ಕರುಣ್ ನಾಯರ್ ನಾಲ್ಕನೇ ಟೆಸ್ಟ್ ಆಡ್ತಾರಾ? ಗಿಲ್ ಹೇಳಿದ್ದೇನು?
ಭಾರತ ಹಾಗೂ ಇಂಗ್ಲೆಂಡ್ ನಡುವಣ ನಾಲ್ಕನೇ ಟೆಸ್ಟ್ ಪಂದ್ಯ ಬುಧವಾರದಿಂದ ಆರಂಭವಾಗಲಿದೆ. ಈ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಬಗ್ಗೆ ದೊಡ್ಡ ಅಪ್‌ಡೇಟ್‌ನ್ನು ಶುಭಮನ್ ಗಿಲ್ ನೀಡಿದ್ದಾರೆ. ಜುಲೈ 23 ರಂದು ಯಾವೆಲ್ಲಾ ಪ್ಲೇಯರ್ ಕಣಕ್ಕೆ ಇಳಿಯಬಹುದು ಎಂಬ ಬಗ್ಗೆ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಗಿಲ್ ಹಲವು ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ. ಯಾವೆಲ್ಲಾ ಆ ಆಟಗಾರರಿಗೆ ಅವಕಾಶ ನೀಡಬಹುದು ಎಂಬ ಬಗ್ಗೆ ಸ್ಪಷ್ಟ ಚಿತ್ರಣವನ್ನು ನೀಡಿದ್ದಾರೆ.
ಮ್ಯಾಂಚೆಸ್ಟರ್ ಟೆಸ್ಟ್ ಪಂದ್ಯದಿಂದ ಆಕಾಶ್ ದೀಪ್ ಆಡುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಇದಕ್ಕೂ ಮೊದಲು ತಂಡದ ಭರವಸೆಯ ಆಟಗಾರರಾದ ನಿತೀಶ್ ಕುಮಾರ್ ರೆಡ್ಡಿ ಹಾಗೂ ಅರ್ಷದೀಪ್ ಸಿಂಗ್ ಈಗಾಗಲೇ ಗಾಯದ ಕಾರಣದಿಂದ ತಂಡದಿಂದ ದೂರ ಉಳಿದಿದ್ದಾರೆ. ಇನ್ನು ಆಕಾಶ್ ದೀಪ್ ಸಹ ಹೊರಗೆ ಕೂರಲಿದ್ದಾರೆ ಎಂದು ಗಿಲ್ ತಿಳಿಸಿದ್ದಾರೆ.

ಟೀಮ್ ಇಂಡಿಯಾದ ಉಪನಾಯಕ ರಿಷಭ್ ಪಂತ್ ಚೇತರಿಸಿಕೊಂಡಿದ್ದು, ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಆಡುವುದು ಕನ್ಫರ್ಮ್ ಎಂದು ನಾಯಕ ಗಿಲ್ ತಿಳಿಸಿದ್ದಾರೆ. ರಿಷಭ್ ಸಂಪೂರ್ಣ ಚೇತರಿಸಿಕೊಂಡಿದ್ದು ಮ್ಯಾಂಚೆಸ್ಟರ್‌ನಲ್ಲಿ ಕಣಕ್ಕೆ ಇಳಿಯಲಿದ್ದಾರೆ ಎಂಬುದನ್ನು ಸ್ಪಷ್ಟ ಪಡಿಸಿದ್ದಾರೆ.
ಮೂರನೇ ವೇಗಿ ಯಾರು?
ಟೀಮ್ ಇಂಡಿಯಾದ ಮೂರನೇ ವೇಗಿ ಯಾರು ಎಂಬ ಪ್ರಶ್ನೆಗೆ ಉತ್ತರ ನೀಡಿದ ಗಿಲ್, ಅನ್ಶುಲ್ ಕಾಂಬೋಜ್ ಈಗಾಗಲೇ ತಂಡ ಸೇರಿಕೊಂಡಿದ್ದಾರೆ. ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಅವರಿಗೆ ಪದಾರ್ಪಣೆಯ ಅವಕಾಶ ಲಭಿಸಬಹುದು. ಆದರೆ ಈ ಬಗ್ಗೆ ಇನ್ನು ಯಾವುದೇ ಸ್ಪಷ್ಟತೆ ಇಲ್ಲ. ಇನ್ನು ಅನ್ಶುಲ್ ಕಾಂಬೋಜ್ ತಮ್ಮ ಚೊಚ್ಚಲ ಪಂದ್ಯಕ್ಕೆ ತುಂಬ ಹತ್ತಿರದಲ್ಲಿದ್ದಾರೆ ಎಂದು ತಿಳಿಸಿದ್ದಾರೆ. ಅಲ್ಲದೆ ಮೂರನೇ ವೇಗಿಯ ಸ್ಥಾನದಲ್ಲಿ ಅನ್ಶುಲ್ ಕಾಂಬೋಜ್ ಅಥವಾ ಪ್ರಸಿದ್ಧ್ ಕೃಷ್ಣಾಗೆ ಅವಕಾಶ ಸಿಗಬಹುದು ಎಂದು ತಿಳಿಸಿದ್ರು.
ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವುದು ಯಾರು?
ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವುದು ಯಾರು ಎಂಬ ದೊಡ್ಡ ಪ್ರಶ್ನೆಗೆ ಶುಭಮನ್ ಗಿಲ್, ತಮ್ಮದೇ ಧಾಟಿಯಲ್ಲಿ ಉತ್ತರ ನೀಡಿದರು. ಕರುಣ್ ನಾಯರ್ ಉತ್ತಮವಾಗಿ ಬ್ಯಾಟ್ ಮಾಡುತ್ತಿದ್ದಾರೆ. ಆದರೆ ಒಬ್ಬ ಬ್ಯಾಟರ್‌ಗೆ ಕೆಲವೊಮ್ಮೆ ದೊಡ್ಡ ಇನಿಂಗ್ಸ್ ಕಟ್ಟಲು ಸಾಧ್ಯವಾಗುವುದಿಲ್ಲ. ಅವರು ಮುಂದಿನ ಕೆಲವು ದಿನಗಳಲ್ಲಿ ದೊಡ್ಡ ಇನಿಂಗ್ಸ್ ಕಟ್ಟುತ್ತಾರೆ ಎಂಬ ವಿಶ್ವಾಸವಿದೆ ಎಂದು ಗಿಲ್ ಹೇಳಿದ್ದಾರೆ.
ಇಂಗ್ಲೆಂಡ್ ಮುನ್ನಡೆ
ಭಾರತ ಆಂಡರ್ಸನ್ ಹಾಗೂ ತೆಂಡುಲ್ಕರ್ ಸರಣಿಯಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲವಾಗಿದೆ. ಆಡಿದ ಮೊದಲ ಪಂದ್ಯದಲ್ಲಿ 5 ವಿಕೆಟ್ ಸೋಲು ಕಂಡಿರುವ ಭಾರತ, ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಅಮೋಘ ಜಯ ದಾಖಲಿಸಿ ಸರಣಿಯಲ್ಲಿ ಪುಟಿದೆದಿತ್ತು. ಆದರೆ ಲಾರ್ಡ್ಸ್ ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯವನ್ನು 22 ರನ್‌ಗಳಿಂದ ಸೋತಿರುವ ಭಾರತ ಸರಣಿಯಲ್ಲಿ ಹಿನ್ನಡೆ ಅನುಭವಿಸಿದೆ. ಮ್ಯಾಂಚೆಸ್ಟರ್‌ನಲ್ಲಿ ನಡೆಯುವ ಪಂದ್ಯ ಗೆದ್ದಿ ಸಮಬಲ ಸಾಧಿಸುವ ಕನಸು ಟೀಮ್ ಇಂಡಿಯಾದ್ದಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications