IND vs ENG 2nd T20: ಚೆನ್ನೈನಲ್ಲಿ ಸ್ಪರ್ಧಾತ್ಮಕ ಮೊತ್ತ ಕಲೆ ಹಾಕಿದ ಇಂಗ್ಲೆಂಡ್
ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟಿ20 ಪಂದ್ಯದಲ್ಲಿ ಭಾರತ ಎದುರು ಇಂಗ್ಲೆಂಡ್ ಸ್ಪರ್ಧಾತ್ಮಕ ಮೊತ್ತ ಕಲೆ ಹಾಕಿದೆ. ಟಾಸ್ ಗೆದ್ದ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಮಾಡಲು ನಿರ್ಧರಿಸಿದರು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಿತು. ಟೀಮ್ ಇಂಡಿಯಾ ಗೆಲುವಿಗೆ 166 ರನ್‌ಗಳ ಗುರಿ ಇದೆ.
ಇಂಗ್ಲೆಂಡ್ ಪರ ಜೋಸ್ ಬಟ್ಲರ್ 45 ರನ್ ಮತ್ತು ಬ್ರೇಡನ್ ಕಾರ್ಸೆ 31 ರನ್ ಗಳಿಸಿದರು. ಭಾರತದ ಪರ ಅಕ್ಷರ್ ಪಟೇಲ್ ಮತ್ತು ವರುಣ್ ಚಕ್ರವರ್ತಿ 2-2 ವಿಕೆಟ್ ಪಡೆದರು. ಇವರಿಬ್ಬರನ್ನು ಹೊರತುಪಡಿಸಿ ಅರ್ಷದೀಪ್ ಸಿಂಗ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್ ಮತ್ತು ಅಭಿಷೇಕ್ ಶರ್ಮಾ ತಲಾ 1 ವಿಕೆಟ್ ಪಡೆದರು.

ಚೆನ್ನೈ ಟಿ20 ಪಂದ್ಯದಲ್ಲಿ ಫಿಲ್ ಸಾಲ್ಟ್ ಮತ್ತು ಬೆನ್ ಡಕೆಟ್ ಇಂಗ್ಲೆಂಡ್‌ಗೆ ಇನ್ನಿಂಗ್ಸ್ ತೆರೆಯಲು ಬಂದರು. ಇಂಗ್ಲೆಂಡ್‌ನ ಇಬ್ಬರೂ ಆರಂಭಿಕ ಬ್ಯಾಟರ್ ಮತ್ತೆ ಬಿಗ್ ಇನ್ನಿಂಗ್ಸ್ ಆಡುವಲ್ಲಿ ವಿಫಲರಾದರು. ಸಾಲ್ಟ್ 4 ಹಾಗೂ ಡಕೆಟ್ 3 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು. ಹ್ಯಾರಿ ಬ್ರೂಕ್ ಮತ್ತು ಲಿಯಾಮ್ ಲಿವಿಂಗ್ಸ್ಟೋನ್ ತಲಾ 13 ರನ್ ಕೊಡುಗೆ ನೀಡಿದರು. ಜೇಮಿ ಸ್ಮಿತ್ 22 , ಜೇಮಿ ಓವರ್ಟನ್ 5, ಆದಿಲ್ ರಶೀದ್ 10, ಜೋಫ್ರಾ ಆರ್ಚರ್ ಅಜೇಯ 12 ಮತ್ತು ಮಾರ್ಕ್ ವುಡ್ ಅಜೇಯ 5 ರನ್ ಗಳಿಸಿದರು.
ಬಟ್ಲರ್ ಆಸರೆ
ಇಂಗ್ಲೆಂಡ್ ಆರಂಭದಲ್ಲಿ ಫಿಲಿಪ್ ಸಾಲ್ಟ್ ಮತ್ತು ಬೆನ್ ಡಕೆಟ್ ಔಟಾದರು. ಈ ಹಂತದಲ್ಲಿ ಇಂಗ್ಲೆಂಡ್ ತಂಡ ಸಂಕಷ್ಠದಲ್ಲಿತ್ತು. ಇಲ್ಲಿಂದ ಜವಾಬ್ದಾರಿಯುತ ಬ್ಯಾಟಿಂಗ್ ಮಾಡಿದ ಜೋಸ್ ಬಟ್ಲರ್ ಮತ್ತೊಂದು ಅದ್ಭುತ ಇನ್ನಿಂಗ್ಸ್ ಆಡಿದರು. ಮೊದಲ ಟಿ20 ಪಂದ್ಯದಲ್ಲೂ ಜೋಸ್ ಬಟ್ಲರ್ ಬಿರುಸಿನ ಬ್ಯಾಟಿಂಗ್ ಮಾಡಿದರು. ಅದರಂತೆ ಚೆನ್ನೈ ಟಿ20 ಪಂದ್ಯದಲ್ಲಿ ಬಟ್ಲರ್ ಅದ್ಭುತವಾಗಿ ಬ್ಯಾಟಿಂಗ್ ಮಾಡಿದರು. ಅವರು 30 ಎಸೆತಗಳಲ್ಲಿ 2 ಬೌಂಡರಿ ಮತ್ತು 3 ಸಿಕ್ಸರ್ ನೆರವಿನಿಂದ 45 ರನ್ ಬಾರಿಸಿದರು. ಅಪಾಯಕಾರಿಯಾಗಿ ಬ್ಯಾಟಿಂಗ್ ಮಾಡುತ್ತಿದ ಬಟ್ಲರ್ ಅವರನ್ನು ಅಕ್ಸರ್ ಪಟೇಲ್ ಔಟ್ ಮಾಡಿದರು.
ಬ್ರೇಡನ್ ಕಾರ್ಸೆ 17 ಎಸೆತಗಳಲ್ಲಿ 1 ಬೌಂಡರಿ ಹಾಗೂ 3 ಸಿಕ್ಸರ್ ನೆರವಿನಿಂದ 31 ರನ್ ಗಳಿಸಿದರು. ಇದರಿಂದಾಗಿ ಇಂಗ್ಲೆಂಡ್ ತಂಡವು 165 ರನ್ ಗಳಿಸಲು ಸಾಧ್ಯವಾಯಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications