ಶಾರ್ದೂಲ್ ಠಾಕೂರ್ ಅಬ್ಬರದ ಪ್ರದರ್ಶನದ ಹಿಂದಿನ ಸಂದೇಶವನ್ನು ವಿವರಿಸಿದ ಆಕಾಶ್ ಚೋಪ್ರ

ಭಾರತ ಹಾಗೂ ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ಬೌಲರ್‌ಗಳು ಅಬ್ಬರಿಸಿದ್ದಾರೆ. ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್‌ಗೆ ಇಳಿದ ಭಾರತೀಯ ತಂಡದ ದಾಂಡಿಗರು ಮತ್ತೊಮ್ಮೆ ವೈಫಲ್ಯವನ್ನು ಅನುಭವಿಸಿದರು. ಇಂಗ್ಲೆಂಡ್ ತಂಡದ ಬೌಲರ್‌ಗಳ ದಾಳಿಗೆ ತತ್ತರಿಸಿದ ಟೀಮ್ ಇಂಡಿಯಾ ಬ್ಯಾಟ್ಸ್‌ಮನ್‌ಗಳು ಮತ್ತೊಂದು ಕನಿಷ್ಠ ಮೊತ್ತವನ್ನು ದಾಖಲಿಸುವ ಆತಂಕ ಮೂಡಿಸಿದರು. ಸ್ಪೆಶಲಿಸ್ಟ್ ಬ್ಯಾಟ್ಸ್‌ಮನ್‌ಗಳ ಪೈಕಿ ನಾಯಕ ವಿರಾಟ್ ಕೊಹ್ಲಿ ಮಾತ್ರವೇ 50 ರನ್‌ಗಳ ಕೊಡುಗೆಯನ್ನು ನೀಡುವ ಮೂಲಕ ಪ್ರತಿರೋಧ ವ್ಯಕ್ತಪಡಿಸಿದರು. ಉಳಿದ ಎಲ್ಲಾ ದಾಂಡಿಗರು ವೈಫಲ್ಯ ಅನುಭವಿಸಿದ ಕಾರಣ ಇಂಗ್ಲೆಂಡ್ ದಾಂಡಿಗರು ಟೀಮ್ ಇಂಡಿಯಾವನ್ನು ಮತ್ತೊಮ್ಮೆ ಕನಿಷ್ಠ ಮೊತ್ತಕ್ಕೆ ಆಲೌಟ್ ಮಾಡುವ ಲೆಕ್ಕಾಚಾರ ಮಾಡಿಕೊಂಡಿದ್ದರು. ಆದರೆ ಇಂಗ್ಲೆಂಡ್ ಬೌಲರ್‌ಗಳ ಲೆಕ್ಕಾಚಾರವನ್ನು ತಲೆಕೆಳಗಾಗುವಂತೆ ಮಾಡಿದ್ದು ಶಾರ್ದೂಲ್ ಠಾಕೂರ್.

8ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿದ ಶಾರ್ದೂಲ್ ಠಾಕೂರ್ ಸ್ಪೋಟಕವಾಗಿ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಟೆಸ್ಟ್ ಕ್ರಿಕೆಟ್ ಎಂಬುದನ್ನು ಮರೆಯುವಂತೆ ಬ್ಯಾಟ್ ಬೀಸಿದ ಠಾಕೂರ್ ಟೀಮ್ ಇಂಡಿಯಾದ ರನ್‌ವೇಗವನ್ನು ಹೆಚ್ಚಿಸಿದರು. ಕೇವಲ 36 ಎಸೆತ ಎದುರಿಸಿದ ಶಾರ್ದೂಲ್ 57 ರನ್‌ಗಳಿಸಿ ಅಂತಿಮ ಹಂತದಲ್ಲಿ ತಂಡಕ್ಕೆ ದೊಡ್ಡ ಕೊಡುಗೆ ನೀಡಿದರು. ಉಮೇಶ್ ಯಾದವ್ ಜೊತೆ ಸೇರಿ 50 ರನ್‌ಗಳ ಜೊತೆಯಾಟವನ್ನು ಕೂಡ ನೀಡಿ ಮಿಂಚಿದ್ದಾರೆ ಶಾರ್ದೂಲ್.

ಶಾರ್ದೂಲ್ ಬಾರಿಸಿದ ಈ ಸ್ಪೋಟಕ ಪ್ರದರ್ಶನಕ್ಕೆ ಸಾಕಷ್ಟು ಪ್ರಶಂಸೆಗಳು ವ್ಯಕ್ತವಾಗಿದೆ. ಅಂತಿಮ ಹಂತದಲ್ಲಿ ಮತ್ತೊಮ್ಮೆ ಟೀಮ್ ಇಂಡಿಯಾಗೆ ನೆರವಾದ ಶಾರ್ದೂಲ್ ಠಾಕೂರ್ ಸಾಮರ್ಥ್ಯಕ್ಕೆ ಕ್ರಿಕೆಟ್ ಪ್ರೇಮಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಈ ಮಧ್ಯೆ ಟೀಮ್ ಇಂಡಿಯಾ ಮಾಜಿ ಆಟಗಾರ ಹಾಲಿ ಕಾಮೆಂಟೇಟರ್ ಆಕಾಶ್ ಚೋಪ್ರ ಶಾರ್ದೂಲ್ ಠಾಕೂರ್ ಟಿ20 ವಿಶ್ವಕಪ್‌ನ ಆಯ್ಕೆಗೆ ಪರಿಗಣಿಸುವಂತೆ ಈ ಮೂಲಕ ಸೂಚನೆ ನೀಡುತ್ತಿದ್ದಾರೆ ಎಂದು ವಿಶ್ಲೇಷಿಸಿದ್ದಾರೆ.

'ಅತಿ ಕೆಟ್ಟ ಪದಗಳಿಂದ ಈ ತಂಡದ ಎಲ್ಲಾ ಆಟಗಾರರು ನನ್ನನ್ನು ನಿಂದಿಸಿದ್ದರು'; ಕಹಿ ಘಟನೆ ನೆನೆದ ಸೆಹ್ವಾಗ್'ಅತಿ ಕೆಟ್ಟ ಪದಗಳಿಂದ ಈ ತಂಡದ ಎಲ್ಲಾ ಆಟಗಾರರು ನನ್ನನ್ನು ನಿಂದಿಸಿದ್ದರು'; ಕಹಿ ಘಟನೆ ನೆನೆದ ಸೆಹ್ವಾಗ್

ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿರುವ ಆಕಾಶ್ ಚೋಪ್ರ ನಾಲ್ಕನೇ ಟೆಸ್ಟ್ ಪಂದ್ಯದ ಬಗ್ಗೆ ಮಾತನಾಡಿದ್ದಾರೆ. "ಆಕಾಶ್ ಚೋಪ್ರಾ ಈ ಪಂದ್ಯದಲ್ಲಿ ಅರ್ಧ ಶತಕವನ್ನು ಗಳಿಸುವ ಮೂಲಕ ಕೇವಲ ರನ್‌ಗಳನ್ನು ಮಾತ್ರವೇ ಸೇರಿಸಿಲ್ಲ. ಮುಂಬರುವ ಟಿ20 ವಿಶ್ವಕಪ್‌ಗೆ ಆಯ್ಕೆ ಮಾಡಲು ಈ ಮೂಲಕ ಅವರು ಸೂಚಿಸುತ್ತಿದ್ದಾರೆ. ಯಾಕೆಂದರೆ ಅವರು ಮತ್ತೊಂದು ಆಯ್ಕೆಯನ್ನು ಮುಂದಿಡುತ್ತಿದ್ದಾರೆ" ಎಂದು ಆಕಾಶ್ ಚೋಪ್ರ ಹೇಳಿದ್ದಾರೆ. ಜೊತೆಗೆ ಹಾರ್ದಿಕ್ ಪಾಂಡ್ಯಗೆ ಪರ್ಯಾಯವಾಗಬಲ್ಲ ಆಟಗಾರ ಶಾರ್ದೂಲ್ ಠಾಕೂರ್ ಎಂದು ಚೋಪ್ರ ತಿಳಿಸಿದ್ದಾರೆ.

ಇನ್ನು ಇದೇ ಸಂದರ್ಭದಲ್ಲಿ ಆಕಾಶ್ ಚೋಪ್ರ ಹಾರ್ದಿಕ್ ಪಾಂಡ್ಯ ಹಾಗೂ ಶಾರ್ದೂಲ್ ಠಾಕೂರ್ ನಡುವಿನ ವ್ಯತ್ಯಾಸವನ್ನು ತಿಳಿಸಿದ್ದಾರೆ. ಇಬ್ಬರನ್ನು ಹೋಲಿಕೆ ಮಾಡಿದಾಗ ಹಾರ್ದಿಕ್ ಪಾಂಡ್ಯ ಶಾರ್ಡೂಲ್‌ಗಿಂತ ಬ್ಯಾಟಿಂಗ್‌ನಲ್ಲಿ ಹೆಚ್ಚಿನ ಸಾಮರ್ಥ್ಯವನ್ನು ಹೊಂದಿರುವ ಆಟಗಾರ. ಆದರೆ ಶಾರ್ದೂಲ್ ಬೌಲಿಂಗ್‌ನಲ್ಲಿ ಹೆಚ್ಚಿನ ಸಾಮರ್ಥ್ಯವನ್ನು ಹೊಂದಿದ್ದು ಬ್ಯಾಟಿಂಗ್‌ನಲ್ಲಿಯೂ ನೆರವಾಗಿವ ಬಲ ಹೊಂದಿದ್ದಾರೆ. ಒಂದು ವೇಳೆ ಹಾರ್ದಿಕ್ ಪಾಂಡ್ಯ ತಂಡಕ್ಕೆ ಲಭ್ಯವಿದ್ದರೂ ಠಾಕೂರ್ ಆಡುವ ಬಳಗದಲ್ಲಿ ಸೇರ್ಪಡೆಯಾಗುವ ಮೂಲಕ ತಂಡದ ಬ್ಯಾಟಿಂಗ್ ವಿಭಾಗಕ್ಕೆ ಮತ್ತಷ್ಟು ಆಳವನ್ನು ನೀಡುತ್ತಾರೆ ಎಂದಿದ್ದಾರೆ.

ಇನ್ನು ಓವಲ್ ಅಂಗಳದಲ್ಲಿ ಶಾರ್ದೂಲ್ ಠಾಕೂರ್ ನೀಡಿದ ಪ್ರದರ್ಶನಕ್ಕೆ ಆಕಾಶ್ ಚೋಪ್ರ ಪ್ರೆಶಂಸೆಯನ್ನು ವ್ಯಕ್ತಪಡಿಸಿದ್ದಾರೆ. "ರಿಷಭ್ ಪಂತ್ ವಿಕೆಟ್ ಕಳೆದುಕೊಂಡಾಗ ನಾನು ನಮ್ಮ ಕಥೆ ಮುಗಿಯಿತು ಅಂದು ಕೊಂಡೆ. ಆದರೆ ಅದಾದ ಬಳಿಕ ಶಾರ್ದೂಲ್ ಠಾಕೂರ್ ಕ್ರೀಸ್‌ಗೆ ಇಳಿದು ಮಿಂಚಲು ಆರಂಭಿಸಿದರು. ಆತ ಮಾದ್ಭುತವಾದ ಕಾರ್ಯವನ್ನು ಮಾಡಿದ್ದಾರೆ. ಲಾರ್ಡ್ ಶಾರ್ದೂಲ್ ಮತ್ತೆ ಮಿಂಚಿದ್ದಾರೆ. ಇದಕ್ಕೂ ಮುನ್ನ ಬ್ರಿಸ್ಬೇನ್‌ನಲ್ಲಿಯೂ ಶಾರ್ದೂಲ್ ರನ್‌ಗಳಿಸಿದ್ದರು. ಆ ಸರಣಿಯಲ್ಲಿ ಶಾರ್ದೂಲ್ ಕೇವಲ ನೆಟ್ ಬೌಲರ್ ಆಗಿ ಪ್ರವಾಸವನ್ನು ಕೈಗೊಂಡಿದ್ದರು. ಆದರೆ ಆಟವನ್ನು ಆಡಿ, ರನ್‌ಗಳಿಸಿದ್ದಲ್ಲದೆ ವಿಕೆಟ್ ಕೂಡ ಕಬಳಿಸಿದರು" ಎಂದಿದ್ದಾರೆ ಆಕಾಶ್ ಚೋಪ್ರ.

ಟೀಮ್ ಇಂಡಿಯಾ ಆಡುವ ಬಳಗ: ಕೆಎಲ್ ರಾಹುಲ್, ರೋಹಿತ್ ಶರ್ಮಾ, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ರವೀಂದ್ರ ಜಡೇಜಾ, ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬೂಮ್ರಾ.

ಗಾಯದಿಂದ ಗುಣಮುಖರಾಗಿ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಿದ ಆಲ್-ರೌಂಡರ್ | Oneindia Kannada

ಇಂಗ್ಲೆಂಡ್ ಆಡುವ ಬಳಗ: ಹಸೀಬ್ ಹಮೀದ್, ರೋರಿ ಬರ್ನ್ಸ್, ಡೇವಿಡ್ ಮಲನ್, ಜೋ ರೂಟ್ (ನಾಯಕ), ಒಲ್ಲಿ ಪೋಪ್, ಜಾನಿ ಬೈರ್‌ಸ್ಟೊವ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್,ಮೊಯೀನ್ ಅಲಿ, ಕ್ರೇಗ್ ಓವರ್‌ಟನ್, ಜೇಮ್ಸ್ ಆಂಡರ್ಸನ್, ಒಲ್ಲಿ ರಾಬಿನ್ಸನ್

For Quick Alerts
ALLOW NOTIFICATIONS
For Daily Alerts
Story first published: Friday, September 3, 2021, 14:39 [IST]
Other articles published on Sep 3, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X