ಭಾರತ vs ಇಂಗ್ಲೆಂಡ್: ಏಕದಿನ ಸರಣಿ ಗೆಲುವಿನತ್ತ ಭಾರತದ ಚಿತ್ತ

ಪೂಣೆ: ಪೂಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಸ್ಟೇಡಿಯಂನಲ್ಲಿ ಮಾರ್ಚ್ 26ರ ಶುಕ್ರವಾರ ಭಾರತ ಮತ್ತು ಇಂಗ್ಲೆಂಡ್ ತಂಡಗಳು ದ್ವಿತೀಯ ಏಕದಿನ ಪಂದ್ಯ ಆಡಲಿವೆ. ಮೂರು ಪಂದ್ಯಗಳ ಸರಣಿಯಲ್ಲಿ ಈಗಾಗಲೇ ಭಾರತ 1-0ಯ ಮುನ್ನಡೆಯಲ್ಲಿದ್ದು, ಸರಣಿ ಜಯಕ್ಕೆ ಇನ್ನೊಂದೇ ಗೆಲುವು ಅಗತ್ಯವಿದೆ.
ಭಾರತಕ್ಕೆ ಪ್ರವಾಸ ಬಂದಿರುವ ಇಂಗ್ಲೆಂಡ್ ಕ್ರಿಕೆಟ್ ತಂಡ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-1, 5 ಪಂದ್ಯಗಳ ಟಿ20ಐ ಸರಣಿಯಲ್ಲಿ 3-1ಯ ಜಯ ದಾಖಲಿಸಿದೆ. ಏಕದಿನ ಸರಣಿಯೂ ಗೆದ್ದರೆ ಇಂಗ್ಲೆಂಡ್ ತೀವ್ರ ಮುಖಭಂಗಕ್ಕೀಡಾಗಲಿದೆ. ತವರು ನೆಲದಲ್ಲಿ ವಿರಾಟ್ ಕೊಹ್ಲಿ ಪಡೆ ಬಲಿಷ್ಠ ತಂಡವಾಗಿ ಕಾಣಿಸುತ್ತಿರೋದು ಇಲ್ಲಿನ ಕ್ರಿಕೆಟ್ ಅಭಿಮಾನಿಗಳಿಗೂ ಖುಷಿಯ ವಿಚಾರವೇ.
ಇಂದಿನ ಪಂದ್ಯದಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಶ್ರೇಯಸ್ ಐಯ್ಯರ್ ಆಡುತ್ತಿಲ್ಲ. ಗಾಯಗೊಂಡಿರುವ ಅಯ್ಯರ್ ತಂಡದಿಂದ ಹೊರ ಬಿದ್ದಿದ್ದಾರೆ. ಇಂದಿನ ಪಂದ್ಯದ ಮೂಲಕ ಸೂರ್ಯಕುಮಾರ್ ಯಾದವ್ ಏಕದಿನಕ್ಕೆ ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ. ಇಂಗ್ಲೆಂಡ್ ತಂಡದಲ್ಲಿ ನಾಯಕ ಇಯಾನ್ ಮಾರ್ಗನ್ ಆಡುತ್ತಿಲ್ಲ.
ಹಿಂದಿನ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಎಂಟ್ರಿ ಕೊಟ್ಟಿದ್ದ ಕನ್ನಡಿಗ ಪ್ರಸಿದ್ಧ್ ಕೃಷ್ಣ ಉತ್ತಮ ಪ್ರದರ್ಶನ ನೀಡಿದ್ದರು. ಇಂದಿನ ಪಂದ್ಯದಲ್ಲೂ ಕೃಷ್ಣ ಮಿಂಚುವ ನಿರೀಕ್ಷೆಯಿದೆ. ಬೌಲರ್‌ಗಳಲ್ಲಿ ಯುಜುವೇಂದ್ರ ಚಾಹಲ್, ಶಾರ್ದೂಲ್ ಠಾಕೂರ್ ತಂಡದಲ್ಲಿ ಆಡುವ ಸಾಧ್ಯತೆಯಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications