Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ಇಂಗ್ಲೆಂಡ್: ಅಂತಿಮ ಟಿ20 ಪಂದ್ಯ, ಟಾಸ್ ರಿಪೋರ್ಟ್ ಹಾಗೂ ಪ್ಲೇಯಿಂಗ್ XI

India vs England, 3rd t20I, toss report and Playing XI, Nottingham

ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಮೂರನೇ ಹಾಗೂ ಅಂತಿಮ ಪಂದ್ಯ ಆರಂಭವಾಗಿದೆ. ಆತಿಥೇಯ ಇಂಗ್ಲೆಂಡ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಮೊದಲ ಎರಡು ಪಂದ್ಯಗಳಲ್ಲಿಯೂ ರನ್ ಬೆನ್ನಟ್ಟಲು ವಿಫಲವಾಗಿದ್ದ ಇಂಗ್ಲೆಂಡ್ ಈ ಪಂದ್ಯದಲ್ಲಿ ಮೊದಲಿಗೆ ಬ್ಯಾಟಿಂಗ್ ನಡೆಸುವ ನಿರ್ಧಾರ ತೆಗೆದುಕೊಂಡಿದೆ.

ಮೊದಲ ಎರಡು ಪಂದ್ಯದಲ್ಲಿಯೂ ಭರ್ಜರಿ ಗೆಲುವು ಸಾಧಿಸಿರುವ ಭಾರತ ತಂಡ ಈಗಾಗಲೇ ಸರಣಿಯನ್ನು ವಶಕ್ಕೆ ಪಡೆದುಕೊಂಡಿದೆ. ಹೀಗಾಗಿ ಈ ಪಂದ್ಯವನ್ನು ತಂಡದ ಬೆಂಚ್ ಸಾಮರ್ಥ್ಯವನ್ನು ಪರೀಕ್ಷಿಸಲು ಬಳಸಿಕೊಂಡಿದೆ. ಅದರಲ್ಲೂ ಬೌಲಿಂಗ್ ವಿಭಾಗದಲ್ಲಿ ಭಾರೀ ಬದಲಾವಣೆ ಮಾಡಿಕೊಂಡಿರುವುದು ಕುತೂಹಲ ಮುಡಿಸಿದೆ.

ಭಾರತ ತಂಡದಲ್ಲಿ ನಾಲ್ಕು ಬದಲಾವಣೆ

ಭಾರತ ತಂಡದಲ್ಲಿ ನಾಲ್ಕು ಬದಲಾವಣೆ

ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಭಾರತ ನಾಲ್ಕು ಬದಲಾವನೆ ಮಾಡಿಕೊಂಡಿದೆ. ರವಿ ಬಿಶ್ನೋಯ್, ಆವೇಶ್ ಖಾನ್, ಉಮ್ರಾನ್ ಮಲಿಕ್ ಹಾಗೂ ಶ್ರೇಯಸ್ ಐಯ್ಯರ್ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದು ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬೂಮ್ರಾ, ಯುಜುವೇಂದ್ರ ಚಾಹಲ್ ಹಾಗೂ ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ನೀಡಲಾಗಿದೆ. ಇನ್ನು ಇಂಗ್ಲೆಂಡ್ ತಂಡ ಕೂಡ ಈ ಪಂದ್ಯಕ್ಕಾಗಿ ಎರಡು ಬದಲಾವಣೆ ಮಾಡಿಕೊಂಡಿದೆ. ರೀಸ್ ಟಾಪ್ಲಿ ಹಾಗೂ ಫಿಲ್ ಸಾಲ್ಟ್ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದು ಪಾರ್ಕಿನ್ಸನ್ ಹಾಗೂ ಸ್ಯಾಮ್ ಕರನ್ ಆಡುವ ಬಳಗದಿಂದ ಹೊರಬಿದ್ದಿದ್ದಾರೆ.

ಇಂಗ್ಲೆಂಡ್ ಆಡುವ ಬಳಗ

ಇಂಗ್ಲೆಂಡ್ ಆಡುವ ಬಳಗ

ಜೇಸನ್ ರಾಯ್, ಜೋಸ್ ಬಟ್ಲರ್ (ನಾಯಕ & ವಿಕೆಟ್ ಕೀಪರ್), ಡೇವಿಡ್ ಮಲನ್, ಫಿಲಿಪ್ ಸಾಲ್ಟ್, ಲಿಯಾಮ್ ಲಿವಿಂಗ್‌ಸ್ಟೋನ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಡೇವಿಡ್ ವಿಲ್ಲಿ, ಕ್ರಿಸ್ ಜೋರ್ಡಾನ್, ರೀಸ್ ಟೋಪ್ಲಿ, ರಿಚರ್ಡ್ ಗ್ಲೀಸನ್
ಬೆಂಚ್: ಟೈಮಲ್ ಮಿಲ್ಸ್, ಸ್ಯಾಮ್ ಕರನ್, ಮ್ಯಾಥ್ಯೂ ಪಾರ್ಕಿನ್ಸನ್

ಸೂರ್ಯಕುಮಾರ್ ಯಾದವ್ ಶತಕ ಸಿಡಿಸಿದ್ರೂ ಇಂಗ್ಲೆಂಡ್ ವಿರುದ್ಧ ಭಾರತ ಸೋಲ್ಬೇಕಾಯ್ತು...| * Cricket | OneIndia
ಭಾರತ ಆಡುವ ಬಳಗ

ಭಾರತ ಆಡುವ ಬಳಗ

ರೋಹಿತ್ ಶರ್ಮಾ (ನಾಯಕ), ರಿಷಬ್ ಪಂತ್ (ವಿಕೆಟ್ ಕೀಪರ್), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರವೀಂದ್ರ ಜಡೇಜಾ, ಹರ್ಷಲ್ ಪಟೇಲ್, ಆವೇಶ್ ಖಾನ್, ಉಮ್ರಾನ್ ಮಲಿಕ್, ರವಿ ಬಿಷ್ಣೋಯ್
ಬೆಂಚ್: ದೀಪಕ್ ಹೂಡಾ, ಇಶಾನ್ ಕಿಶನ್, ಅಕ್ಸರ್ ಪಟೇಲ್, ಯುಜ್ವೇಂದ್ರ ಚಾಹಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹಾರ್ದಿಕ್ ಪಾಂಡ್ಯ

Story first published: Sunday, July 10, 2022, 19:07 [IST]
Other articles published on Jul 10, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+