IND vs ENG 2ನೇ ಟಿ20: ಇಂಗ್ಲೆಂಡ್ ವಿರುದ್ಧ ಭರ್ಜರಿಯಾಗಿ ಗೆದ್ದು ಸರಣಿ ವಶಪಡಿಸಿಕೊಂಡ ಭಾರತ

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯದಲ್ಲೂ ಭಾರತ ಭರ್ಜರಿ ಗೆಲುವು ಸಾಧಿಸಿ, ಒಂದು ಪಂದ್ಯ ಬಾಕಿ ಇರುವಂತೆಯೇ ಸರಣಿ ತನ್ನದಾಗಿಸಿಕೊಂಡಿತು. ಭಾರತದ ಆಲ್‌ರೌಂಡ್ ಆಟದ ನೆರವಿನಿಂದ ಇಂಗ್ಲೆಂಡ್ ವಿರುದ್ಧ 49 ರನ್‌ಗಳ ಭರ್ಜರಿ ಜಯ ಸಾಧಿಸಿತು.
ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್ ಸ್ಟೇಡಿಯಂನಲ್ಲಿ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಿಗದಿತ 20 ಓವರ್‌ಗಳಲ್ಲಿ ವಿಕೆಟ್ 8 ನಷ್ಟಕ್ಕೆ 170 ರನ್ ಗಳಿಸಿತು. ಇಂಗ್ಲೆಂಡ್ ಗೆಲ್ಲಲು 171 ರನ್‌ಗಳ ಗುರಿ ನೀಡಿತ್ತು. ಆದರೆ ಆತಿಥೇಯ ಇಂಗ್ಲೆಂಡ್ 17 ಓವರ್‌ಗಳಲ್ಲಿ 121 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಮೂರು ಪಂದ್ಯ ಟಿ20 ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ.
171 ರನ್‌ಗಳ ಗುರಿ ಬೆನ್ನತ್ತಿದ ಆತಿಥೇಯ ತಂಡ ಇನ್ನಿಂಗ್ಸ್‌ನ ಮೊದಲ ಎಸೆತದಲೇ ವಿಕೆಟ್ ಕಳೆದುಕೊಂಡಿತು. ಭುವನೇಶ್ವರ್ ಕುಮಾರ್ ಎಸೆದ ಮೊದಲ ಓವರ್‌ನ ಮೊದಲ ಎಸೆತದಲ್ಲಿಯೇ ಜೇಸನ್ ರಾಯ್ ವಿಕೆಟ್ ಕಳೆದುಕೊಂಡಿತು. ನಂತರ ನಾಯಕ ಜೋಸ್ ಬಟ್ಲರ್ (4) ಮತ್ತೊಮ್ಮೆ ಭುವನೇಶ್ವರ್ ಕುಮಾರ್‌ಗೆ ವಿಕೆಟ್ ಒಪ್ಪಿಸಿದರು.
ನಂತರ ಬಂದ ಡೇವಿಡ್ ಮಲಾನ್ (19) ನಿಧಾನಗತಿಯ ಆಟ ಪ್ರಾರಂಭಿಸಿದರಾದರೂ, ದೊಡ್ಡ ಮೊತ್ತವಾಗಿ ಪರಿವರ್ತಿಸಲು ವಿಫಲರಾಗಿ ಯುಜ್ವೇಂದ್ರ ಚಹಾಲ್ ಬೌಲಿಂಗ್‌ನಲ್ಲಿ ಹರ್ಷಲ್ ಪಟೇಲ್‌ಗೆ ಕ್ಯಾಚ್ ನೀಡಿದರು.

ವಿಶ್ವದ ಆಕ್ರಮಣಕಾರಿ ತಂಡದ ಕಳಪೆ ಬ್ಯಾಟಿಂಗ್
ಸ್ಫೋಟಕ ಆಟಗಾರ ಲಿವಿಂಗ್‌ಸ್ಟೋನ್ (15) ಅಬ್ಬರಸುವ ಸೂಚನೆ ನೀಡಿದರೂ, ಜಸ್ಪ್ರೀತ್ ಬುಮ್ರಾ ಬೌಲಿಂಗ್‌ನಲ್ಲಿ ಬೌಲ್ಡ್ ಆದರು. ಅನಂತರ ಹ್ಯಾರಿ ಬ್ರೂಕ್ (8), ಮೊಯಿನ್ ಅಲಿ (35) ಮತ್ತು ಕೊನೆಯಲ್ಲಿ ಡೇವಿಡ್ ವಿಲ್ಲಿ (33) ಕೆಲಹೊತ್ತು ಭಾರತದ ಬೌಲಿಂಗ್‌ಗೆ ಪ್ರತಿರೋಧ ವ್ಯಕ್ತಪಡಿಸಿದರಾದರೂ, ಮೇಲಿನ ಕ್ರಮಾಂಕ ಮತ್ತು ಕೆಳಗಿನ ಕ್ರಮಾಂಕದ ಬ್ಯಾಟಿಂಗ್ ಕೈಕೊಟ್ಟಿದ್ದರಿಂದ ಹೀನಾಯವಾಗಿ ಸೋತಿತು
ಭಾರತದ ಪರ ಬೌಲಿಂಗ್‌ನಲ್ಲಿ ಹಾರ್ದಿಕ್ ಪಾಂಡ್ಯ 3 ಓವರ್‌ಗಳಲ್ಲಿ 15 ರನ್ ನೀಡಿ 3 ವಿಕೆಟ್ ಪಡೆದರು. ಯುಜ್ವೇಂದ್ರ ಚಹಾಲ್ 2 ಓವರ್‌ಗಳಲ್ಲಿ 10 ರನ್ ನೀಡಿ 2 ಪ್ರಮುಖ ವಿಕೆಟ್ ಪಡೆದರು. ಜಸ್ಪ್ರೀತ್ ಬುಮ್ರಾ ಕೂಡ 3 ಓವರ್‌ಗಳಲ್ಲಿ 10 ರನ್ ನೀಡಿ 2 ವಿಕೆಟ್ ಪಡೆದರೆ, ಇನ್ನುಳಿದಂತೆ ಹಾರ್ದಿಕ್ ಪಾಂಡ್ಯ, ಹರ್ಷಲ್ ಪಟೇಲ್ ತಲಾ ಒಂದೊಂದು ವಿಕೆಟ್ ಪಡೆದು ಭಾರತ ಗೆಲುವಿಗೆ ಕಾರಣರಾದರು.

ಭಾರತದ ಬ್ಯಾಟಿಂಗ್ ಇನ್ನಿಂಗ್ಸ್
ಭಾರತದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ನಾಯಕ ರೋಹಿತ್ ಶರ್ಮಾ ಮತ್ತು ರಿಷಭ್ ಪಂತ್ ಉತ್ತಮ ಆರಂಭ ಒದಗಿಸಿದರು. ರೋಹಿತ್ ಶರ್ಮಾ ಔಟ್ ಆಗುವ ಮೊದಲು 4.5 ಓವರ್‌ಗಳಲ್ಲಿ 49 ರನ್ ಗಳಿಸಿ ಉತ್ತಮ ಸ್ಥಿತಿಯಲ್ಲಿತ್ತು. ಈ ವೇಳೆ ರಿಚರ್ಡ್ ಗ್ಲೆಸನ್ ಬೌಲಿಂಗ್‌ನಲ್ಲಿ ರೋಹಿತ್ ಶರ್ಮಾ 31 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.
ನಂತರ ಬಂದ ಅನುಭವಿ ವಿರಾಟ್ ಕೊಹ್ಲಿ ಮತ್ತೊಮ್ಮೆ ನಿರಾಸೆ ಮೂಡಿಸಿದರು. ತಾವು ಎದುರಿಸಿದ ಎರಡನೇ ಎಸೆತದಲ್ಲಿ ರಿಚರ್ಡ್ ಗ್ಲೆಸನ್ ಬೌಲಿಂಗ್‌ನಲ್ಲಿ ಡೇವಿಡ್ ಮಲಾನ್‌ಗೆ ಕ್ಯಾಚ್ ನೀಡಿ ಔಟಾದರು. ಇನ್ನು 15 ಎಸೆತಗಳಲ್ಲಿ 26 ರನ್ ಗಳಿಸಿ ಉತ್ತಮವಾಗಿ ಆಡುತ್ತಿದ್ದ ರಿಷಭ್ ಪಂತ್ ಮುಂದಿನ ಎಸೆತದಲ್ಲಿಯೇ ಕೀಪರ್‌ಗೆ ಕ್ಯಾಚ್ ನೀಡಿ ಹೊರನಡೆದರು.

ಇಂಗ್ಲೆಂಡ್ ಬೌಲಿಂಗ್
ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ (15) ವಿಫಲರಾದರೆ, ಕಳೆದ ಪಂದ್ಯದಲ್ಲಿ ಅರ್ಧ ಶತಕ ಬಾರಿಸಿದ್ದ ಹಾರ್ದಿಕ್ ಪಾಂಡ್ಯ 12 ರನ್ ಗಳಿಸಿ ನಿರಾಸೆ ಮೂಡಿಸಿದರು. ಆಲ್‌ರೌಂಡರ್ ರವೀಂದ್ರ ಜಡೇಜಾ 29 ಎಸೆತಗಳಲ್ಲಿ 46 ರನ್ ಗಳಿಸಿ ತಂಡಕ್ಕೆ ರನ್ ಕೊಡುಗೆ ನೀಡಿದರು. ಕೊನೆಯಲ್ಲಿ ದಿನೇಶ್ ಕಾರ್ತಿಕ್ 12 ರನ್ ಮತ್ತು ಹರ್ಷಲ್ ಪಟೇಲ್ 13 ರನ್ ಗಳಿಸಿ ಔಟಾದರು.
ಇನ್ನು ಇಂಗ್ಲೆಂಡ್ ಪರ ಬೌಲಿಂಗ್‌ನಲ್ಲಿ ಕ್ರಿಸ್ ಜೋರ್ಡಾನ್ 4 ಓವರ್‌ಗಳಲ್ಲಿ 27 ರನ್ ನೀಡಿ 4 ವಿಕೆಟ್ ಪಡೆದರು. ರಿಚರ್ಡ್ ಗ್ಲೆಸನ್ 4 ಓವರ್‌ಗಳಲ್ಲಿ 15 ರನ್ ನೀಡಿ 3 ಪ್ರಮುಖ ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications