ತನ್ನ ಟೆಸ್ಟ್ ದಾಖಲೆ ಮುರಿದ ಆ್ಯಂಡರ್ಸನ್ ಕುರಿತು ಪ್ರತಿಕ್ರಿಯಿಸಿದ ಅನಿಲ್ ಕುಂಬ್ಳೆ

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲನೇ ಇನ್ನಿಂಗ್ಸ್‌ನಲ್ಲಿ 4 ವಿಕೆಟ್ ಪಡೆದು ಕೊಳ್ಳುವುದರ ಮೂಲಕ ಇಂಗ್ಲೆಂಡ್ ತಂಡದ ಜೇಮ್ಸ್ ಆ್ಯಂಡರ್ಸನ್ ಟೆಸ್ಟ್ ಕ್ರಿಕೆಟ್‍ನಲ್ಲಿ ಅನಿಲ್ ಕುಂಬ್ಳೆ ಜೀವಮಾನ ಸಾಧನೆಯನ್ನು ಹಿಂದಿಕ್ಕಿ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿಯೇ ಅತಿ ಹೆಚ್ಚು ವಿಕೆಟ್ ಪಡೆದ ಮೂರನೇ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ಜೇಮ್ಸ್ ಆ್ಯಂಡರ್ಸನ್ ಭಾರತದ ನಾಯಕ ವಿರಾಟ್ ಕೊಹ್ಲಿ ವಿಕೆಟ್ ಪಡೆಯುತ್ತಿದ್ದಂತೆ ಅನಿಲ್ ಕುಂಬ್ಳೆ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಅನಿಲ್ ಕುಂಬ್ಳೆ ತಮ್ಮ ಟೆಸ್ಟ್ ಕ್ರಿಕೆಟ್ ಜೀವನದಲ್ಲಿ 619 ವಿಕೆಟ್ ಪಡೆದು ವಿಶ್ವ ಕ್ರಿಕೆಟ್‍ನಲ್ಲಿ ಅತಿಹೆಚ್ಚು ಟೆಸ್ಟ್ ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಹೀಗೆ ವಿರಾಟ್ ಕೊಹ್ಲಿಯವರ ವಿಕೆಟ್ ಪಡೆದು ಕೊಳ್ಳುವುದರ ಮೂಲಕ ಅನಿಲ್ ಕುಂಬ್ಳೆ ದಾಖಲೆಯನ್ನು ಸರಿಗಟ್ಟಿದ ಜೇಮ್ಸ್ ಆ್ಯಂಡರ್ಸನ್ ಟೆಸ್ಟ್ ಕ್ರಿಕೆಟ್‍ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದರು.
ಇನ್ನು ಆ್ಯಂಡರ್ಸನ್ ಮಾಡಿದ ಈ ಸಾಧನೆಗೆ ಕ್ರಿಕೆಟ್ ಜಗತ್ತು ಶುಭ ಹಾರೈಸಿತ್ತು. ಇದೀಗ ತಮ್ಮ ದಾಖಲೆಯನ್ನು ಸರಿಗಟ್ಟಿರುವ ಜೇಮ್ಸ್ ಆ್ಯಂಡರ್ಸನ್ ಕುರಿತು ಸ್ವತಃ ಅನಿಲ್ ಕುಂಬ್ಳೆ ಅವರೇ ಪ್ರತಿಕ್ರಿಯಿಸಿದ್ದು ಜೇಮ್ಸ್ ಆ್ಯಂಡರ್ಸನ್ ಸಾಧನೆಯನ್ನು ಮೆಚ್ಚಿಕೊಂಡಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ಜೇಮ್ಸ್ ಆ್ಯಂಡರ್ಸನ್ ಸಾಧನೆಯನ್ನು ಹೊಗಳಿರುವ ಅನಿಲ್ ಕುಂಬ್ಳೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದ್ದಕ್ಕೆ ಶುಭಾಶಯವನ್ನು ಕೋರಿದ್ದಾರೆ. ಸದ್ಯ ಅನಿಲ್ ಕುಂಬ್ಳೆಯವರ ಈ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು ತಮ್ಮ ದಾಖಲೆ ಮುರಿದರೂ ಆ್ಯಂಡರ್ಸನ್ ಕುರಿತು ಮೆಚ್ಚುಗೆ ವ್ಯಕ್ತಪಡಿಸಿರುವ ಅನಿಲ್ ಕುಂಬ್ಳೆಯ ಕ್ರೀಡಾ ಸ್ಫೂರ್ತಿಗೆ ಸಾಮಾಜಿಕ ಜಾಲತಾಣ ಫಿದಾ ಆಗಿದೆ.

ಜೇಮ್ಸ್ ಆ್ಯಂಡರ್ಸನ್ ಲೆಜೆಂಡ್ ಎಂದ ಅನಿಲ್ ಕುಂಬ್ಳೆ
ಅನಿಲ್ ಕುಂಬ್ಳೆ ಕ್ರಿಕೆಟ್ ಜಗತ್ತು ಕಂಡ ದಂತಕತೆ, ಎಂತಹ ಕಷ್ಟದ ಸಂದರ್ಭದಲ್ಲಿಯೂ ಎದೆಗುಂದದೆ ಕ್ರಿಕೆಟ್ ಆಡಿದ್ದನ್ನು ನಾವೆಲ್ಲರೂ ಕಂಡಿದ್ದೇವೆ. ಇಂತಹ ಮಹಾನ್ ದಂತಕತೆ ಇದೀಗ ಜೇಮ್ಸ್ ಆ್ಯಂಡರ್ಸನ್ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದ್ದು ಟೆಸ್ಟ್ ಕ್ರಿಕೆಟ್‍ನಲ್ಲಿ ಅತಿಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿರುವ ಆ್ಯಂಡರ್ಸನ್ ಓರ್ವ ಲೆಜೆಂಡ್ ಎಂದು ಕೊಂಡಾಡಿದ್ದಾರೆ.

ಟಾಪ್ 3 ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡ ಏಕೈಕ ವೇಗಿ ಆ್ಯಂಡರ್ಸನ್!
ಜೇಮ್ಸ್ ಆ್ಯಂಡರ್ಸನ್ ಅನಿಲ್ ಕುಂಬ್ಳೆ ದಾಖಲೆಯನ್ನು ಮುರಿದು ವಿಶ್ವ ಟೆಸ್ಟ್ ಕ್ರಿಕೆಟ್‍ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಏರುವುದರ ಮೂಲಕ ನೂತನ ಸಾಧನೆಯೊಂದನ್ನು ಮಾಡಿದ್ದಾರೆ. ಟೆಸ್ಟ್ ಕ್ರಿಕೆಟ್‍ನಲ್ಲಿ ಅತಿಹೆಚ್ಚು ವಿಕೆಟ್ ಪಡೆದ ಟಾಪ್ 3 ಬೌಲರ್‌ಗಳ ಪಟ್ಟಿಯಲ್ಲಿ ಇಷ್ಟು ದಿನಗಳವರೆಗೆ ಕೇವಲ ಸ್ಪಿನ್ನರ್‌ಗಳೇ ಇದ್ದರು. ಅಗ್ರಸ್ಥಾನದಲ್ಲಿ ಶ್ರೀಲಂಕಾ ಸ್ಪಿನ್ನರ್ ಮುತ್ತಯ್ಯ ಮುರಳೀಧರನ್, ಎರಡನೇ ಸ್ಥಾನದಲ್ಲಿ ಆಸ್ಟ್ರೇಲಿಯಾದ ಸ್ಪಿನ್ನರ್ ಶೇನ್ ವಾರ್ನ್ ಮತ್ತು ಮೂರನೇ ಸ್ಥಾನದಲ್ಲಿ ಭಾರತದ ಸ್ಪಿನ್ನರ್ ಅನಿಲ್ ಕುಂಬ್ಳೆ ಸ್ಥಾನ ಪಡೆದುಕೊಂಡಿದ್ದರು. ಆದರೆ ಇದೀಗ ಇದೇ ಮೊದಲ ಬಾರಿಗೆ ವೇಗಿ ಒಬ್ಬರು ಟಾಪ್ 3 ಸ್ಥಾನವನ್ನು ಪಡೆದುಕೊಂಡು ವಿಶೇಷ ಸಾಧನೆ ಮಾಡಿದ್ದಾರೆ.

ಭಾರತದ ಪ್ರಮುಖ ವಿಕೆಟ್ ಪಡೆದು ಮಿಂಚಿದ್ದ ಆ್ಯಂಡರ್ಸನ್
ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಈ ದೊಡ್ಡ ದಾಖಲೆ ಮಾಡಿದ್ದು ಮಾತ್ರವಲ್ಲದೇ ಟೀಮ್ ಇಂಡಿಯಾದ ಬಲಿಷ್ಠ ಬ್ಯಾಟ್ಸ್‌ಮನ್‌ಗಳಾದ ಕೆಎಲ್ ರಾಹುಲ್, ಚೇತೇಶ್ವರ್ ಪೂಜಾರ ಹಾಗೂ ವಿರಾಟ್ ಕೊಹ್ಲಿಯ ವಿಕೆಟ್ ಪಡೆದು ಕೊಳ್ಳುವುದರ ಮೂಲಕ ಇಂಗ್ಲೆಂಡ್ ಪರ ಉತ್ತಮ ಆಟವನ್ನಾಡಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications