ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಪದಾರ್ಪಣಾ ಪಂದ್ಯದಲ್ಲಿ 5 ವಿಕೆಟ್ ಗೊಂಚಲು ಪಡೆದು ವಿಶೇಷ ಸಾಧನೆ ಮಾಡಿದ ಅಕ್ಷರ್

India vs England: Axar patel becomes 9th bowler to take five wicket haul on test debut

ಟೀಮ್ ಇಂಡಿಯಾ ಪರವಾಗಿ ಟೆಸ್ಟ್‌ಗೆ ಪದಾರ್ಪಣೆ ಮಾಡಿದ ಅಕ್ಷರ್ ಪಟೇಲ್ ಮೊದಲ ಪಂದ್ಯದಲ್ಲೇ ಶ್ರೇಷ್ಠ ಪ್ರದರ್ಶನ ನೀಡಿ ಮಿಂಚಿದ್ದಾರೆ. ಎರಡನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಅಕ್ಷರ್ ಪಟೇಲ್ ಐದು ವಿಕೆಟ್‌ಗಳ ಗೊಂಚಲು ಪಡೆದು ಶ್ರೇಷ್ಠ ಸಾಧನೆಯನ್ನು ಮಾಡಿದ್ದಾರೆ. ಈ ಮೂಲಕ ಟೆಸ್ಟ್ ಪಂದ್ಯದಲ್ಲಿ ಪದಾರ್ಪಣಾ ಪಂದ್ಯದಲ್ಲೇ ಐದು ವಿಕೆಟ್‌ಗಳ ಗೊಂಚಲು ಪಡೆದ 9ನೇ ಭಾರತೀಯ ಬೌಲರ್ ಎನಿಸಿದ್ದಾರೆ ಅಕ್ಷರ್ ಪಟೇಲ್.

ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ದ್ವಿಶತಕ ಸಿಡಿಸಿ ಇಂಗ್ಲೆಂಡ್ ಗೆಲುವಿಗೆ ಕಾರಣರಾಗಿದ್ದ ಜೋ ರೂಟ್ ಈ ಪಂದ್ಯದಲ್ಲಿ ಸೊಲ್ಲೆತ್ತಲು ಸಾಧ್ಯವಾಗಿಲ್ಲ. ವಿಶೇಷವೆಂದರೆ ಎರಡು ಇನ್ನಿಂಗ್ಸ್‌ಗಳಲ್ಲಿಯೂ ಜೋ ರೂಟ್ ಅವರ ವಿಕೆಟ್ ಪಡೆದಿದ್ದು ಅಕ್ಷರ್ ಪಟೇಲ್. ಈ ಮೂಲಕ ಇಂಗ್ಲೆಂಡ್ ತಂಡವನ್ನು ಕಟ್ಟಿ ಹಾಕಲು ಕಾರಣರಾದರು.

ಭಾರತ vs ಇಂಗ್ಲೆಂಡ್: ಆರ್‌ ಅಶ್ವಿನ್ ಹೆಸರಲ್ಲಿ ಮತ್ತೊಂದು ದಾಖಲೆಭಾರತ vs ಇಂಗ್ಲೆಂಡ್: ಆರ್‌ ಅಶ್ವಿನ್ ಹೆಸರಲ್ಲಿ ಮತ್ತೊಂದು ದಾಖಲೆ

ಅಕ್ಷರ್ ಪಟೇಲ್ ಈ ಮೂಲಕ ಟೀಮ್ ಇಂಡಿಯಾ ಪರವಾಗಿ ಟೆಸ್ಟ್ ಕ್ರಿಕೆಟ್‌ಗೆ ಸ್ಮರಣೀಯ ಪದಾರ್ಪಣೆಯನ್ನು ಮಾಡಿದ್ದಾರೆ. ಒಟ್ಟಾರೆ ಎರಡು ಇನ್ನಿಂಗ್ಸ್‌ಗಳಲ್ಲಿ ಅಕ್ಷರ್ ಪಟೇಲ್ 7 ವಿಕೆಟ್ ಪಡೆದು ಮಿಂಚಿದ್ದಾರೆ.

ಭಾರತದ ಪರವಾಗಿ ಈ ಹಿಂದೆ ಸದ್ಯ 8 ಬೌಲರ್‌ಗಳು ತಮ್ಮ ಚೊಚ್ಚಲ ಪಂದ್ಯದಲ್ಲಿ 5 ವಿಕೆಟ್‌ಗಳ ಗೊಂಚಲು ಪಡೆದು ಮಿಂಚಿದ್ದಾರೆ. ಮೊದಲಿಗೆ 1932ರಲ್ಲಿ ಮೊಹಮ್ಮದ್ ನಿಸ್ಸಾರ್ ಇಂಗ್ಲೆಂಡ್‌ನ ಲಾರ್ಡ್ಸ್‌ ಅಂಗಳದಲ್ಲಿ ಮೊದಲ ಬಾರಿಗೆ ಈ ಸಾಧನೆ ಮಾಡಿದ್ದರು. ಬಳಿಕ ವಾಮನ್ ಕುಮಾರ್ 1962 ರಲ್ಲಿ ಪಾಕಿಸ್ತಾನ ತಂಡದ ವಿರುದ್ಧ ಡೆಲ್ಲಿ ಫಿರೋಜ್ ಶಾ ಕೋಟ್ಲ ಅಂಗಳದಲ್ಲಿ ಚೊಚ್ಚಲ ಪಂದ್ಯದಲ್ಲಿ 5 ವಿಕೆಟ್ ಕಿತ್ತಿದ್ದರು. ಬಳಿಕ ಸಯ್ಯದ್ಅ ಬಿದ್ ಅಲಿ, ದಿಲಿಪ್ ದೋಷಿ, ನರೇಂದ್ರ ಹಿರ್ವಾನಿ, ಅಮಿತ್ ಮಿಶ್ರಾ, ರವಿಚಂದ್ರನ್ ಅಶ್ವಿನ್ ಹಾಗೂ ಮೊಹಮ್ಮದ್ ಶಮಿ ತಮ್ಮ ಚೊಚ್ಚಲ ಪಂದ್ಯದಲ್ಲಿ 5 ವಿಕೆಟ್‌ಗಳ ಗೊಂಚಲು ಪಡೆದು ಮಿಂಚಿದ್ದಾರೆ.

ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸ್ಪಿನ್ ಬೌಲಿಂಗ್ ದಾಳಿಗೆ ಬೆದರಿದ ಪ್ರವಾಸಿ ಇಂಗ್ಲೆಂಡ್ 317 ರನ್‌ಗಳ ಬೃಹತ್ ಅಂತರದಿಂದ ಸೋಲು ಕಂಡಿದೆ. ಈ ಮೂಲಕ ಟೀಮ್ ಇಂಡಿಯಾ ಭರ್ಜರಿ ಗೆಲುವು ಸಾಧಿಸಿ ಸರಣಿಯನ್ನು 1-1 ಅಂತರದಿಂದ ಸಮಬಲಗೊಳಿಸಿದೆ.

Story first published: Wednesday, February 17, 2021, 15:22 [IST]
Other articles published on Feb 17, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X