ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್: ತೃತೀಯ ಟೆಸ್ಟ್‌ನಲ್ಲಿ ಅಶ್ವಿನ್‌ಗೆ ಸ್ಥಾನ ನೀಡುವುದರ ಬಗ್ಗೆ ಮೌನ ಮುರಿದ ಕೊಹ್ಲಿ

India vs England 3rd test : Virat Kohli says No Change in Indias Playing 11

ಲೀಡ್ಸ್, ಆಗಸ್ಟ್ 24: ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ತೃತೀಯ ಪಂದ್ಯ ಲೀಡ್ಸ್ ನಗರದ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಈಗಾಗಲೇ 2 ಪಂದ್ಯಗಳು ಮುಗಿದಿದ್ದು ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ 1-0 ಅಂತರದ ಮುನ್ನಡೆಯನ್ನು ಸಾಧಿಸಿದೆ. ಇನ್ನು ಹೇಡಿಂಗ್ಲೆ ಅಂಗಳದಲ್ಲಿ ನಡೆಯಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯ ಬುಧವಾರ ( ಆಗಸ್ಟ್ 25 ) ಆರಂಭವಾಗಲಿದ್ದು ಭಾರೀ ಕುತೂಹಲವನ್ನು ಮೂಡಿಸಿದೆ.

ಇದಕ್ಕೂ ಮುನ್ನ ಲಾರ್ಡ್ಸ್ ಅಂಗಳದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಸೋಲಿನ ಸುಳಿಯಲ್ಲಿ ಸಿಲುಕಿಕೊಂಡಿದ್ದ ಟೀಮ್ ಇಂಡಿಯಾ ಕೊನೆಯ ದಿನದ ಆಟದಲ್ಲಿ ಬೌಲರ್‌ಗಳು ನೀಡಿದ ಅತ್ಯದ್ಭುತ ಪ್ರದರ್ಶನದ ಕಾರಣದಿಂದ ಇಂಗ್ಲೆಂಡ್ ತಂಡವನ್ನು 151 ರನ್‌ಗಳಿಂದ ಮಣಿಸುವುದರ ಮೂಲಕ ಗೆಲುವಿನ ಕೇಕೆ ಹಾಕಿತು. ಹೀಗೆ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿ ಮೂರನೇ ಟೆಸ್ಟ್ ಪಂದ್ಯದಲ್ಲಿಯೂ ಸಹ ಗೆಲುವನ್ನು ಸಾಧಿಸಿ ಸರಣಿಯನ್ನು ಬಹುತೇಕ ತನ್ನ ಕೈವಶ ಮಾಡಿಕೊಳ್ಳುವತ್ತ ಭಾರತ ಚಿತ್ತ ನೆಟ್ಟಿದ್ದರೆ, ಅತ್ತ ಗೆಲುವಿನ ಸನಿಹಕ್ಕೆ ಬಂದು ಕೊನೆಯ ಹಂತದಲ್ಲಿ ಲಾರ್ಡ್ಸ್ ಟೆಸ್ಟ್ ಪಂದ್ಯವನ್ನು ಕೈಚೆಲ್ಲಿರುವ ಇಂಗ್ಲೆಂಡ್ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಜಯ ಸಾಧಿಸಬೇಕೆಂಬ ಯೋಜನೆಯಲ್ಲಿದೆ.

ಹೀಗೆ ಹೇಡಿಂಗ್ಲೆ ಅಂಗಳದಲ್ಲಿ ಬುಧವಾರ ಆರಂಭವಾಗಲಿರುವ ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವಿನ ಮೂರನೇ ಟೆಸ್ಟ್ ಪಂದ್ಯ ಸಾಕಷ್ಟು ಕುತೂಹಲವನ್ನು ಕೆರಳಿಸಿದ್ದು ಈ ಪಂದ್ಯ ಆರಂಭವಾಗುವ ಮುನ್ನ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮಂಗಳವಾರ ( ಆಗಸ್ಟ್ 24 ) ಸುದ್ದಿಗೋಷ್ಠಿಯೊಂದನ್ನು ನಡೆಸಿದ್ದಾರೆ. ವಿರಾಟ್ ಕೊಹ್ಲಿ ನಡೆಸಿರುವ ಈ ಸುದ್ದಿಗೋಷ್ಠಿ ಬಗ್ಗೆ ಭಾರತೀಯ ಕ್ರಿಕೆಟ್ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿತ್ತು. ಮೊದಲೆರಡು ಪಂದ್ಯದಲ್ಲಿ ಅವಕಾಶ ಸಿಗದೇ ತಂಡದಿಂದ ಹೊರಗುಳಿದಿದ್ದ ರವಿಚಂದ್ರನ್ ಅಶ್ವಿನ್ ಅವರಿಗೆ ಈ ಪಂದ್ಯದಲ್ಲಾದರೂ ಅವಕಾಶ ಸಿಗಲಿದೆಯಾ ಎನ್ನುವ ಕುತೂಹಲದಿಂದಲೇ ವಿರಾಟ್ ಕೊಹ್ಲಿ ಸುದ್ದಿಗೋಷ್ಠಿಗೆ ಭಾರತ ಕ್ರಿಕೆಟ್ ತಂಡದ ಅಭಿಮಾನಿಗಳು ಕಾಯುತ್ತಿದ್ದರು. ಇದೀಗ ಮೂರನೇ ಟೆಸ್ಟ್ ಕುರಿತು ವಿರಾಟ್ ಕೊಹ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು ಈ ಕೆಳಕಂಡ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.

ಗೆಲ್ಲುವ ತಂಡವನ್ನು ಬದಲಾಯಿಸುವ ಅಗತ್ಯವಿಲ್ಲ

ಗೆಲ್ಲುವ ತಂಡವನ್ನು ಬದಲಾಯಿಸುವ ಅಗತ್ಯವಿಲ್ಲ

ಮಂಗಳವಾರ ( ಆಗಸ್ಟ್ 24 ) ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಕುರಿತು ಸುದ್ದಿಗೋಷ್ಠಿಯನ್ನು ನಡೆಸಿದ ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ಆಡುವ ಬಳಗದ ಕುರಿತು ಮಾಹಿತಿಯನ್ನು ಹಂಚಿಕೊಂಡರು. 'ಗೆಲ್ಲುವ ತಂಡವನ್ನು ಬದಲಾಯಿಸಲು ನಮಗೆ ಯಾವುದೇ ರೀತಿಯ ಕಾರಣಗಳು ಲಭ್ಯವಿಲ್ಲ. ಉತ್ತಮ ಪ್ರದರ್ಶನ ನೀಡಿ ಯಶಸ್ಸಿನ ಹಾದಿಯಲ್ಲಿರುವ ತಂಡದ ಆಟಗಾರರನ್ನು ಬದಲಾಯಿಸಿ ತಂಡಕ್ಕೆ ತೊಂದರೆ ನೀಡಬಾರದು. ಅದರಲ್ಲಿಯೂ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾಗವಹಿಸಿದ್ದ ಟೀಮ್ ಇಂಡಿಯಾ ತಂಡ ಅತ್ಯುತ್ತಮ ಪ್ರದರ್ಶನವನ್ನು ನೀಡಿದೆ, ಅಶ್ವಿನ್ ಅವರನ್ನು ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಸುವ ಉದ್ದೇಶವಿತ್ತು ಆದರೆ ಹವಾಮಾನ ನಮ್ಮ ಉದ್ದೇಶವನ್ನು ಬದಲಾಗುವಂತೆ ಮಾಡಿತು' ಎಂದು ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾಗವಹಿಸಿದ್ದ ಟೀಮ್ ಇಂಡಿಯಾ ಆಡುವ ಬಳಗದ ಬಗ್ಗೆ ವಿಶ್ವಾಸ ವ್ಯಕ್ತಪಡಿಸುವುದರ ಮೂಲಕ ಮೂರನೇ ಟೆಸ್ಟ್ ಪಂದ್ಯದಲ್ಲಿಯೂ ಇದೇ ತಂಡ ಮುಂದುವರಿಯಲಿದೆ ಎಂಬ ಸುಳಿವನ್ನು ನೀಡಿದ್ದಾರೆ.

ಮೂರನೇ ಟೆಸ್ಟ್ ಪಂದ್ಯದಲ್ಲಿಯೂ ಅಶ್ವಿನ್ ಭಾಗವಹಿಸುವಿಕೆ ಅನುಮಾನ!

ಮೂರನೇ ಟೆಸ್ಟ್ ಪಂದ್ಯದಲ್ಲಿಯೂ ಅಶ್ವಿನ್ ಭಾಗವಹಿಸುವಿಕೆ ಅನುಮಾನ!

ಗೆಲ್ಲುವ ತಂಡದ ಆಟಗಾರರನ್ನು ಬದಲಾಯಿಸುವ ಅಗತ್ಯವಿಲ್ಲ ಎಂದು ವಿರಾಟ್ ಕೊಹ್ಲಿ ಅವರು ಹೇಳಿಕೆ ನೀಡಿದ ನಂತರ ಇದೀಗ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿಯೂ ಸಹ ರವಿಚಂದ್ರನ್ ಅಶ್ವಿನ್ ಅವರಿಗೆ ಆಡುವ ಬಳಗದಲ್ಲಿ ಅವಕಾಶ ಸಿಗುವುದು ಅನುಮಾನ ಮೂಡಿಸಿದೆ.

51 ವರ್ಷಗಳಿಂದ ಈ ಮೈದಾನದಲ್ಲಿ ಭಾರತ ಸೊತೇ ಇಲ್ಲ | Oneindia Kannada
ಭಾರತ ಮತ್ತು ಇಂಗ್ಲೆಂಡ್ ಮೂರನೇ ಟೆಸ್ಟ್ ಪಂದ್ಯ ಯಾವಾಗ ಮತ್ತು ಎಲ್ಲಿ?

ಭಾರತ ಮತ್ತು ಇಂಗ್ಲೆಂಡ್ ಮೂರನೇ ಟೆಸ್ಟ್ ಪಂದ್ಯ ಯಾವಾಗ ಮತ್ತು ಎಲ್ಲಿ?

ಭಾರತ ಮತ್ತು ಇಂಗ್ಲೆಂಡ್ ನಡುವಿನ ತೃತೀಯ ಟೆಸ್ಟ್ ಪಂದ್ಯ ಆಗಸ್ಟ್ 25 ರಿಂದ ಆಗಸ್ಟ್ 29 ರವರೆಗೆ ನಡೆಯಲಿದೆ. ಈ ಪಂದ್ಯ ಲೀಡ್ಸ್ ನಗರದ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಸುಮಾರು 19 ವರ್ಷಗಳ ಬಳಿಕ ಟೀಮ್ ಇಂಡಿಯಾ ಈ ಕ್ರೀಡಾಂಗಣದಲ್ಲಿ ಪಂದ್ಯವನ್ನಾಡಲಿದೆ. ಟೀಮ್ ಇಂಡಿಯಾ ಈ ಹಿಂದೆ 2002ರಲ್ಲಿ ಲೀಡ್ಸ್ ಕ್ರೀಡಾಂಗಣದಲ್ಲಿ ತನ್ನ ಕೊನೆಯ ಪಂದ್ಯವನ್ನಾಡಿತ್ತು.

Story first published: Tuesday, August 24, 2021, 19:08 [IST]
Other articles published on Aug 24, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X