
ಅಹ್ಮದಾಬಾದ್: ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಗುರುವಾರ (ಮಾರ್ಚ್ 18) ನಡೆದ ಭಾರತ-ಇಂಗ್ಲೆಂಡ್ 4ನೇ ಟಿ20ಐ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಪಡೆ 8 ರನ್ ರೋಚಕ ಜಯ ಗಳಿಸಿದೆ. ಪಾದಾರ್ಪಣೆ ಇನ್ನಿಂಗ್ಸ್ ಆಡಿದ ಸೂರ್ಯಕುಮಾರ್ ಯಾದವ್ ಅವರ ಸ್ಫೋಟಕ ಅರ್ಧ ಶತಕದೊಂದಿಗೆ ಭಾರತ ಐದು ಪಂದ್ಯಗಳ ಟಿ20ಐ ಸರಣಿಯಲ್ಲಿ 2-2ರ ಸಮಬಲ ಸಾಧಿಸಿದೆ.
ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ದುಕೊಂಡಿತ್ತು. ಐದು ಪಂದ್ಯಗಳ ಟಿ20ಐ ಸರಣಿಯಲ್ಲಿ ಇಂಗ್ಲೆಂಡ್ 2-1ರಿಂದ ಮುನ್ನಡೆಯಲ್ಲಿದ್ದರಿಂದ ಈ ಪಂದ್ಯದಲ್ಲಿ ಭಾರತ ಗೆಲ್ಲಲೇಬೇಕಿದೆ. ಭಾರತ ತಂಡದ ಪ್ಲೇಯಿಂಗ್ XIನಲ್ಲಿ ನಾಲ್ಕು ಬದಲಾವಣೆಯಾಗಿತ್ತು. ಇಶಾನ್ ಕಿಶನ್ ಬದಲು ಸೂರ್ಯಕುಮಾರ್ ಯಾದವ್, ಯುಜುವೇಂದ್ರ ಚಾಹಲ್ ಬದಲು ರಾಹುಲ್ ಚಾಹರ್ ತಂಡದಲ್ಲಿ ಕಾಣಿಸಿಕೊಂಡಿದ್ದರು.
ಭಾರತ vs ಇಂಗ್ಲೆಂಡ್, 4ನೇ ಟಿ20ಐ ಪಂದ್ಯ, Live ಸ್ಕೋರ್‌ಕಾರ್ಡ್
ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಕೆ.ಎಲ್. ರಾಹುಲ್, ವಿರಾಟ್ ಕೊಹ್ಲಿ (ಸಿ), ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆ), ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಭುವನೇಶ್ವರ್ ಕುಮಾರ್, ರಾಹುಲ್ ಚಾಹರ್.
ಇಂಗ್ಲೆಂಡ್ ಪ್ಲೇಯಿಂಗ್ XI: ಜೇಸನ್ ರಾಯ್, ಜೋಸ್ ಬಟ್ಲರ್ (ವಿಕೆ), ಡೇವಿಡ್ ಮಲನ್, ಜಾನಿ ಬೈರ್‌ಸ್ಟೋವ್, ಇಯಾನ್ ಮಾರ್ಗನ್ (ಸಿ), ಬೆನ್ ಸ್ಟೋಕ್ಸ್, ಸ್ಯಾಮ್ ಕರ್ರನ್, ಕ್ರಿಸ್ ಜೋರ್ಡನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಮಾರ್ಕ್ ವುಡ್.