For Quick Alerts
ALLOW NOTIFICATIONS  
For Daily Alerts
 

Manchester Test: ಇಂಗ್ಲೆಂಡ್‌ಗೆ ರಾಹುಲ್‌, ಗಿಲ್‌ ತಿರುಗೇಟಿನ ಉತ್ತರ: ಟೀಮ್ ಇಂಡಿಯಾಗೆ 137 ರನ್‌ ಹಿನ್ನಡೆ

ಭಾರತ ಹಾಗೂ ಇಂಗ್ಲೆಂಡ್‌ ನಡುವಣ ನಾಲ್ಕನೇ ಟೆಸ್ಟ್‌ ಪಂದ್ಯ ರೋಚಕ ಘಟ್ಟದತ್ತ ಮುಖ ಮಾಡಿದೆ. ಇಂಗ್ಲೆಂಡ್‌ ಸೊಗಸಾದ ಬ್ಯಾಟಿಂಗ್‌ಗೆ ಟೀಮ್ ಇಂಡಿಯಾದ ಆರಂಭಿಕ ಕೆಎಲ್ ರಾಹುಲ್ ಹಾಗೂ ನಾಯಕ ಶುಭಮನ್‌ ಗಿಲ್‌ ಭರ್ಜರಿ ತಿರುಗೇಟು ನೀಡಿದ್ದಾರೆ. ಟೀಮ್ ಇಂಡಿಯಾ ಇನ್ನು 137 ರನ್‌ಗಳ ಹಿನ್ನಡೆ ಅನುಭವಿಸುತ್ತಿದ್ದರೂ, ಮೆಟ್ಟಿನಿಲ್ಲುವ ಸೂಚನೆಯನ್ನು ನೀಡಿದ್ದಾರೆ.

ಶನಿವಾರ ನಾಲ್ಕನೇ ದಿನದಾಟದಲ್ಲಿ ಇಂಗ್ಲೆಂಡ್‌ ಮೊದಲ ಇನಿಂಗ್ಸ್‌ನಲ್ಲಿ 7 ವಿಕೆಟ್‌ಗೆ 544 ರನ್‌ ಗಳಿಂದ ಆಟ ಮುಂದುವರೆಸಿತು. ಲಿಯಾಮ್ ಡಾಸನ್ (26) ಅವರಿಗೆ ವೇಗಿ ಜಸ್ಪ್ರೀತ್ ಬುಮ್ರಾ ಖೆಡ್ಡಾ ತೋಡಿದರು. 9ನೇ ವಿಕೆಟ್‌ಗೆ ನಾಯಕ ಬೆನ್‌ ಸ್ಟೋಕ್ಸ್‌ ಹಾಗೂ ಬ್ರೈಡನ್ ಕಾರ್ಸೆ ಜೋಡಿ ಅಮೋಘ ಜೊತೆಯಾಟದ ಕಾಣಿಕೆ ನೀಡಿತು. ಈ ಜೊಡಿಯನ್ನು ಕಟ್ಟಿ ಹಾಕುವಲ್ಲಿ ಟೀಮ್ ಇಂಡಿಯಾ ಬೌಲರ್ಸ್‌ಗಳು ವಿಫಲರಾದರು. ಈ ಜೊಡಿ 97 ಎಸೆತಗಳಲ್ಲಿ 95 ರನ್‌ ಸಿಡಿಸಿತು.

India vs England 4th Test Rahul Gill lead India s fightback after Stokes ton

ಇಂಗ್ಲೆಂಡ್‌ ನಾಯಕ ಬೆನ್‌ ಸ್ಟೋಕ್ಸ್‌ ನಾಲ್ಕನೇ ಟೆಸ್ಟ್‌ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಇವರು ಈ ಸರಣಿಯಲ್ಲಿ ರನ್‌ ಕಲೆ ಹಾಕುವಲ್ಲಿ ಪರದಾಟ ನಡೆಸಿದ್ದರು. ಆದರೆ ಮಹತ್ವದ ಸಮಯದಲ್ಲಿ ಫಾರ್ಮ್‌ಗೆ ಮರಳಿದ್ದು ತಂಡಕ್ಕೆ ಆಧಾರವಾಗಿದ್ದಾರೆ. ಇವರು 198 ಎಸೆತಗಳಲ್ಲಿ 11 ಬೌಂಡರಿ, 3 ಸಿಕ್ಸರ್‌ ಸಹಾಯದಿಂದ 141 ರನ್‌ ಸಿಡಿಸಿದರು. ಅಂತಿಮವಾಗಿ ಇಂಗ್ಲೆಂಡ್‌ 699 ರನ್‌ಗಳಿಗೆ ಆಲೌಟ್ ಆಗಿದೆ. ಭಾರತದ ಪರ ರವೀಂದ್ರ ಜಡೇಜಾ 4 ವಿಕೆಟ್‌, ಜಸ್ಪ್ರೀತ್ ಬುಮ್ರಾ, ವಾಷಿಂಗ್ಟನ್‌ ಸುಂದರ್‌ ತಲಾ 2 ವಿಕೆಟ್‌ ಪಡೆದು ಮಿಂಚಿದರು.

ಸ್ಟೋಕ್ಸ್‌ ಸಾಧನೆ

ಭಾರತದ ವಿರುದ್ಧ ಶತಕ ಬಾರಿಸಿರುವ ಬೆನ್‌ ಸ್ಟೋಕ್ಸ್‌ ಟೆಸ್ಟ್‌ ಕ್ರಿಕೆಟ್‌ನಲ್ಲಿ 7000 ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ 7 ಸಾವಿರ ರನ್‌ ಹಾಗೂ 200 ಕ್ಕೂ ಹೆಚ್ಚು ವಿಕೆಟ್‌ ಪಡೆದ ವಿಶ್ವದ ಮೂರನೇ ಆಲ್‌ರೌಂಡರ್‌ ಎಂಬ ಹಿರಿಮೆ ತಮ್ಮದಾಗಿಸಿಕೊಂಡರು. ಇವರಿಗಿಂತ ಮೊದಲು ಗ್ಯಾರಿ ಸೋಬರ್ಸ್ ಮತ್ತು ಜಾಕ್ವೆಸ್ ಕಾಲಿಸ್ ಈ ಸಾಧನೆ ಮಾಡಿದ್ದಾರೆ.

India vs England 4th Test Rahul Gill lead India s fightback after Stokes ton

ಇನಿಂಗ್ಸ್‌ ಹಿನ್ನಡೆಯೊಂದಿಗೆ ಎರಡನೇ ಇನಿಂಗ್ಸ್‌ ಆರಂಭಿಸಿದ ಟೀಮ್ ಇಂಡಿಯಾದ ಆರಂಭ ಕಳಪೆಯಾಗಿತ್ತು. ಟೀಮ್ ಇಂಡಿಯಾದ ಆರಂಭಿಕ ಯಶಸ್ವಿ ಜೈಸ್ವಾಲ್‌ ರನ್‌ ಕಲೆ ಹಾಕುವಲ್ಲಿ ಪರದಾಟ ನಡೆಸಿದರು. ನಂತರ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ ಸಾಯಿ ಸುದರ್ಶನ್‌ ಸಹ ಬಂದು ಹೋಗುವ ಸಂಪ್ರದಾಯವನ್ನು ಮುಗಿಸಿದರು. ಈ ಮೂಲಕ ಭಾರತ ಖಾತೆ ತೆರೆಯುವ ಮುನ್ನವೇ ಎರಡು ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

ಅಜೇಯ 174 ರನ್‌ ಜೊತೆಯಾಟ

ಖಾತೆ ತೆರೆಯುವ ಮುನ್ನವೇ ಟೀಮ್ ಇಂಡಿಯಾ ಎರಡು ವಿಕೆಟ್‌ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಈ ವೇಳೆಗೆ ತಂಡಕ್ಕೆ ಆಧಾರವಾಗಿದ್ದು, ಆರಂಭಿಕ ಆಟಗಾರ ಕೆಎಲ್ ರಾಹುಲ್‌ ಮತ್ತು ನಾಯಕ ಶುಭಮನ್‌ ಗಿಲ್ ಜೋಡಿ ಅಮೋಘ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿಯನ್ನು ಕಟ್ಟಿ ಹಾಕುವಲ್ಲಿ ಇಂಗ್ಲೆಂಡ್ ಬೌಲರ್ಸ್‌ಗಳು ವಿಫಲರಾದರು. ಈ ಜೋಡಿ 377 ಎಸೆತಗಳನ್ನು ಎದುರಿಸಿ ಅಜೇಯ 174 ರನ್‌ಗಳ ಜೊತೆಯಾಟವನ್ನು ನೀಡಿದೆ. ಕೆಎಲ್ ರಾಹುಲ್ 8 ಬೌಂಡರಿ ನೆರವಿನಿಂದ ಅಜೇಯ 87 ರನ್‌ ಹಾಗೂ ನಾಯಕ ಗಿಲ್ 10 ಬೌಂಡರಿ ಸಹಾಯದಿಂದ ಅಜೇಯ 78 ರನ್‌ ಸಿಡಿಸಿ, ಕೊನೆಯ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಭಾರತ ಇನಿಂಗ್ಸ್‌ ಮುನ್ನಡೆ ಸಾಧಿಸಲು 137 ರನ್‌ ಅವಶ್ಯಕತೆ ಇದೆ.

Story first published: Sunday, July 27, 2025, 0:38 [IST]
Other articles published on Jul 27, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+