Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Manchester Test: ನಾಲ್ಕನೇ ಟೆಸ್ಟ್‌ನಲ್ಲಿ ಟೀಮ್ ಇಂಡಿಯಾದಲ್ಲಿ ಬದಲಾವಣೆಯ ಗಾಳಿ: ಕನ್ನಡಿಗನ ಸ್ಥಾನಕ್ಕೆ ಅಪಾಯ

ಭಾರತ ಹಾಗೂ ಇಂಗ್ಲೆಂಡ್‌ ನಡುವಣ ಆಂಡರ್ಸನ್‌ ಹಾಗೂ ತೆಂಡೂಲ್ಕರ್‌ ಸರಣಿಯ ನಾಲ್ಕನೇ ಟೆಸ್ಟ್‌ ಪಂದ್ಯ ಮ್ಯಾಚೆಂಸ್ಟರ್‌ನಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಭರ್ಜರಿ ತಯಾರಿಯನ್ನು ನಡೆಸಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ. ಈ ವೇಳೆ ಟೀಮ್ ಇಂಡಿಯಾ ತನ್ನ ತಂಡದಲ್ಲಿ ಬದಲಾವಣೆಗಳನ್ನು ಮಾಡಿಕೊಳ್ಳುವ ಸಾಧ್ಯತೆ ಇದೆ. ಹಾಗಿದ್ದರೆ ಟೀಮ್ ಇಂಡಿಯಾದಲ್ಲಿ ಆಗಬಹುದಾದ ಬದಲಾವಣೆಗಳ ಬಗ್ಗೆ ವರದಿ ಇಲ್ಲಿದೆ.

ಲಾರ್ಡ್ಸ್‌ನಲ್ಲಿ ಟೀಮ್ ಇಂಡಿಯಾ 22 ರನ್‌ಗಳಿಂದ ಸೋಲು ಕಂಡು ನಿರಾಸೆಯನ್ನು ಅನುಭವಿಸಿತು. ಈ ಮೂಲಕ ಭಾರತ 5 ಪಂದ್ಯಗಳ ಸರಣಿಯಲ್ಲಿ 1-2ರಿಂದ ಹಿನ್ನಡೆ ಅನುಭವಿಸುತ್ತಿದೆ. ಹೀಗಾಗಿ ನಾಲ್ಕನೇ ಟೆಸ್ಟ್‌ ಪಂದ್ಯದಲ್ಲಿ ಟೀಮ್ ಇಂಡಿಯಾ ಪುಟಿದೇಳುವ ಅವಶ್ಯಕತೆ ಇದೆ. ಹೀಗಾಗಿ ತಂಡದಲ್ಲಿ ಬದಲಾವಣೆಯ ಗಾಳಿ ಬೀಸುವ ಸಾಧ್ಯತೆ ಹೆಚ್ಚಿದೆ. ಅದ್ರಲ್ಲೂ ಬ್ಯಾಟಿಂಗ್ ವಿಭಾಗದಲ್ಲಿ ಈ ಇಬ್ಬರು ಆಟಗಾರರಿಗೆ ಬೆಂಚ್‌ ಕಾಯುವುದು ಫಿಕ್ಸ್‌ ಎಂದು ಹೇಳಲಾಗುತ್ತಿದೆ.

India vs England 4th Test Team India s Possible Changes After Lords Defeat

ಟೀಮ್ ಇಂಡಿಯಾದ ಬ್ಯಾಟರ್‌ಗಳು ಈ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿದ್ದಾರೆ. ಅಲ್ಲದೆ ಆದರೆ ಲಾರ್ಡ್ಸ್ ಪಂದ್ಯದಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರಿಂದ, ಟೀಮ್ ಇಂಡಿಯಾ ಆಘಾತ ಅನುಭವಿಸಿತು. ಹೀಗಾಗಿ ಟೀಮ್ ಮ್ಯಾನೇಜ್ಮೆಂಟ್‌ ಬ್ಯಾಟಿಂಗ್ ವಿಭಾಗವನ್ನು ಬಲ ಪಡಿಸುವ ನಿಟ್ಟಿನಲ್ಲಿ ಕಳೆದ ಪಂದ್ಯದಲ್ಲಿ ಸ್ಥಿರ ಪ್ರದರ್ಶನದಲ್ಲಿ ವಿಫಲವಾಗಿದ್ದ ಆಟಗಾರರಿಗೆ ಕೈ ಬಿಡುವ ಸಾಧ್ಯತೆ ಇದೆ.

ಆರಂಭಿಕನಿಗೆ ಕಂಟಕ

ಟೀಮ್ ಇಂಡಿಯಾದ ಭರವಸೆಯ ಆಟಗಾರ ಯಶಸ್ವಿ ಜೈಸ್ವಾಲ್‌, ಲೀಡ್ಸ್‌ನಲ್ಲಿ ನಡೆದಿದ್ದ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ್ದರು. ಆದರೆ ಇವರು ಮೂರನೇ ಪಂದ್ಯದಲ್ಲಿ ರನ್‌ ಕಲೆ ಹಾಕುವಲ್ಲಿ ವಿಫಲರಾದರು. ಅಲ್ಲದೆ ನೆಲಕಚ್ಚಿ ನಿಂತು ರನ್‌ ಕಲೆ ಹಾಕುವಲ್ಲಿ ವಿಫಲರಾಗಿ ಸುಲಭವಾಗಿ ತಮ್ಮ ವಿಕೆಟ್‌ ಒಪ್ಪಿಸಿದರು. ಹೀಗಾಗಿ ಟೀಮ್ ಇಂಡಿಯಾ ಬ್ಯಾಟಿಂಗ್ ವಿಭಾಗಕ್ಕೆ ಪೆಟ್ಟು ಬಿದ್ದಿತು. ಹೀಗಾಗಿ ಇವರಿಗೆ ನಾಲ್ಕನೇ ಟೆಸ್ಟ್‌ನಲ್ಲಿ ಚಾನ್ಸ್‌ ಸಿಗುವುದು ಕಡಿಮೆ ಎಂದು ಹೇಳಲಾಗುತ್ತಿದೆ.

ಕನ್ನಡಿಗನಿಗೆ ಚಾನ್ಸ್‌ ಸಿಗುವುದು ಡೌಟ್‌

ದೇಶೀಯ ಟೂರ್ನಿಗಳಲ್ಲಿ ಅಬ್ಬರದ ಪ್ರದರ್ಶನ ನೀಡಿ ಆಯ್ಕೆದಾರರ ಗಮನ ಸೆಳೆದಿದ್ದ ಕರ್ನಾಟಕದ ಕರುಣ್‌ ನಾಯರ್‌, ಇಂಗ್ಲೆಂಡ್‌ ಸರಣಿಯಲ್ಲಿ ಮೂರು ಪಂದ್ಯಗಳಲ್ಲಿ ಆಡುವ ಅವಕಾಶವನ್ನು ಪಡೆದರು. ಆದರೆ ಇವರು ಆರು ಇನಿಂಗ್ಸ್‌ಗಳಲ್ಲಿ ಒಂದೇ ಒಂದು ಬಿಗ್ ಹಿಟ್ ಬಾರಿಸುವಲ್ಲಿ ವಿಫಲರಾಗಿ ನಿರಾಸೆ ಅನುಭವಿಸಿದರು. ಇದರಿಂದ ಟೀಮ್ ಮ್ಯಾನೇಜ್ಮೆಂಟ್‌ ಇವರ ಮೇಲಿನ ಭರವಸೆಯನ್ನು ನುಚ್ಚುನೂರು ಮಾಡಿದರು. ಇವರು ಬ್ಯಾಟಿಂಗ್‌ ವೇಳೆ ನೆಲಕಚ್ಚಿ ನಿಂತು ದೊಡ್ಡ ಇನಿಂಗ್ಸ್‌ ಕಟ್ಟುವ ಭರವಸೆಯನ್ನು ಮೂಡಿಸಿದ್ದಾರೆ. ಆದರೆ ಇದನ್ನು ಬಿಗ್ ಹಿಟ್ ಆಗಿ ಕನ್ವರ್ಟ್‌ ಮಾಡುವಲ್ಲಿ ಎಡವಿದ್ದಾರೆ. ಹೀಗಾಗಿ ಟೀಮ್ ಇಂಡಿಯಾ ನಾಲ್ಕನೇ ಟೆಸ್ಟ್‌ ಪಂದ್ಯದಲ್ಲಿ ಇವರನ್ನು ಕೈ ಬಿಟ್ಟು ಬೇರೆ ಆಟಗಾರನಿಗೆ ಅವಕಾಶ ನೀಡುವ ಸಾಧ್ಯತೆ ಇದೆ.

Story first published: Wednesday, July 16, 2025, 8:48 [IST]
Other articles published on Jul 16, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+