ಜೋಸ್ ಬಟ್ಲರ್ ಭರ್ಜರಿ ಆಟ, ಭಾರತ ವಿರುದ್ಧ ಇಂಗ್ಲೆಂಡ್‌ಗೆ ಸುಲಭ ಜಯ

ಅಹ್ಮದಾಬಾದ್: ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮಂಗಳವಾರ (ಮಾರ್ಚ್ 16) ನಡೆದ ಭಾರತ ಮತ್ತು ಇಂಗ್ಲೆಂಡ್ ತೃತೀಯ ಟಿ20ಐ ಪಂದ್ಯದಲ್ಲಿ ಪ್ರವಾಸಿ ಇಂಗ್ಲೆಂಡ್ 8 ವಿಕೆಟ್‌ಗಳ ಸುಲಭ ಜಯ ಗಳಿಸಿದೆ. ಅನುಭವಿ ಬ್ಯಾಟ್ಸ್‌ಮನ್ ಜೋಸ್ ಬಟ್ಲರ್ ಅವರ ಭರ್ಜರಿ ಅರ್ಧ ಶತಕದ ಕೊಡುಗೆಯೊಂದಿಗೆ ಇಂಗ್ಲೆಂಡ್ ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-1ರ ಮುನ್ನಡೆ ಸಾಧಿಸಿದೆ.
ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ವಿರಾಟ್ ಕೊಹ್ಲಿ ಪಡೆಯಿಂದ ರೋಹಿತ್ ಶರ್ಮಾ 15, ಇಶಾನ್ ಕಿಶನ್ 4, ನಾಯಕ ವಿರಾಟ್ ಕೊಹ್ಲಿ 77 (46 ಎಸೆತ), ರಿಷಭ್ ಪಂತ್ 25, ಶ್ರೇಯಸ್ ಐಯ್ಯರ್ 9, ಹಾರ್ದಿಕ್ ಪಾಂಡ್ಯ 17 ರನ್ ಸೇರಿಸಿದರು. ಭಾರತ 20 ಓವರ್‌ಗೆ 6 ವಿಕೆಟ್ ಕಳೆದು 156 ರನ್ ಗಳಿಸಿತು.
ಗುರಿ ಬೆನ್ನಟ್ಟಿದ ಇಂಗ್ಲೆಂಡ್, ಜೇಸನ್ ರಾಯ್ 9, ಡೇವಿಡ್ ಮಲಾನ್ 18, ಜೋಸ್ ಬಟ್ಲರ್ ಅಜೇಯ 83, ಜಾನಿ ಬೇರ್ಸ್ಟೋವ್ ಅಜೇಯ 40 ರನ್ ಸೇರ್ಪಡೆಯೊಂದಿಗೆ 18.2 ಓವರ್‌ಗೆ 2 ವಿಕೆಟ್ ನಷ್ಟದಲ್ಲಿ 158 ರನ್ ಬಾರಿಸಿ ಗೆಲುವನ್ನಾಚರಿಸಿತು.
ಭಾರತದ ಇನ್ನಿಂಗ್ಸ್‌ನಲ್ಲಿ ಮಾರ್ಕ್‌ವುಡ್ 31 ರನ್‌ಗೆ 3, ಕ್ರಿಸ್ ಜೋರ್ಡನ್ 2 ವಿಕೆಟ್ ಪಡೆದರೆ, ಇಂಗ್ಲೆಂಡ್ ಇನ್ನಿಂಗ್ಸ್‌ನಲ್ಲಿ ಭಾರತದ ಯುಜುವೇಂದ್ರ ಚಾಹಲ್ 1, ವಾಷಿಂಗ್ಟನ್ ಸುಂದರ್ 1 ವಿಕೆಟ್‌ನೊಂದಿಗೆ ಗಮನ ಸೆಳೆದರು. ಜೋಸ್ ಬಟ್ಲರ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದುಕೊಂಡರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications