ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್: ಎರಡನೇ ಟೆಸ್ಟ್ ಪಂದ್ಯಕ್ಕೆ ಪ್ರೇಕ್ಷಕರಿಗೆ ಅವಕಾಶ ನೀಡಲು ನಿರ್ಧಾರ

India vs England: 50 per cent crowd for 2nd Test at Chennai

ಬಿಸಿಸಿಐ ಹಾಗೂ ತಮಿಳುನಾಡು ಕ್ರಿಕೆಟ್ ಅಸೊಸಿಯೇಶನ್ (ಟಿಎನ್‌ಸಿಎ) ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೆ ಪ್ರೇಕ್ಷಕರಿಗೆ ಅವಕಾಶವನ್ನು ನೀಡಲು ನಿರ್ಧಾರವನ್ನು ಕೈಗೊಂಡಿದೆ. ಕ್ರೀಡಾಂಗಣದ ಸಾಮರ್ಥ್ಯದ 50ರಷ್ಟು ಪ್ರೇಕ್ಷಕರಿಗೆ ಅವಕಾಶವನ್ನು ನೀಡಲು ಸೋಮವಾರ ನಡೆಸಿದ ಸಭೆಯಲ್ಲಿ ತೀರ್ಮಾನವನ್ನು ಕೈಗೊಂಡಿದೆ. ಈ ಬಗ್ಗೆ ಟಿಎನ್‌ಸಿಎ ಅಧಿಕಾರಿಗಳು ಪಿಟಿಐ ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿದೆ.

ಸಾರ್ವಜನಿಕ ಸಂಚಾರ ಹಾಗೂ ಕ್ರೀಡಾಕೂಟಗಳಿಗೆ ಪ್ರೇಕ್ಷಕರಿಗೆ ಅವಕಾಶ ನೀಡುವ ಹಿನ್ನೆಲೆಯಲ್ಲಿ ಹೊಸ ಕೋವಿಡ್-19 ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದ ಹಿನ್ನೆಲೆಯಲ್ಲಿ ಟಿಎಸ್‌ಸಿಎ ಅಧಿಕಾರಿಗಳು ಈ ಬಗ್ಗೆ ಚರ್ಚೆಯನ್ನು ನಡೆಸಿದ್ದರು. ಬಳಿಕ ಬಿಸಿಸಿಐ ಜೊತೆಗೆ ಮಾತುಕತೆ ನಡೆಸಿದ್ದು ಬಳಿಕ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಟೀಮ್ ಇಂಡಿಯಾಗೆ ಇಂಗ್ಲೆಂಡ್ ಬೆಂಬಲಿಸಿದ ಸಂಗತಿ ಹೇಳಿದ ಸ್ಟುವರ್ಟ್ ಬ್ರಾಡ್ಟೀಮ್ ಇಂಡಿಯಾಗೆ ಇಂಗ್ಲೆಂಡ್ ಬೆಂಬಲಿಸಿದ ಸಂಗತಿ ಹೇಳಿದ ಸ್ಟುವರ್ಟ್ ಬ್ರಾಡ್

"ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೆ ಪ್ರೇಕ್ಷಕರಿಗೆ ಅವಕಾಶವನ್ನು ನಿಡುವ ಬಗ್ಗೆ ನಾವು ಬಿಸಿಸಿಐ ಜೊತೆಗೆ ಚರ್ಚೆಯನ್ನು ನಡೆಸಿದ್ದೇವೆ. ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗಿರುವ ಹೊಸ ಕೊರೊನಾ ಮಾರ್ಗಸೂಚಿಯನ್ವಯ ಕ್ರೀಡಾಕೂಟಗಳಿಗೆ ಪ್ರೇಕ್ಷಕರಿಗೆ ಅವಕಾಶವನ್ನು ನೀಡುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆಯಿತು. ಭಾನುವಾರವೇ ರಾಜಸ್ಯ ಸರ್ಕಾರ ಕೂಡ ಈ ಬಗ್ಗೆ ಎಸ್‌ಒಪಿಯನ್ನು ನೀಡಿದೆ" ಎಂದು ಟಿಎನ್‌ಸಿಎ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

"ಎಲ್ಲಾ ಮುಂಜಾಗ್ರಥಾ ಕ್ರಮಗಳನ್ನು ವಹಿಸಿಕೊಂಡು ಶೇಕಡಾ 50ರಷ್ಟು ಪ್ರೇಕ್ಷಕರಿಗೆ ಅವಕಾಶವನ್ನು ನೀಡಲು ಬಿಸಿಸಿಐ ಹಾಗೂ ಟಿಎನ್‌ಸಿಎ ನಿರ್ಧಾರವನ್ನು ಕೈಗೊಂಡಿದೆ" ಎಂದು ಅಧಿಕಾರಿ ವಿವರಿಸಿದರು. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಮ್‌ 50,000 ಪ್ರೇಕ್ಷಕರ ಸಾಮರ್ಥ್ಯವನ್ನು ಹೊಂದಿದ್ದು 25,000 ಪ್ರೇಕ್ಷಕರಿಗೆ ಅವಕಾಶವನ್ನು ನೀಡಲಾಗಿದೆ. ಇನ್ನು ಮಾಧ್ಯಮಗಳಿಗೂ ಪ್ರೆಸ್ ಬಾಕ್ಸ್‌ಗೆ ಅವಕಾಶವನ್ನು ನೀಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಆದರೆ ಮಾಧ್ಯಮಗೋಷ್ಠಿ ಮಾತ್ರ ವರ್ಚುವಲ್ ರೂಪದಲ್ಲಿಯೇ ನಡೆಯಲಿದೆ.

ಎಂಎ ಚಿದಂಬರಂ ಅಂಗಳದಲ್ಲಿ ಮೊದಲ ಟೆಸ್ಟ್ ಇದೇ ಶುಕ್ರವಾರದಂದು ಆರಂಭವಾಗಲಿದೆ. ಎರಡನೇ ಟೆಸ್ಟ್ ಪಂದ್ಯ ಫೆಬ್ರವರಿ 13ನೇ ತಾರೀಕಿನಂದು ಆರಂಭವಾಗಲಿದೆ. ಅಹ್ಮದಾಬಾದ್‌ನಲ್ಲಿ ನಡೆಯಲಿರುವ ಅಂತಿಮ ಎರಡು ಟೆಸ್ಟ್ ಪಂದ್ಯಗಳಿಗೆ ಪ್ರೇಕ್ಷಕರಿಗೆ ಅವಕಾಶವನ್ನು ನೀಡಲು ಈಗಾಗಲೇ ಒಪ್ಪಿಗೆಯನ್ನು ಪಡೆದುಕೊಳ್ಳಲಾಗಿದೆ.

Story first published: Monday, February 1, 2021, 16:44 [IST]
Other articles published on Feb 1, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X