ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್: ಈ ಐದು ಪ್ರಮುಖ ಮೈಲಿಗಲ್ಲುಗಳನ್ನು ನೆಡಲಿದ್ದಾರಾ ವಿರಾಟ್ ಕೊಹ್ಲಿ!

India vs England: 5 milestones Virat Kohli could reach in test series against England
5 ಸರಣಿಗಳಲ್ಲಿ 5 ದಾಖಲೆ ಮಾಡ್ತಾರಾ ವಿರಾಟ್ ಕೊಹ್ಲಿ?? | Oneindia Kannada

ನಾಟಿಂಗ್‌ಹ್ಯಾಮ್, ಆಗಸ್ಟ್ 2: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿ ಆಗಸ್ಟ್ ನಾಲ್ಕರಿಂದ ನಾಟಿಂಗ್‌ಹ್ಯಾಮ್‌ನಲ್ಲಿ ಆರಂಭವಾಗಲಿದೆ. ಭಾರತ ಹಾಗೂ ಇಂಗ್ಲೆಂಡ್ ಟೆಸ್ಟ್ ತಂಡಗಳು ಈ ಸರಣಿಯಲ್ಲಿ ತೀವ್ರ ಪೈಪೋಟಿಗಿಳಿದು ಕಾದಾಟವನ್ನು ನಡೆಸಲಿದೆ. ಈ ಎರಡು ತಂಡಗಳು ಕೂಡ ಇತ್ತೀಚಿನ ದಿನಗಳಲ್ಲಿ ಅದ್ಭುತವಾಗಿ ಆಟವನ್ನು ಪ್ರದರ್ಶಿಸುತ್ತಿದ್ದು ಸಾಕಷ್ಟು ಜಿದ್ದಾಜಿದ್ದಿನಿಂದ ಕೂಡಿರುವುದರಲ್ಲಿ ಅನುಮಾನವಿಲ್ಲ.

ಈ ಕಳೆದ ಫೆಬ್ರವರಿ ಮಾರ್ಚ್ ತಿಂಗಳಿನಲ್ಲಿ ಇದೇ ಎರಡು ತಂಡಗಳು ಭಾರತದಲ್ಲಿ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾಗಿಯಾಗಿದ್ದವು. ಈ ಸರಣಿಯನ್ನು ಭಾರತ 3-1 ಅಂತರದಿಂದ ಗೆದ್ದು ಬೀಗಿತ್ತು. ಇದೀಗ ಭಾರತ ಇಂಗ್ಲೆಂಡ್‌ಗೆ ತೆರಳಿ ಅಲ್ಲಿ ಸರಣಿಯನ್ನಾಡಲು ಸಜ್ಜಾಗಿದೆ. ಹೀಗಾಗಿ ಇಂಗ್ಲೆಂಡ್ ನೆಲದಲ್ಲಿ ಭಾರತದ ಪ್ರದರ್ಶನ ಹೇಗಿರಲಿದೆ ಎಂಬುದು ಕುತೂಹಲ ಮೂಡಿಸಿದೆ. ಅದರಲ್ಲೂ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇಂಗ್ಲೆಂಡ್ ತಂಡದ ವಿರುದ್ಧ ಉತ್ತಮ ಪ್ರದರ್ಶನ ನೀಡಲು ಸಜ್ಜಾಗಿದ್ದಾರೆ.

ಹಾಕಿ: ಬಲಿಷ್ಠ ಆಸ್ಟ್ರೇಲಿಯಾವನ್ನು ಸದೆಬಡಿದು ಸೆಮಿಫೈನಲ್ ಪ್ರವೇಶಿಸಿ ಇತಿಹಾಸ ನಿರ್ಮಿಸಿದ ಭಾರತ ಮಹಿಳಾ ತಂಡ!ಹಾಕಿ: ಬಲಿಷ್ಠ ಆಸ್ಟ್ರೇಲಿಯಾವನ್ನು ಸದೆಬಡಿದು ಸೆಮಿಫೈನಲ್ ಪ್ರವೇಶಿಸಿ ಇತಿಹಾಸ ನಿರ್ಮಿಸಿದ ಭಾರತ ಮಹಿಳಾ ತಂಡ!

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಈ ಸರಣಿಯಲ್ಲಿ ಕೆಲ ಮಹತ್ವದ ಮೈಲಿಗಲ್ಲುಗಳನ್ನು ತಮ್ಮ ಹೆಸರಿಗೆ ಬರೆಯುವ ಅವಕಾಶವಿದೆ. ಅವುಗಳ ಬಗ್ಗೆ ಗಮನಹರಿಸೋಣ. ಮುಂದೆ ಓದಿ..

ಟೆಸ್ಟ್ ಕ್ರಿಕೆಟ್‌ನಲ್ಲಿ 8000 ರನ್

ಟೆಸ್ಟ್ ಕ್ರಿಕೆಟ್‌ನಲ್ಲಿ 8000 ರನ್

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಈ ಬಾರಿಯೂ ಇಂಗ್ಲೆಂಡ್ ವಿರುದ್ಧ ಭರ್ಜರಿ ಪ್ರದರ್ಶನ ನೀಡುವ ನಿರೀಕ್ಷೆಯಲ್ಲಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಈವರೆಗೆ ಒಟ್ಟು 7547 ರನ್‌ಗಳಿಸಿದ್ದಾರೆ. ಈ ಸರಣಿಯಲ್ಲಿ ಐದು ಪಂದ್ಯಗಳು ಇರುವ ಕಾರಣದಿಂದಾಗಿ ಕೊಹ್ಲಿ 453 ರನ್‌ಗಳಿಸಲು ಯಶಸ್ವಿಯಾದರೆ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ 8000 ರನ್‌ಗಳಿಸಿದ ಸಾಧನೆ ಮಾಡಲಿದ್ದಾರೆ.

71ನೇ ಶತಕದ ಸಾಧನೆ

71ನೇ ಶತಕದ ಸಾಧನೆ

ವಿರಾಟ್ ಕೊಹ್ಲಿ ಈವರೆಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಟ್ಟಾರೆ 70 ಶತಕ ದಾಖಲಿಸಿದ್ದಾರೆ. ಆದರೆ ಮತ್ತೊಂದು ಶತಕವನ್ನು ಗಳಿಸಲು ಕೊಹ್ಲಿ ಇತ್ತೀಚೆಗೆ ವಿಫಲವಾಗುತ್ತಿದ್ದಾರೆ. ಸದ್ಯ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಶತಕಗಳಿಸಿದ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ 70 ಶತಕಗಳೊಂದಿಗೆ ಎರಡನೇ ಸ್ಥಾನವನ್ನು ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಅವರೊಂದಿಗೆ ಹಂಚಿಕೊಂಡಿದ್ದಾರೆ. ಈ ಸರಣಿಯಲ್ಲಿ ಶತಕ ದಾಖಲಿಸಲು ಯಶಸ್ವಿಯಾದರೆ ರಿಕಿ ಪಾಂಟಿಂಗ್ ಹಿಂದಿಕ್ಕಿ ಎರಡನೇ ಸ್ಥಾನಕ್ಕೇರಲಿದ್ದಾರೆ.

ಇಂಗ್ಲೆಂಡ್ ವಿರುದ್ಧ 2000 ರನ್‌

ಇಂಗ್ಲೆಂಡ್ ವಿರುದ್ಧ 2000 ರನ್‌

ಇನ್ನು ವಿರಾಟ್ ಕೊಹ್ಲಿ ಈಗ ಇಂಗ್ಲೆಂಡ್ ತಂಡದ ವಿರುದ್ಧ 23 ಟೆಸ್ಟ್ ಪಂದ್ಯಗಳನ್ನು ಆಡಿದ್ದು 1742 ರನ್‌ಗಳಿಸಿದ್ದಾರೆ. ಈ ಸರಣಿಯಲ್ಲಿ 258 ರನ್‌ಗಳಿಸಿದರೆ ಕೊಹ್ಲಿ ಇಂಗ್ಲೆಂಡ್ ವಿರುದ್ಧ 2000 ರನ್‌ಗಳನ್ನು ಗಳಿಸಿದಂತಾಗುತ್ತದೆ. ಅಲ್ಲದೆ ದಿಗ್ಗಜ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರ 1950 ರನ್‌ಗಳನ್ನು ಹಿಂದಿಕ್ಕುವ ಅವಕಾಶವೂ ಕೊಹ್ಲಿ ಮುಂದಿದೆ.

ದಿಗ್ಗಜರನ್ನು ಹಿಂದಿಕ್ಕಲು ಬೇಕು ಎರಡು ಶತಕ

ದಿಗ್ಗಜರನ್ನು ಹಿಂದಿಕ್ಕಲು ಬೇಕು ಎರಡು ಶತಕ

ಭಾರತ ತಂಡದ ಇಬ್ಬರು ದಿಗ್ಗಜ ಆಟಗಾರರಾದ ಸಚಿನ್ ತೆಂಡೂಲ್ಕರ್ ಹಾಗೂ ರಾಹುಲ್ ದ್ರಾವಿಡ್ ಇಂಗ್ಲೆಂಡ್ ತಂಡದ ವಿರುದ್ಧ 7 ಶತಕವನ್ನು ದಾಖಲಿಸಿದ್ದಾರೆ. ವಿರಾಟ್ ಕೊಹ್ಲಿ ಇಂಗ್ಲೆಂಡ್ ತಂಡದ ವಿರುದ್ಧ ಈವರೆಗೆ ಐದು ಶತಕಗಳನ್ನು ದಾಖಲಿಸಿದ್ದಾರೆ. ಐದು ಪಂದ್ಯಗಳ ಈ ಸರಣಿಯಲ್ಲಿ ವಿರಾಟ್ ಕೊಹ್ಲಿ ಮೂರು ಶತಕವನ್ನು ದಾಖಲಿಸಲು ಸಾಧ್ಯವಾದರೆ ಈ ದಿಗ್ಗಜರಿಬ್ಬರ ಸಾಧನೆಯನ್ನು ಹಿಂದಿಕ್ಕಿದಂತಾಗುತ್ತದೆ

ಕ್ಯಾಚ್‌ಗಳ ಶತಕ

ಕ್ಯಾಚ್‌ಗಳ ಶತಕ

ಉತ್ತಮ ಫೀಲ್ಡರ್ ಆಗಿಯೂ ಗುರುತಿಸಿಕೊಂಡಿರುವ ಭಾರತೀಯ ತಂಡದ ನಾಯಕ ವಿರಾಟ್ ಕೊಹ್ಲಿ ಫಿಲ್ಡಿಂಗ್‌ನಲ್ಲಿಯೂ ಮೈಲಿಗಲ್ಲೊಂದನ್ನು ದಾಟುವ ಅವಕಾಶವಿದೆ. ಈವರೆಗೆ ವಿರಾಟ್ ಕೊಹ್ಲಿ ಟೆಸ್ಟ್‌ನಲ್ಲಿ 90 ಕ್ಯಾಚ್ ಪಡೆದಿದ್ದಾರೆ. ಐದು ಪಂದ್ಯಗಳಲ್ಲಿ 10 ಕ್ಯಾಚ್ ಪಡೆಯಲು ಸಾಧ್ಯವಾದರೆ ಕ್ಯಾಚ್‌ನಲ್ಲಿಯೂ ಶತಕದ ಸಾಧನೆ ಮಾಡಿದಂತಾಗುತ್ತದೆ.

Story first published: Monday, August 2, 2021, 16:14 [IST]
Other articles published on Aug 2, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X