3ನೇ ಟೆಸ್ಟ್ ಪಂದ್ಯದಲ್ಲಿ ಪೂಜಾರ ಸ್ಥಾನದಲ್ಲಿ ಕಣಕ್ಕಿಳಿಯಬಲ್ಲ ಮೂವರು ಆಟಗಾರರು

ಬೆಂಗಳೂರು, ಆಗಸ್ಟ್ 19: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳು ಮುಕ್ತಾಯವಾಗಿದ್ದು ಈಗ ಮೂರನೇ ಪಂದ್ಯಕ್ಕೆ ಎರಡೂ ತಂಡಗಳು ಸಜ್ಜಾಗುತ್ತಿದೆ. ಟೀಮ್ ಇಂಡಿಯಾ ಎರಡು ಪಂದ್ಯಗಳಲ್ಲಿಯೂ ಅದ್ಭುತ ಪ್ರದರ್ಶನ ನೀಡಿದ್ದು ಲಾರ್ಡ್ಸ್ ಪಂದ್ಯವನ್ನು ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಹಾಗಿದ್ದರೂ ಟೀಮ್ ಇಂಡಿಯಾಗೆ ಒಂದು ಚಿಂತೆ ಬಹುವಾಗಿ ಕಾಡುತ್ತಿದೆ. ಅನುಭವಿ ಚೇತೇಶ್ವರ್ ಪೂಜಾರ ದೊಡ್ಡ ಇನ್ನಿಂಗ್ಸ್ ಕಟ್ಟಲು ಸತತವಾಗಿ ವಿಫಲವಾಗುತ್ತಿದ್ದು ಸಾಕಷ್ಟು ಟೀಕೆಗೆ ಗುರಿಯಾಗಿದ್ದಾರೆ. ರನ್‌ಗಳಿಸಲು ಪರದಾಡುತ್ತಿರುವ ಚೇತೇಶ್ವರ್ ಪೂಜಾರಾಗೆ ವಿಶ್ರಾಂತಿಯನ್ನು ನೀಡುವುದು ಸೂಕ್ತ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ.

ಲಾರ್ಡ್ಸ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ ಆರಂಭಿಕ ಮೂರು ವಿಕೆಟ್‌ಗಳು ಅಗ್ಗಕ್ಕೆ ಕಳೆದುಕೊಂಡಿದ್ದಾಗ ಚೇತೇಶ್ವರ್ ಪೂಜಾರಾ ಹಾಗೂ ಅಜಿಂಕ್ಯಾ ರಹಾನೆ ಜೋಡಿ ಬರೊಬ್ಬರಿ 100 ರನ್‌ಗಳ ಜೊತೆಯಾಟವನ್ನು ನೀಡುವ ತಂಡಕ್ಕೆ ಚೇತರಿಕೆ ನೀಡಿದ್ದರು. 206 ಎಸೆತಗಳನ್ನು ಎದುರಿಸಿದ್ದ ಪೂಜಾರ 45 ರನ್‌ಗಳನ್ನು ಗಳಿಸಿದ್ದರು. ಹಾಗಿದ್ದರೂ ಪೂಜಾರ ಫಾರ್ಮ್ ಬಗೆಗಿನ ಅನುಮಾನ ಬಗೆಹರಿದಿಲ್ಲ. ಸುದೀರ್ಘ ಕಾಲ ಕ್ರೀಸ್‌ನಲ್ಲಿ ನಿಂತು ತಾಳ್ಮೆಯಿಂದ ಬ್ಯಾಟಿಂಗ್ ನಡೆಸುವ ಸಾಮರ್ಥ್ಯವಿರುವ ಪೂಜಾರ ಈಗ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲು ಕಷ್ಟಪಡುತ್ತಿದ್ದಾರೆ. ಹೀಗಾಗಿ ಪೂಜಾರ ತಂಡಕ್ಕೆ ಕಠಿಣ ಸಂದರ್ಭದಲ್ಲಿ ಪರಿಣಾಮಕಾರಿಯಾಗಿ ನೆರವಾಗುತ್ತಿಲ್ಲ ಎಂಬುದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ.

ಟಿ ಟ್ವೆಂಟಿ ವಿಶ್ವಕಪ್‌ಗೆ ಹಾರ್ದಿಕ್ ಪಾಂಡ್ಯ ಬದಲು ಆಯ್ಕೆಯಾಗಬಲ್ಲ 3 ಆಟಗಾರರುಟಿ ಟ್ವೆಂಟಿ ವಿಶ್ವಕಪ್‌ಗೆ ಹಾರ್ದಿಕ್ ಪಾಂಡ್ಯ ಬದಲು ಆಯ್ಕೆಯಾಗಬಲ್ಲ 3 ಆಟಗಾರರು

ಹೀಗಾಗಿ ಮೂರನೇ ಟೆಸ್ಟ್ ಪಂದ್ಯದಲ್ಲಿ ಚೇತೇಶ್ವರ್ ಪೂಜಾರ ಬದಲಿಗೆ ಬೇರೆ ಆಟಗಾರರಿಗೆ ಅವಕಾಶ ನೀಡಬೇಕು ಎಂಬ ಚರ್ಚೆಗಳು ವ್ಯಕ್ತವಾಗುತ್ತಿದೆ. ಹಾಗಾದರೆ ಪೂಜಾರ ಸ್ಥಾನಕ್ಕೆ ಸೂಕ್ತವಾಗಬಲ್ಲ ಮೂವರು ಆಟಗಾರರ ಇಲ್ಲಿದೆ ಮಾಹಿತಿ.

3. ಸೂರ್ಯಕುಮಾರ್ ಯಾದವ್

3. ಸೂರ್ಯಕುಮಾರ್ ಯಾದವ್

ದೇಶೀಯ ಕ್ರಿಕೆಟ್‌ನಲ್ಲಿ ಕಳೆದ ಹಲವು ವರ್ಷಗಳಿಂದ ಸತತವಾಗಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಸೂರ್ಯಕುಮಾರ್ ಯಾದವ್ ಟೆಸ್ಟ್ ಕ್ರಿಕೆಟ್‌ನಲ್ಲಿಯೂ ಮಿಂಚಬಲ್ಲ ಸಾಮರ್ಥ್ಯ ಹೊಂದಿರುವ ಆಟಗಾರ ಎಂಬುದರಲ್ಲಿ ಅನುಮಾನವಿಲ್ಲ. ಸುದೀರ್ಘ ಕಾಲದಿಂದ ಕಾದ ಬಳಿಕ ಐಪಿಎಲ್‌ನಲ್ಲಿ ನೀಡಿದ ಪ್ರದರ್ಶನದಿಂದಾಗಿ ಟೀಮ್ ಇಂಡಿಯಾ ಸೀಮಿತ ಓವರ್‌ಗಳ ಕ್ರಿಕೆಟ್‌ ತಂಡದಲ್ಲಿ ಅವಕಾಶ ಗಿಟ್ಟಿಸಿಕೊಂಡಿರುವ ಸೂರ್ಯಕುಮಾರ್ ಯಾದವ್ ಟೀಮ್ ಇಂಡಿಯಾ ಪರವಾಗಿ ಆಡುವ ಕನಸನ್ನು ನನಸು ಮಾಡಿಕೊಂಡಿದ್ದರು.

ಇಂಗ್ಲೆಂಡ್ ವಿರುದ್ಧ ಆಡಿದ ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯದಲ್ಲಿಯೇ ಅರ್ಧ ಶತಕ ಸಿಡಿಸಿ ಭರ್ಜರಿ ಆಗಮನ ಸಾರಿರುವ ಸೂರ್ಯಕುಮಾರ್ ಯಾದವ್ ಬಳಿಕ ಶ್ರೀಲಂಕಾದಲ್ಲಿ ನಡೆದ ಸೀಮಿತ ಓವರ್‌ಗಳ ಸರಣಿಯಲ್ಲಿಯೂ ಉತ್ತಮ ಪ್ರದರ್ಶನ ನೀಡಿದ್ದಾರೆ. ಏಕದಿನ ಸರಣಿಯಲ್ಲಿ ಸೂರ್ಯ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದರು. ಈ ಮಧ್ಯೆ ಟೀಮ್ ಇಂಡಿಯಾದಲ್ಲಿ ಗಾಯದ ಸಮಸ್ಯೆ ಕಾಣಿಸಿಕೊಂಡಿದ್ದರಿಂದಾಗಿ ಇಂಗ್ಲೆಂಡ್ ವಿರುದ್ಧಧ ಟೆಸ್ಟ್ ಸರಣಿಗೂ ಆಯ್ಕೆಯಾಗಿರುವ ಸೂರ್ಯಕುಮಾರ್ ಯಾದವ್ ಚೊಚ್ಚಲ ಬಾರಿಗೆ ಟೆಸ್ಟ್ ಪಂದ್ಯದಲ್ಲಿ ಆಡುವ ಕನಸು ಕಾಣುತ್ತಿದ್ದಾರೆ. 77 ಪ್ರಥಮ ದರ್ಜೆ ಕ್ರಿಕೆಟ್ ಆಡಿರುವ ಅನುಭವ ಹೊಂದಿರುವ ಸೂರ್ಯಕುಮಾರ್ ಯಾದವ್ 44.01ರ ಸರಾಸರಿಯನ್ನು ಹೊಂದಿದ್ದಾರೆ. ಈ ಮೂಲಕ ಚೇತೇಶ್ವರ್ ಪೂಜಾರ ಸ್ಥಾನಕ್ಕೆ ಸೂರ್ಯಕುಮಾರ್ ಯಾದವ್ ಉತ್ತಮ ಆಯ್ಕೆಯಾಗಲಿದ್ದಾರೆ.

2. ಹನುಮ ವಿಹಾರಿ

2. ಹನುಮ ವಿಹಾರಿ

ಟೀಮ್ ಇಂಡಿಯಾದ ಟೆಸ್ಟ್ ಸ್ಪೆಶಲಿಸ್ಟ್ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾಗಿರುವ ಹನುಮ ವಿಹಾರಿ ಕಳೆದ ಆಸ್ಟ್ರೇಲಿಯಾ ಪ್ರವಾಸದಲ್ಲಿ ಸಿಡ್ನಿ ಟೆಸ್ಟ್‌ನಲ್ಲಿ ನೀಡಿದ ಅಮೋಘ ಪ್ರದರ್ಶನ ಭಾರತದ ಕ್ರಿಕೆಟ್ ಪ್ರೇಮಿಗಳ ಸ್ಮೃತಿಪಟಲದಲ್ಲಿ ಸುದೀರ್ಘ ಕಾಲ ನೆನಪಿನಲ್ಲಿ ಉಳಿದುಕೊಳ್ಳುವಂತಾ ಇನ್ನಿಂಗ್ಸ್. ಆದರೆ ಇಂಗ್ಲೆಂಡ್ ನೆಲದಲ್ಲಿ ಭಾರತದ ಯೋಜನೆಯಲ್ಲಿ ಬದಲಾವನೆ ಮಾಡಿಕೊಂಡಿರುವ ಕಾರಣದಿಂದಾಗಿ ಆಂಧ್ರಪ್ರದೇಶ ಮೂಲದ ಈ ಆಟಗಾರನಿಗೆ ಆಡುವ ಬಳಗದಲ್ಲಿ ಅವಕಾಶವಿಲ್ಲದಂತಾಗಿದೆ. ಇಂಗ್ಲೆಂಡ್ ಸರಣಿಯಲ್ಲಿ ಭಾರತ ಐವರು ಬೌಲರ್‌ಗಳೊಂದಿಗೆ ಕಣಕ್ಕಿಳಿಯುತ್ತಿರುವ ಕಾರಣದಿಂದಾಗಿ ಆರನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ರಿಷಭ್ ಪಂತ್ ಆಡುತ್ತಿದ್ದು ಸದ್ಯ ಆಡುವ ಬಳಗದಿಂದ ಹನುಮ ವಿಹಾರಿ ಅನಿವಾರ್ಯವಾಗಿ ಹೊರಗಿದ್ದಾರೆ.

ಆದರೆ ಹನುಮ ವಿಹಾರಿ ತಂಡದ ಅಗತ್ಯಕ್ಕೆ ತಕ್ಕಂತೆ ಆಡಲು ಸಾಮರ್ಥ್ಯವನ್ನು ಹೊಂದಿರುವಂತಾ ಆಟಗಾರ. ಯಾವುದೇ ಕ್ರಮಾಂಕದಲ್ಲಿಯಾದರೂ ವಿಹಾರಿ ಬ್ಯಾಟಿಂಗ್ ನಡೆಸಬಲ್ಲವರಾಗಿದ್ದಾರೆ. 2018-19ರ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಹನುಮ ವಿಹಾರಿ ಆರಂಬಿಕನಾಗಿಯೂ ಕಣಕ್ಕಿಳಿದಿದ್ದರು. ಹೀಗಾಗಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಅಗತ್ಯ ಬಿದ್ದರೆ ಈ ಆಟಗಾರ ಖಂಡಿತಾ ಅದಕ್ಕೆ ಸೂಕ್ತ ಎನಿಸುವುದರಲ್ಲಿ ಅನುಮಾನವಿಲ್ಲ. ಅದಕ್ಕಿಂತಲೂ ಪ್ರಮುಖವಾಗಿ ಹನುಮ ವಿಹಾರಿ ಟೀಮ್ ಇಂಡಿಯಾ ಇಂಗ್ಲೆಂಡ್‌ಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ಆಡಲು ಆಗಮಿಸುವುದಕ್ಕೂ ಮುನ್ನವೇ ಇಂಗ್ಲೆಂಡ್‌ಗೆ ಬಂದಿಳಿದಿರುವ ಹನುಮ ವಿಹಾರಿ ಕೌಂಟಿ ಕ್ರಿಕೆಟ್‌ನಲ್ಲಿ ಭಾಗವಹಿಸಿದ್ದರು. ಹೀಗಾಗಿ ಇಂಗ್ಲೆಂಡ್ ವಾತಾವರಣವನ್ನು ಮತ್ತಷ್ಟು ಸೂಕ್ಷ್ಮವಾಗಿ ಅರ್ಥ ಮಾಡಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಈ ಎಲ್ಲಾ ಕಾರಣದಿಂದಾಗಿ ಹನುಮ ವಿಹಾರಿ ಚೇತೇಶ್ವರ್ ಪೂಜಾರ ಸ್ಥಾನಕ್ಕೆ ಸೂಕ್ತವೆನಿಸಬಲ್ಲವರಾಗಿದ್ದಾರೆ.

ಈ ಆಟಗಾರರ ಮುಂದೆ t- 20 ಗೆಲ್ಲೋದು ತುಂಬಾ ಕಷ್ಟ ಅಂತೆ | Oneindia Kannada
1. ಮಯಾಂಕ್ ಅಗರ್ವಾಲ್

1. ಮಯಾಂಕ್ ಅಗರ್ವಾಲ್

ಚೇತೇಶ್ವರ್ ಪೂಜಾರ ಕಣಕ್ಕಿಳಿಯುವ ಮೂರನೇ ಕ್ರಮಾಂಕಕ್ಕೆ ಹೆಚ್ಚು ಸೂಕ್ತವೆನಿಸಬಲ್ಲ ಆಟಗಾರ ಎಂದರೆ ಅದು ಮಯಾಂಕ್ ಅಗರ್ವಾಲ್. ಟೀಮ್ ಇಂಡಿಯಾದ ಆರಂಭಿಕನಾಗಿ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದ ಮಯಾಂಕ್ ಅಗರ್ವಾಲ್ ಅಭ್ಯಾಸದ ವೇಳೆ ಮೊಹಮ್ಮದ್ ಸಿರಾಜ್ ಓವರ್‌ನಲ್ಲಿ ಚೆಂಡು ತಲೆಗೆ ಬಡಿದಿತ್ತು. ಹೀಗಾಗಿ ಕನ್ಕೂಶನ್‌ಗೆ ಒಳಗಾಗಿದ್ದ ಮಯಾಂಕ್ ಅಗರ್ವಾಲ್ ಮೊದಲ ಪಂದ್ಯದಿಂದ ಹೊರಗುಳಿದಿದ್ದರು. ಆ ಸ್ಥಾನಕ್ಕೆ ಕೆಎಲ್ ರಾಹುಲ್ ಆಡುವ ಅವಕಾಶ ಪಡೆದುಕೊಂಡಿದ್ದರು. ಈ ಅವಕಾಶವನ್ನು ಕೆಎಲ್ ರಾಹುಲ್ ಅದ್ಭುತವಾಗಿ ಬಳಸಿಕೊಂಡಿರುವ ಕಾರಣ ಆರಂಭಿಕನಾಗಿ ಮುಂದುವರಿಸಲಾಗಿದೆ. ಎರಡನೇ ಟೆಸ್ಟ್ ಪಂದ್ಯದಲ್ಲಿಯೂ ರಾಹುಲ್ ಶತಕ ಸಿಡಿಸಿ ಮಿಂಚಿದ್ದು ಮೂರನೇ ಟೆಸ್ಟ್‌ಗೂ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಹೀಗಾಗಿ ಮಯಾಂಕ್ ಅಗರ್ವಾಲ್‌ ಬೆಂಚ್ ಕಾಯಬೇಕಾಗಿದೆ.

ಆದರೆ ಟೆಸ್ಟ್ ಕ್ರಿಕೆಟ್‌ನಲ್ಲಿ ಈಗಾಗಲೇ ಅದ್ಭುತ ಪ್ರದರ್ಶನ ನೀಡುವ ಮೂಲಕ ಛಾಪು ಮೂಡಿಸಿರುವ ಮಯಾಂಕ್ ಅಗರ್ವಾಲ್ ಒಂದೆರಡು ಕೆಟ್ಟ ಇನ್ನಿಂಗ್ಸ್‌ಗಳ ಕಾರಣದಿಂದಾಗಿ ಆಡುವ ಬಳಗದಿಂದ ಹೊರಗುಳಿಯಬೇಕಾಯಿತು. ತಾಂತ್ರಿಕವಾಗಿ ಉತ್ತಮ ಕೌಶಲ್ಯವನ್ನು ಹೊಂದಿರುವ ಮಯಾಂಕ್ ಅಗರ್ವಾಲ್ ಮೂರನೇ ಕ್ರಮಾಂಕದಲ್ಲಿ ಚೇತೇಶ್ವರ್ ಪೂಜಾರ ಸ್ಥಾನವನ್ನು ಸಮರ್ಥವಾಗಿ ತುಂಬಬಲ್ಲ ಸಾಮರ್ಥ್ಯವನ್ನು ಹೊಂದಿದ್ದಾರೆ.

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Thursday, August 19, 2021, 21:56 [IST]
Other articles published on Aug 19, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X