ಭಾರತ vs ಇಂಗ್ಲೆಂಡ್, 5ನೇ ಟಿ20ಐ, ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಗೆಲುವು

ಅಹ್ಮದಾಬಾದ್: ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಶನಿವಾರ (ಮಾರ್ಚ್ 20) ನಡೆದ ಭಾರತ-ಇಂಗ್ಲೆಂಡ್ ಐದನೇ ಮತ್ತು ಕೊನೇಯ ಟಿ20ಐ ಪಂದ್ಯದಲ್ಲಿ ಟೀಮ್ ಇಂಡಿಯಾ 36 ರನ್ ಅಧಿಕಾರಯುತ ಜಯ ಗಳಿಸಿದೆ. ನಾಯಕ ವಿರಾಟ್ ಕೊಹ್ಲಿ ಮತ್ತು ಉಪನಾಯಕ ರೋಹಿತ್ ಶರ್ಮಾ ಅರ್ಧಶತಕದ ಕೊಡುಗೆ ಮತ್ತು ಶಾರ್ದೂಲ್ ಠಾಕೂರ್ ಬೌಲಿಂಗ್ ಬಲದೊಂದಿಗೆ ಭಾರತ ಟಿ20ಐ ಸರಣಿಯಲ್ಲಿ 3-2ರ ಜಯ ದಾಖಲಿಸಿದೆ.
ಐದು ಪಂದ್ಯಗಳ ಟಿ20ಐ ಸರಣಿಯೀಗ 2-2ರಿಂದ ಸಮಬಲಗೊಂಡಿತ್ತು. ಹೀಗಾಗಿ ಇಂದಿನ ಪಂದ್ಯದ ಫಲಿತಾಂಶ ಕುತೂಹಲ ಮೂಡಿಸಿತ್ತು. ಈ ಪಂದ್ಯದಲ್ಲಿ ಪ್ಲೇಯಿಂಗ್ XIನಿಂದ ಕೆಎಲ್ ರಾಹುಲ್ ಹೊರ ಬಿದ್ದಿದ್ದರು. ಇನ್ನು ವೇಗಿಗಳ ಬಣದಲ್ಲಿ ಟಿ ನಟರಾಜನ್ ಕಾಣಿಸಿಕೊಂಡಿದ್ದರು. ಉಳಿದಂತೆ ಬಹುತೇಕ ಹಿಂದಿನ ತಂಡವೇ ಇತ್ತು. ಇಂಗ್ಲೆಂಡ್ ತಂಡದಲ್ಲಿ ಬದಲಾವಣೆಯಿರಲಿಲ್ಲ.
ಭಾರತ vs ಇಂಗ್ಲೆಂಡ್, 5ನೇ ಟಿ20ಐ ಪಂದ್ಯ, Live ಸ್ಕೋರ್‌ಕಾರ್ಡ್
ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ (ಸಿ), ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆ), ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ಶಾರ್ದೂಲ್ ಠಾಕೂರ್, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ರಾಹುಲ್ ಚಾಹರ್, ಟಿ ನಟರಾಜನ್.
ಇಂಗ್ಲೆಂಡ್ ಪ್ಲೇಯಿಂಗ್ XI: ಜೇಸನ್ ರಾಯ್, ಜೋಸ್ ಬಟ್ಲರ್ (ವಿಕೆ), ಡೇವಿಡ್ ಮಲನ್, ಜಾನಿ ಬೈರ್‌ಸ್ಟೋವ್, ಇಯಾನ್ ಮಾರ್ಗನ್ (ಸಿ), ಬೆನ್ ಸ್ಟೋಕ್ಸ್, ಸ್ಯಾಮ್ ಕರ್ರನ್, ಕ್ರಿಸ್ ಜೋರ್ಡಾನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಮಾರ್ಕ್ ವುಡ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications