ಕಾಡಿದ ಕರ್ರನ್, ರೋಚಕ ಪಂದ್ಯದಲ್ಲಿ ಪರದಾಡಿ ಗೆದ್ದ ಭಾರತ, ಸರಣಿ ಜಯಿಸಿದ ಕೊಹ್ಲಿ ಪಡೆ

ಇಂಗ್ಲೆಂಡ್ ವಿರುದ್ಧದ ಅಂತಿಮ ಹಾಗೂ ನಿರ್ಣಾಯಕ ಏಕದಿನ ಪಂದ್ಯದಲ್ಲಿ ಭಾರತ ರೋಚಕ ಗೆಲುವು ಸಾಧಿಸಿದೆ. ಈ ಗೆಲುವಿನ ಮೂಲಕ ಭಾರತ ಏಕದಿನ ಸರಣಿಯನ್ನು ಕೂಡ ತನ್ನ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ.
ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ 329 ರನ್‌ಗಳನ್ನು ಬಾರಿಸಿತ್ತು. ಭಾರತ ನೀಡಿದ ಈ ಬೃಹತ್ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್ ಕೊನೆಯ ಹಂತದವರೆಗೂ ಹೋರಾಡಿ ಸೋಲು ಕಂಡಿದೆ.
ಇದಕ್ಕೂ ಮುನ್ನ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಹಾಗೂ ಟಿ20 ಸರಣಿಯನ್ನು ಕೂಡ ಭಾರತ ಭರ್ಜರಿಯಾಗಿ ಗೆದ್ದಿತ್ತು. ಟೆಸ್ಟ್ ಸರಣಿಯನ್ನು 3-1 ಅಂತರದಿಂದ ಗೆಲುವು ಕಂಡಿದ್ದರೆ ಟಿ20 ಸರಣಿ 3-2 ಅಂತರದಿಂದ ಭಾರತದ ಪಾಲಾಗಿತ್ತು. ಈಗ ಏಕದಿನ ಸರಣಿ 2-1 ಅಂತರದಿಂದ ಭಾರತಕ್ಕೆ ಒಲಿದಿದೆ.
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಏಕದಿನ ಸರಣಿಯ ಅಂತಿಮ ಹಾಗೂ ನಿರ್ಣಾಯಕ ಪಂದ್ಯ ಭಾರತದ ಗೆಲುವಿನ ಮೂಲಕ ಮುಕ್ತಾಯ ಕಂಡಿದೆ. ಮೂರನೇ ಏಕದಿನ ಪಂದ್ಯದಲ್ಲೂ ಭಾರತ ಟಾಸ್ ಸೋತಿದ್ದು ಇಂಗ್ಲೆಂಡ್ ಭಾರತವನ್ನು ಮೊದಲಿಗೆ ಬ್ಯಾಟಿಂಗ್‌ಗೆ ಆಹ್ವಾನಿಸಿತ್ತು. ಈ ಪಂದ್ಯದ ಆರಂಭಕ್ಕೂ ಮುನ್ನ ಸರಣಿ 1-1 ಅಂತರದಿಂದ ಸಮಬಲದಲ್ಲಿತ್ತು.
ಕಳೆದ ಪಂದ್ಯದಲ್ಲಿ ಭಾರತ ಅದ್ಭುತ ಬ್ಯಾಟಿಂಗ್ ನಡೆಸಿ 337 ರನ್‌ಗಳ ಗುರಿಯನ್ನು ಎದುರಾಳಿಗೆ ನೀಡಿತ್ತು ಈ ಬೃಹತ್ ಮೊತ್ತವನ್ನು ಇಂಗ್ಲೆಂಡ್ 39 ಎಸೆತಗಳು ಬಾಕಿಯಿರುವಂತೆಯೇ ಗೆದ್ದು ಬೀಗಿತ್ತು. ಭಾರತದ ಸ್ಪಿನ್ ಬೌಲಿಂಗ್ ವಿಭಾಗ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದು ತಂಡಕ್ಕೆ ದೊಡ್ಡ ಹಿನ್ನಡೆಯಾಯಿತು.
Live ಸ್ಕೋರ್ ಪಟ್ಟಿ ಹೀಗಿದೆ:

ಭಾರತದಲ್ಲಿ ಒಂದು ಬದಲಾವಣೆ
ಹೀಗಾಗಿ ಇಂದಿನ ಪಂದ್ಯದಲ್ಲಿ ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆಯನ್ನು ಮಾಡಲಾಗಿದೆ. ಟಿ ನಟರಾಜನ್ ಅವರನ್ನು ಆಡುವ ಬಳಗಕ್ಕೆ ಸೇರಿಸಿಕೊಳ್ಳಲಾಗಿದ್ದು ಕುಲ್‌ದೀಪ್ ಯಾದವ್ ಪ್ಲೇಯಿಂಗ್ XIನಿಂದ ಹೊರಗುಳಿದಿದ್ದಾರೆ.

ಇಂಗ್ಲೆಂಡ್‌ಗೆ ಜೋಸ್ ಬಟ್ಲರ್ ನಾಯಕತ್ವ
ಮತ್ತೊಂದೆಡೆ ಇಂಗ್ಲೆಂಡ್ ಅಂತಿಮ ಪಂದ್ಯಕ್ಕೂ ನಾಯಕ ಇಯಾನ್ ಮಾರ್ಗನ್ ಸೇವೆಯಿಂದ ವಂಚಿತವಾಗಿದ್ದು ಜೋಸ್ ಬಟ್ಲರ್ ನಾಯಕನಾಗಿ ಮುನ್ನಡೆಸುತ್ತಿದ್ದಾರೆ. ಇಂಗ್ಲೆಂಡ್ ಕೂಡ ಒಂದು ಬದಲಾವಣೆಯನ್ನು ಈ ಪಂದ್ಯದಲ್ಲಿ ಮಾಡಿಕೊಂಡಿದ್ದು ಟಾಮ್ ಕರ್ರನ್‌ಗೆ ವಿಶ್ರಾಂತಿಯನ್ನು ನೀಡಲಾಗಿದೆ. ಅವರ ಸ್ಥಾನಕ್ಕೆ ಟಿ20 ಸರಣಿಯಲ್ಲಿ ಮಿಂಚಿದ ಮಾರ್ಜ್ ವುಡ್ ಅವಕಾಶವನ್ನು ಪಡೆದುಕೊಂಡಿದ್ದಾರೆ.

ಭಾರತ ಆಡುವ ಬಳಗ
ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ (ನಾಯಕ), ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ಶಾರ್ದುಲ್ ಠಾಕೂರ್, ಭುವನೇಶ್ವರ್ ಕುಮಾರ್, ಪ್ರಸಿದ್ಧ್ ಕೃಷ್ಣ, ಟಿ ನಟರಾಜನ್

ಇಂಗ್ಲೆಂಡ್ ಆಡುವ ಬಳಗ
ಜೇಸನ್ ರಾಯ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್, ಡೇವಿಡ್ ಮಲನ್, ಜೋಸ್ ಬಟ್ಲರ್ (ನಾಯಕ &ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್‌ಸ್ಟನ್, ಮೊಯೀನ್ ಅಲಿ, ಸ್ಯಾಮ್ ಕರ್ರನ್, ಆದಿಲ್ ರಶೀದ್, ರೀಸ್ ಟಾಪ್ಲೆ, ಮಾರ್ಕ್ ವುಡ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications