ಭಾರತ vs ಇಂಗ್ಲೆಂಡ್: ಆಲ್ ರೌಂಡರ್ ಅಕ್ಸರ್ ಪಟೇಲ್ ಆಯ್ಕೆಗೆ ಲಭ್ಯ

ಚೆನ್ನೈ: ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್‌ಗೆ ಭಾರತದ ಯುವ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಅವರನ್ನು ಪರಿಗಣಿಸುವ ಸಾಧ್ಯತೆಯಿದೆ. ಆದರೆ ಆಯ್ಕೆಗೆ ಸುಂದರ್ ಪ್ರಬಲ ಸ್ಪರ್ಧೆ ಎದುರಿಸಲಿದ್ದಾರೆ. ಸುಂದರ್ ಅವರು ಪ್ರಮುಖ ರಿಸ್ಟ್ ಸ್ಪಿನ್ನರ್ ಕುಲದೀಪ್ ಯಾದವ್ ಅವರಿಂದ ಸ್ಪರ್ಧೆ ಎದುರಿಸಲಿದ್ದಾರೆ ಎಂದು ಬಿಸಿಸಿಐ ಹೇಳಿದೆ.
ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ದ್ವಿತೀಯ ಟೆಸ್ಟ್‌ಗೆ ಎಡಗೈ ಮಧ್ಯಮ ವೇಗಿ ಅಕ್ಸರ್ ಪಟೇಲ್ ಕೂಡ ಆಯ್ಕೆಗೆ ಲಭ್ಯರಿರಲಿದ್ದಾರೆ ಎಂದು ಬಿಸಿಸಿಐ ಗುರುವಾರ (ಫೆಬ್ರವರಿ 11) ಮಾಹಿತಿ ನೀಡಿದೆ. ಅಕ್ಸರ್ ಪಟೇಲ್ ನೆಟ್ ಅಭ್ಯಾಸ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿತ್ತು.
'ಅಕ್ಸರ್ ಪಟೇಲ್ ಈಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಶನಿವಾರದಿಂದ ಚೆನ್ನೈನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ದ್ವಿತೀಯ ಪೇಟಿಯಂ ಟೆಸ್ಟ್‌ಗೆ ಅಕ್ಸರ್ ಆಯ್ಕೆಗೆ ಲಭ್ಯರಿರಲಿದ್ದಾರೆ,' ಎಂದು ಬಿಸಿಸಿಐ ಪ್ರಕಟಣೆಯ ಮೂಲಕ ತಿಳಿಸಿದೆ.
ಪಟೇಲ್ 38 ಏಕದಿನ ಪಂದ್ಯಗಳಲ್ಲಿ 181 ರನ್, 45 ವಿಕೆಟ್, 11 ಟಿ20ಐ ಪಂದ್ಯಗಳಲ್ಲಿ 9 ವಿಕೆಟ್ ಪಡೆದಿದ್ದಾರೆ. 97 ಐಪಿಎಲ್ ಪಂದ್ಯಗಳಲ್ಲಿ 80 ವಿಕೆಟ್ ಪಡೆದಿದ್ದಾರೆ. ಭಾರತ-ಇಂಗ್ಲೆಂಡ್ ನಡುವಿನ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲ ಪಂದ್ಯ ಇಂಗ್ಲೆಂಡ್ ಗೆದ್ದುಕೊಂಡಿದೆ. ದ್ವಿತೀಯ ಟೆಸ್ಟ್ ಶನಿವಾರದಿಂದ (ಫೆಬ್ರವರಿ 13) ಆರಂಭಗೊಳ್ಳಲಿದೆ. ಪಂದ್ಯ 9:30 AMಗೆ ಆರಂಭಗೊಳ್ಳಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications