ ಶ್ರೇಯಸ್ ಐಯ್ಯರ್ ಕಾಣಿಸಿಕೊಂಡಿಲ್ಲ. ಆಂಗ್ಲ ನಾಯಕ ಇಯಾನ್ ಮಾರ್ಗನ್ ಕೂಡ ಇವತ್ತು ಆಡುತ್ತಿಲ್ಲ. ಇಬ್ಬರೂ ಗಾಯಗೊಂಡು ಪಂದ್ಯದಿಂದ ಹೊರ ಬಿದ್ದಿದ್ದಾರೆ. ಮಾರ್ಗನ್ ಅನುಪಸ್ಥಿತಿಯಲ್ಲಿ ಅನುಭವಿ ಜೋಸ್ ಬಟ್ಲರ್ ಇಂಗ್ಲೆಂಡ್ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ.
ಭಾರತ vs ಇಂಗ್ಲೆಂಡ್, 2ನೇ ಏಕದಿನ ಪಂದ್ಯ, Live ಸ್ಕೋರ್‌ಕಾರ್ಡ್

ಪ್ರಮುಖ ಬದಲಾವಣೆಗಳು
ಭಾರತ ತಂಡದಲ್ಲಿ ಶ್ರೇಯಸ್ ಐಯ್ಯರ್ ಬದಲು ಯುವ ಬ್ಯಾಟ್ಸ್‌ಮನ್, ವಿಕೆಟ್ ಕೀಪರ್ ರಿಷಭ್ ಪಂತ್ ಮತ್ತೆ ಕಾಣಿಸಿಕೊಂಡಿದ್ದಾರೆ. ಕೀಪಿಂಗ್ ಜವಾಬ್ದಾರಿ ಪಂತ್ ಹೆಗಲಮೇಲಿದೆ. ಇಂಗ್ಲೆಂಡ್ ತಂಡದಲ್ಲಿ ಲಿಯಾಮ್ ಲಿವಿಂಗ್ಸ್ಟೋನ್ ಮತ್ತು ಮಾರ್ಕ್‌ವುಡ್ ಬದಲಿಗೆ ರೀಸ್ ಟೋಪ್ಲೆ ಇವತ್ತು ಆಡುತ್ತಿದ್ದಾರೆ.

ಇಂಗ್ಲೆಂಡ್ ಪ್ಲೇಯಿಂಗ್ XI
ಜೇಸನ್ ರಾಯ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್, ಡೇವಿಡ್ ಮಲನ್, ಜೋಸ್ ಬಟ್ಲರ್ (ವಿಕೆಟ್ ಕೀಪರ್/ಸಿ), ಲಿಯಾಮ್ ಲಿವಿಂಗ್‌ಸ್ಟೋನ್, ಮೊಯೀನ್ ಅಲಿ, ಸ್ಯಾಮ್ ಕರನ್, ಟಾಮ್ ಕರನ್, ಆದಿಲ್ ರಶೀದ್, ರೀಸ್ ಟೋಪ್ಲಿ.

ಭಾರತ ಪ್ಲೇಯಿಂಗ್ XI
ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ (ಸಿ), ಕೆ.ಎಲ್.ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ಶಾರ್ದೂಲ್ ಠಾಕೂರ್, ಭುವನೇಶ್ವರ್ ಕುಮಾರ್, ಕುಲದೀಪ್ ಯಾದವ್, ಪ್ರಸಿದ್ಧ್ ಕೃಷ್ಣ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications