ಭಾರತ ಹಾಗೂ ಇಂಗ್ಲೆಂಡ್ ನಡುವಣ ಐದನೇ ಟೆಸ್ಟ್ ಪಂದ್ಯ ಓವಲ್‌ನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿ ಸರಣಿಯಲ್ಲಿ ಸಮಬಲ ಸಾಧಿಸುವ ಆಸೆ ಪ್ರವಾಸಿ ಭಾರತ ತಂಡದ್ದಾಗಿದೆ. ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಯಾವ ಕಾಂಬಿನೇಷನ್‌ನೊಂದಿಗೆ ಕಣಕ್ಕೆ ಇಳಿಯಲಿದೆ ಎಂಬುದೇ ದೊಡ್ಡ ಪ್ರಶ್ನೆ ಆಗಿದೆ. ಐದನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಅನುಭವಿ ಬೌಲರ್ ಜಸ್ಪ್ರೀತ್ ಬುಮ್ರಾ ಆಡುತ್ತಾರೋ ಇಲ್ಲವೋ ಎಂಬ ಬಗ್ಗೆ ಪ್ರಶ್ನೆಗಳು ಎದ್ದಿವೆ. ಟೀಮ್ ಇಂಡಿಯಾ ಕ್ಯಾಂಪ್‌ನಲ್ಲಿ ಗಾಯಾಳುಗಳ ಸಮಸ್ಯೆ ಬಹುವಾಗಿ ಕಾಡುತ್ತಿದೆ.
ಟೀಮ್ ಇಂಡಿಯಾ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಬ್ಯಾಟರ್‌ಗಳು ಅಮೋಘ ಪ್ರದರ್ಶನ ನೀಡಿದ್ದರು. ಆದರೆ ತಂಡಕ್ಕೆ ಬೌಲರ್‌ಗಳದ್ದೇ ದೊಡ್ಡ ಚಿಂತೆಯಾಗಿದೆ. ಟೀಮ್ ಇಂಡಿಯಾ ಕೊನೆಯ ಟೆಸ್ಟ್ ಪಂದ್ಯದಲ್ಲಿ 20 ವಿಕೆಟ್ ಪಡೆಯುವುದು ಹೇಗೆ ಎಂಬ ಪ್ರಶ್ನೆಗಳು ಉದ್ಭವಿಸಿವೆ. ಇದಕ್ಕಾಗಿ ಟೀಮ್ ಇಂಡಿಯಾ ತಂಡದಲ್ಲಿ ಬದಲಾವಣೆಗಳನ್ನು ಮಾಡಿಕೊಳ್ಳುವುದು ಅವಶ್ಯಕ. ಟೀಮ್ ಇಂಡಿಯಾ ಐದನೇ ಪಂದ್ಯದಲ್ಲಿ ನುರಿತ ಸ್ಪಿನ್ ಬೌಲರ್ ಅವರನ್ನು ಕಣಕ್ಕೆ ಇಳಿಸುತ್ತಾ ಎಂಬ ಪ್ರಶ್ನೆಗಳು ಎದ್ದಿವೆ.

ಭಾರತ ಈಗಾಗಲೇ ಇಂಗ್ಲೆಂಡ್ ಪ್ರವಾಸದಲ್ಲಿ ನಾಲ್ಕು ಟೆಸ್ಟ್ ಪಂದ್ಯಗಳನ್ನು ಆಡಿದೆ. ಈ ವೇಳೆ ಟೀಮ್ ಇಂಡಿಯಾ ಅಭಿಮಾನಿಗಳಿಗೆ ಕಾಡುವ ಪ್ರಶ್ನೆ ಒಂದೇ, ಚೈನಾ ಮೆನ್ ಬೌಲರ್ ಕುಲ್‌ದೀಪ್ ಯಾದವ್ ಅವರಿಗೆ ತಂಡದಲ್ಲಿ ಕೊನೆಯ ಟೆಸ್ಟ್ ಪಂದ್ಯದಲ್ಲಿ ಆಡುವ ಅವಕಾಶ ಸಿಗುತ್ತದಾ? ಎಂಬ ಚಿಂತೆ ಕಾಡುತ್ತಿದೆ. ಕುಲ್‌ದೀಪ್ ಯಾದವ್ ಸಹ ಬೆಂಚ್ ಬಿಟ್ಟು ಮೈದಾನದಲ್ಲಿ ಕಮಾಲ್ ಮಾಡಲು ಕಾತುರದಿಂದ ಕಾಯುತ್ತಿದ್ದಾರೆ. ಈ ವೇಳೆ ಐದನೇ ಟೆಸ್ಟ್‌ಗೆ ಕುಲ್‌ದೀಪ್ ಸೇರಿಕೊಳ್ಳಬೇಕು ಎಂಬ ಕೂಗ ಬಹುವಾಗಿ ಕೇಳಿ ಬರುತ್ತಿದೆ.
ಕುಲ್‌ದೀಪ್ ಯಾದವ್ ಸುಮಾರು 7 ವರ್ಷಗಳ ಹಿಂದೆ ಇಂಗ್ಲೆಂಡ್‌ನಲ್ಲಿ ಆಡಿದ್ದರು. 2018ರಲ್ಲಿ ನಡೆದ ಆ ಪಂದ್ಯದಲ್ಲಿ ಕುಲ್‌ದೀಪ್ ಯಾದವ್ ಒಂದೇ ಒಂದು ವಿಕೆಟ್ ಪಡೆದಿರಲಿಲ್ಲ. ಹೀಗಾಗಿ ಈ ಬಾರಿಯೂ ಅವರನ್ನು ತಂಡಕ್ಕೆ ಸೇರಿಸಿಕೊಂಡು ಬೆಂಚ್ ಕಾಯಿಸಲಾಗಿತ್ತು. ಆದರೆ ಈಗ ಟೀಮ್ ಇಂಡಿಯಾಕ್ಕೆ ಗೆಲುವಿನ ಅಗತ್ಯವಿದೆ. ಈ ಸಮಯದಲ್ಲಿ ಟೀಮ್ ಇಂಡಿಯಾಗೆ ತನ್ನ ಪ್ರೈಮ್ ಬೌಲರ್ ಅವಶ್ಯಕತೆ ಹೆಚ್ಚಿದೆ. ಕುಲ್‌ದೀಪ್ ಯಾದವ್ ತನ್ನ ಚೈನಾ ಮೆನ್ ಬೌಲಿಂಗ್ ಮೂಲಕ ಎಲ್ಲರ ಚಿತ್ತ ಕದ್ದಿದ್ದರು. ಇವರು ಐದನೇ ಟೆಸ್ಟ್ ಪಂದ್ಯದಲ್ಲಿ ಆಡಿದಲ್ಲಿ ಇಂಗ್ಲೆಂಡ್ ಬ್ಯಾಟರ್‌ಗಳನ್ನು ಕಾಡಬಹುದು.

ಒಟ್ಟಾರೆ ಇಂಗ್ಲೆಂಡ್ ವಿರುದ್ಧದ ಕುಲ್‌ದೀಪ್ ಯಾದವ್ ಪ್ರದರ್ಶನವನ್ನು ನೋಡಿದರೆ, ಇವರು ಇಂಗ್ಲೆಂಡ್ ವಿರುದ್ಧ 6 ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ 21 ವಿಕೆಟ್ ಕಬಳಿಸಿದ್ದಾರೆ. ಇವರು ಚೆನ್ನೈ ಹಾಗೂ ರಾಂಚಿಯಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಐದು ವಿಕೆಟ್ ಪಡೆದು ಸಾಧನೆ ಮಾಡಿದ್ದಾರೆ. ಹೀಗಾಗಿ ಇವರು ಕೊನೆಯ ಟೆಸ್ಟ್ ಪಂದ್ಯದಲ್ಲಿ ಆಡಿಸಬೇಕು ಎಂಬ ಒತ್ತಾಯ ಹೆಚ್ಚಾಗುತ್ತಿದೆ. ಭಾರತ ಹಾಗೂ ಇಂಗ್ಲೆಂಡ್ ನಡುವಣ ಐದನೇ ಟೆಸ್ಟ್ ಪಂದ್ಯ ಜುಲೈ 31 ರಂದು ಓವಲ್‌ನಲ್ಲಿ ನಡೆಯಲಿದೆ.