ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್: ಐದು ಪಂದ್ಯಗಳ ಟೆಸ್ಟ್ ಸರಣಿಯಿಂದ ವಾಶಿಂಗ್ಟನ್ ಸುಂದರ್ ಔಟ್!

India vs England: all rounder Washington Sundar ruled out of test series against England
Washington Sundar ಈಗ ಇಂಗ್ಲೆಂಡ್ ಪ್ರವಾಸದಿಂದ ಹೊರಗೆ | Oneindia Kannada

ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಆರಂಭಕ್ಕೆ ಇನ್ನೂ ಎರಡು ವಾರಗಳಿದೆ. ಈ ಸಂದರ್ಭದಲ್ಲಿ ಭಾರತೀಯ ಟೆಸ್ಟ್ ಕ್ರಿಕೆಟ್ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಯುವ ಆಲ್‌ರೌಂಡರ್ ವಾಶಿಂಗ್ಟನ್ ಸುಂದರ್ ಟೆಸ್ಟ್ ಸರಣಿಯಿಂದ ಹೊರಗುಳಿಯುವ ಸಾಧ್ಯತೆ ದಟ್ಟವಾಗಿದೆ.

ಆಲ್‌ರೌಂಡರ್ ವಾಶಿಂಗ್ಟನ್ ಸುಂದರ್ ಅಭ್ಯಾಸ ಪಂದ್ಯದಲ್ಲಿ ಭಾಗವಹಿಸಿದ್ದು ಈ ಸಂದರ್ಭದಲ್ಲಿ ಅವರು ಗಾಯಗೊಂಡಿದ್ದಾರೆ. ಹೀಗಾಗಿ ಅವರು ಇಂಗ್ಲೆಂಡ್ ವಿರುದ್ಧದ ಸಂಪೂರ್ಣ ಟೆಸ್ಟ್ ಸರಣಿಯಿಂದಲೇ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ. ಆದರೆ ಅಧಿಕೃತವಾಗಿ ಈ ಬಗ್ಗೆ ಯಾವುದೇ ಮಾಹಿತಿಗಳು ಈ ಕ್ಷಣದವರೆಗೆ ಲಭ್ಯವಾಗಿಲ್ಲ. ವಾಶಿಂಗ್ಟನ್ ಸುಂದರ್ ಕೈಬೆರಳಿನ ಗಾಯಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.

ಭಾರತ ವಿರುದ್ಧದ ಮೊದಲೆರಡು ಟೆಸ್ಟ್‌ ಪಂದ್ಯಗಳಿಗೆ ಇಂಗ್ಲೆಂಡ್ ತಂಡ ಪ್ರಕಟಭಾರತ ವಿರುದ್ಧದ ಮೊದಲೆರಡು ಟೆಸ್ಟ್‌ ಪಂದ್ಯಗಳಿಗೆ ಇಂಗ್ಲೆಂಡ್ ತಂಡ ಪ್ರಕಟ

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಆರಂಭಕ್ಕೂ ಮುನ್ನ ಭಾರತೀಯ ಕ್ರಿಕೆಟ್ ತಂಡದ ಮೂರನೇ ಆಟಗಾರ ಗಾಯಗೊಂಡು ಹೊರಗುಳಿಯುವ ಸ್ಥಿತಿ ಈಗ ಉಂಟಾಗಿದೆ. ಇದಕ್ಕೂ ಮುನ್ನ ನ್ಯೂಜಿಲೆಂಡ್ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ಆಡಿದ್ದ ಶುಬ್ಮನ್ ಗಿಲ್ ಗಾಯದ ಕಾರಣದಿಂದಾಗಿ ಇಂಗ್ಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ. ಶುಬ್ಮನ್ ಗಿಲ್ ಈಗಾಗಲೇ ತವರಿಗೆ ವಾಪಾಸಾಗಿದ್ದಾರೆ. ಆದರೆ ಗಿಲ್ ಇಂಗ್ಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿಯುವ ವಿಚಾರವನ್ನು ಕೂಡ ಬಿಸಿಸಿಐ ಅಧಿಕೃತವಾಗಿ ಇನ್ನು ಮಾಹಿತಿ ನೀಡಿಲ್ಲ.

ಇದಾದ ಬಳಿಕ ಭಾರತದ ಯುವ ವೇಗಿ ಆವೇಶ್ ಖಾನ್ ಕೂಡ ಗಾಯಗೊಂಡಿದ್ದಾರೆ. ಭಾರತ ಹಾಗೂ ಕೌಂಟಿ ಇಲೆವೆನ್ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಭಾಗವಹಿಸಿದ್ದ ಆವೇಶ್ ಖಾನ್ ಈ ಸಂದರ್ಭದಲ್ಲಿ ಗಾಯಗೊಂಡಿದ್ದಾರೆ. ಇದೀಗ ಮೂರನೇ ಆಟಗಾರನಾಗಿ ವಾಶಿಂಗ್ಟನ್ ಸುಂದರ್ ಗಾಯಗೊಂಡಿದ್ದು ಸರಣಿಯಿಂದ ಹೊರಗುಳಿಯುವ ಸಾಧ್ಯತೆಯಿದೆ.

ಇನ್ನು ಕೌಂಟಿ ಇಲೆವೆನ್ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡದ ಖಾಯಂ ನಾಯಕ ವಿರಾಟ್ ಕೊಹ್ಲಿ ಹಾಗೂ ಉಪನಾಯಕ ಅಜಿಂಕ್ಯ ರಹಾನೆ ಕಣಕ್ಕಿಳಿದಿರಲಿಲ್ಲ. ರೋಹಿತ್ ಶರ್ಮಾ ಈ ಪಂದ್ಯದಲ್ಲಿ ತಂಡದ ನಾಯಕತ್ವ ವಹಿಸಿದ್ದಾರೆ. ವಿರಾಟ್ ಕೊಹ್ಲಿ ಹಾಗೂ ಅಜಿಂಕ್ಯ ರಹಾನೆ ಈ ಪಂದ್ಯದಲ್ಲಿ ಆಡದಿರುವುದಕ್ಕೂ ಗಾಯದ ಸಮಸ್ಯೆಯೇ ಕಾರಣ ಎಂದು ಬಿಸಿಸಿಐ ಮಾಹಿತಿ ನೀಡಿದೆ. ಅದೃಷ್ಟವಶಾತ್ ಕೊಹ್ಲಿ ಹಾಗೂ ರಹಾನೆ ಗಂಭೀರ ಪ್ರಮಾಣದಲ್ಲ. ಹೀಗಾಗಿ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಈ ಇಬ್ಬರು ಕೂಡ ಪಾಲ್ಗೊಳ್ಳಲಿದ್ದಾರೆ.

Story first published: Thursday, July 22, 2021, 17:45 [IST]
Other articles published on Jul 22, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X