For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್: ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ 205 ರನ್

India vs England, 4th Test, Day 1 - Live Score

ಅಹ್ಮದಾಬಾದ್: ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು 4ನೇ ಟೆಸ್ಟ್‌ ಪಂದ್ಯಕ್ಕಾಗಿ ಮೈದಾನಕ್ಕಿಳಿದಿವೆ. ನಾಲ್ಕು ಪಂದ್ಯಗಳ ಟೆಸ್ಟ್‌ ಸರಣಿಯ ಕೊನೇ ಪಂದ್ಯವಿದು. ಟಾಸ್ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡಿದ್ದ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 75.5 ಓವರ್‌ಗೆ ಎಲ್ಲ ವಿಕೆಟ್ ಕಳೆದು 75.5 ರನ್ ಬಾರಿಸಿದೆ.

ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್‌ ಪರ ಜಾನಿ ಬೇರ್ಸ್ಟೋವ್ 28, ಬೆನ್ ಸ್ಟೋಕ್ಸ್ 55, ಆಲ್ಲಿ ಪೋಪ್ 29, ಡೇನಿಯಲ್ ಲಾರೆನ್ಸ್ 46 ರನ್ ಕೊಡುಗೆ ನೀಡಿದ್ದರು. ಭಾರತ ಈಗ ಮೊದಲ ಇನ್ನಿಂಗ್ಸ್‌ ಆಡುತ್ತಿದ್ದು ಗುರುವಾರ ಮೊದಲನೇ ದಿನದಾಟದ ಅಂತ್ಯಕ್ಕೆ ಭಾರತ 12 ಓವರ್‌ಗೆ 1 ವಿಕೆಟ್ ಕಳೆದು 24 ರನ್ ಬಾರಿಸಿತ್ತು. ಶುಬ್ಮನ್ ಗಿಲ್ 0ಗೆ ವಿಕೆಟ್ ಒಪ್ಪಿಸಿದ್ದರು.

ಭಾರತಕ್ಕೆ ಪ್ರವಾಸ ಬಂದಿರುವ ಇಂಗ್ಲೆಂಡ್ ಕ್ರಿಕೆಟ್ ತಂಡ, ಚೆನ್ನೈನಲ್ಲಿ ನಡೆದಿದ್ದ ಆರಂಭಿಕ ಟೆಸ್ಟ್‌ನಲ್ಲಿ ಗೆದ್ದಿತ್ತು. ಆ ಬಳಿಕ ಎರಡು ಟೆಸ್ಟ್ ಪಂದ್ಯಗಳಲ್ಲಿ ಭಾರತ ಗೆದ್ದು ಸರಣಿ ಗೆಲುವಿನ ಹುಮ್ಮಸ್ಸಿನಲ್ಲಿದೆ. ಭಾರತದ ಇಂದಿನ ಪ್ಲೇಯಿಂಗ್‌ XIನಲ್ಲಿ ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಇಶಾಂತ್ ಶರ್ಮಾ ಕಾಣಿಸಿಕೊಂಡಿದ್ದಾರೆ.

ಭಾರತ vs ಇಂಗ್ಲೆಂಡ್, 4ನೇ ಟೆಸ್ಟ್‌ ಪಂದ್ಯ, Live ಸ್ಕೋರ್‌ಕಾರ್ಡ್

1
49841

ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ಸಿ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ಪ), ವಾಷಿಂಗ್ಟನ್ ಸುಂದರ್, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಇಶಾಂತ್ ಶರ್ಮಾ, ಮೊಹಮ್ಮದ್ ಸಿರಾಜ್.

ಇಂಗ್ಲೆಂಡ್ ಪ್ಲೇಯಿಂಗ್ XI: ಡೊಮಿನಿಕ್ ಸಿಬ್ಲಿ, ಝ್ಯಾಕ್ ಕ್ರಾಲೆ, ಜಾನಿ ಬೈರ್‌ಸ್ಟೋವ್, ಜೋ ರೂಟ್ (ಸಿ), ಬೆನ್ ಸ್ಟೋಕ್ಸ್, ಆಲ್ಲಿ ಪೋಪ್, ಬೆನ್ ಫೋಕ್ಸ್ (ಪ), ಡೇನಿಯಲ್ ಲಾರೆನ್ಸ್, ಡೊಮಿನಿಕ್ ಬೆಸ್, ಜ್ಯಾಕ್ ಲೀಚ್, ಜೇಮ್ಸ್ ಆ್ಯಂಡರ್ಸನ್.

Story first published: Thursday, March 4, 2021, 18:05 [IST]
Other articles published on Mar 4, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+