IND vs ENG 2ನೇ ಟಿ20: ಮತ್ತೆ ವಿಫಲವಾದ ವಿರಾಟ್ ಕೊಹ್ಲಿ; 171 ರನ್ ಗುರಿ ನೀಡಿದ ಭಾರತ

3 ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ್ದ ಭಾರತ, ಇಂದು (ಶನಿವಾರ, ಜುಲೈ 9) ಎಡ್ಜ್‌ಬಾಸ್ಟನ್‌ನಲ್ಲಿ 2ನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಿದ್ದು, ಆತಿಥೇಯ ತಂಡಕ್ಕೆ ಉತ್ತಮ ಮೊತ್ತದ ಗುರಿ ನೀಡಿದೆ.
ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್ ಸ್ಟೇಡಿಯಂನಲ್ಲಿ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಸೋತು, ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಿಗದಿತ 20 ಓವರ್‌ಗಳಲ್ಲಿ ವಿಕೆಟ್ 8 ನಷ್ಟಕ್ಕೆ 170 ರನ್ ಗಳಿಸಿತು. ಇಂಗ್ಲೆಂಡ್ ಗೆಲ್ಲಲು 171 ರನ್‌ಗಳ ಗುರಿ ನೀಡಿದೆ.
ಭಾರತದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ನಾಯಕ ರೋಹಿತ್ ಶರ್ಮಾ ಮತ್ತು ರಿಷಭ್ ಪಂತ್ ಉತ್ತಮ ಆರಂಭ ಒದಗಿಸಿದರು. ರೋಹಿತ್ ಶರ್ಮಾ ಔಟ್ ಆಗುವ ಮೊದಲು 4.5 ಓವರ್‌ಗಳಲ್ಲಿ 49 ರನ್ ಗಳಿಸಿ ಉತ್ತಮ ಸ್ಥಿತಿಯಲ್ಲಿತ್ತು. ಈ ವೇಳೆ ರಿಚರ್ಡ್ ಗ್ಲೆಸನ್ ಬೌಲಿಂಗ್‌ನಲ್ಲಿ ರೋಹಿತ್ ಶರ್ಮಾ 31 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

ನಂತರ ಬಂದ ಅನುಭವಿ ವಿರಾಟ್ ಕೊಹ್ಲಿ ಮತ್ತೊಮ್ಮೆ ನಿರಾಸೆ ಮೂಡಿಸಿದರು. ತಾವು ಎದುರಿಸಿದ ಎರಡನೇ ಎಸೆತದಲ್ಲಿ ರಿಚರ್ಡ್ ಗ್ಲೆಸನ್ ಬೌಲಿಂಗ್‌ನಲ್ಲಿ ಡೇವಿಡ್ ಮಲಾನ್‌ಗೆ ಕ್ಯಾಚ್ ನೀಡಿ ಔಟಾದರು. ಇನ್ನು 15 ಎಸೆತಗಳಲ್ಲಿ 26 ರನ್ ಗಳಿಸಿ ಉತ್ತಮವಾಗಿ ಆಡುತ್ತಿದ್ದ ರಿಷಭ್ ಪಂತ್ ಮುಂದಿನ ಎಸೆತದಲ್ಲಿಯೇ ಕೀಪರ್‌ಗೆ ಕ್ಯಾಚ್ ನೀಡಿ ಹೊರನಡೆದರು.
ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ (15) ವಿಫಲರಾದರೆ, ಕಳೆದ ಪಂದ್ಯದಲ್ಲಿ ಅರ್ಧ ಶತಕ ಬಾರಿಸಿದ್ದ ಹಾರ್ದಿಕ್ ಪಾಂಡ್ಯ 12 ರನ್ ಗಳಿಸಿ ನಿರಾಸೆ ಮೂಡಿಸಿದರು. ಆಲ್‌ರೌಂಡರ್ ರವೀಂದ್ರ ಜಡೇಜಾ 29 ಎಸೆತಗಳಲ್ಲಿ 46 ರನ್ ಗಳಿಸಿ ತಂಡಕ್ಕೆ ರನ್ ಕೊಡುಗೆ ನೀಡಿದರು. ಕೊನೆಯಲ್ಲಿ ದಿನೇಶ್ ಕಾರ್ತಿಕ್ 12 ರನ್ ಮತ್ತು ಹರ್ಷಲ್ ಪಟೇಲ್ 13 ರನ್ ಗಳಿಸಿ ಔಟಾದರು.

ಇನ್ನು ಇಂಗ್ಲೆಂಡ್ ಪರ ಬೌಲಿಂಗ್‌ನಲ್ಲಿ ಕ್ರಿಸ್ ಜೋರ್ಡಾನ್ 4 ಓವರ್‌ಗಳಲ್ಲಿ 27 ರನ್ ನೀಡಿ 4 ವಿಕೆಟ್ ಪಡೆದರು. ರಿಚರ್ಡ್ ಗ್ಲೆಸನ್ 4 ಓವರ್‌ಗಳಲ್ಲಿ 15 ರನ್ ನೀಡಿ 3 ಪ್ರಮುಖ ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications