ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್: 4 ಬೃಹತ್ ದಾಖಲೆ ಬರೆದ ಅಕ್ಷರ್ ಪಟೇಲ್

India vs England: Axar Patel four big records with bowling England 3rd test

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಬೌಲರ್ ಅಕ್ಷರ್ ಪಟೇಲ್ ಭರ್ಜರಿ ಯಶಸ್ಸು ಸಾಧಿಸಿದ್ದಾರೆ. ತಮ್ಮ ವೃತ್ತಿ ಬದುಕಿನ ಎರಡನೇ ಟೆಸ್ಟ್‌ನಲ್ಲಿ ಆಡುತ್ತಿರುವ ಅಕ್ಷರ್ ಪಟೇಲ್ ಎರಡನೇ ಟೆಸ್ಟ್ ಪಂದ್ಯದಲ್ಲಿ ಒಟ್ಟು 11 ವಿಕೆಟ್ ಕಬಳಿಸಿದ್ದಾರೆ. ಮೊದಲ ಇನ್ನಿಂಗ್ಸ್‌ನಲ್ಲಿ 6 ವಿಕೆಟ್ ಪಡೆದ ಅಕ್ಷರ್ ಎರಡನೇ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ ಕಬಳಿಸಿದ್ದಾರೆ.

ಭಾರತದ ಸ್ಪಿನ್ನರ್‌ಗಳಾದ ಅಕ್ಷರ್ ಪಟೇಲ್ ಹಾಗೂ ಆರ್ ಅಶ್ವಿನ್ ದಾಳಿಗೆ ಇಂಗ್ಲೆಂಡ್ ದಾಂಡಿಗರು ಎರಡನೇ ಇನ್ನಿಂಗ್ಸ್‌ನಲ್ಲೂ ಫೆವಿಲಿಯನ್ ಪೆರೇಡ್ ನಡೆಸಿದ್ದಾರೆ. ಎರಡನೇ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ಕೇವಲ 81 ರನ್‌ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಭಾರತದ ಗೆಲುವಿಗೆ 45 ರನ್‌ಗಳ ಅಲ್ಪ ಗುರಿಯನ್ನು ನೀಡಿದೆ.

ಭಾರತ vs ಇಂಗ್ಲೆಂಡ್, 3ನೇ ಟೆಸ್ಟ್‌ ಪಂದ್ಯ, 2ನೇ ದಿನ, Live ಸ್ಕೋರ್‌ಭಾರತ vs ಇಂಗ್ಲೆಂಡ್, 3ನೇ ಟೆಸ್ಟ್‌ ಪಂದ್ಯ, 2ನೇ ದಿನ, Live ಸ್ಕೋರ್‌

ಇನ್ನು ಈ ಪಂದ್ಯದಲ್ಲಿ ಅಕ್ಷರ್ ಪಟೇಲ್ ಹೆಸರಿನಲ್ಲಿ ದಾಖಲಾದ ಐದು ವಿಶೇಷ ರೆಕಾರ್ಡ್‌ಗಳು ಯಾವುದು ಮುಂದೆ ಓದಿ..

ಡೇ-ನೈಟ್ ಪಂದ್ಯದಲ್ಲಿ ಅತಿ ಹೆಚ್ಚು ವಿಕೆಟ್

ಡೇ-ನೈಟ್ ಪಂದ್ಯದಲ್ಲಿ ಅತಿ ಹೆಚ್ಚು ವಿಕೆಟ್

ಅಕ್ಷರ್ ಪಟೇಲ್ ಡೇ ನೈಟ್ ಟೆಸ್ಟ್ ಪಂದ್ಯವೊಂದರಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿದ್ದಾರೆ. ಈ ಪಂದ್ಯದಲ್ಲಿ 11 ವಿಕೆಟ್ ಪಡೆಯುವ ಮೂಲಕ ಅಕ್ಷರ್ ಈ ಸಾಧನೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಆಸ್ಟ್ರೇಲಿಯಾದ ಪ್ಯಾಟ್ ಕಮ್ಮಿನ್ಸ್ ಶ್ರೀಲಂಕಾ ವಿರುದ್ಧ ಹಾಗೂ ವೆಸ್ಟ್ ಇಂಡೀಸ್‌ನ ದೇವೇಂದ್ರ ಬಿಶೂ ಪಾಕಿಸ್ತಾನದ ವಿರುದ್ಧ 10 ವಿಕೆಟ್ ಕಿತ್ತು ಈ ಹಿಂದಿನ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದರು.

ಇನ್ನಿಂಗ್ಸ್‌ನ ಮೊದಲ ಎಸೆತದಲ್ಲಿಯೇ ವಿಕೆಟ್

ಇನ್ನಿಂಗ್ಸ್‌ನ ಮೊದಲ ಎಸೆತದಲ್ಲಿಯೇ ವಿಕೆಟ್

vಅಕ್ಷರ್ ಪಟೇಲ್ ಇಂಗ್ಲೆಂಡ್‌ನ ಎರಡನೇ ಇನ್ನಿಂಗ್ಸನ ಮೊದಲ ಎಸೆತದಲ್ಲಿವೇ ವಿಕೆಟ್ ಪಡೆದರು. ಜಾಕ್ ಕ್ರಾವ್ಲಿ ಆರಂಭಿಕ ಎಸೆತದಲ್ಲಿಯೇ ಬೌಲ್ಡ್ ಆಗುವ ಮೂಲಕ ವಿಕೆಟ್ ಒಪ್ಪಿಸಿದ್ದರು. ಈ ಮೂಲಕ ಇನ್ನಿಂಗ್ಸ್‌ನ ಮೊದಲನೇ ಎಸೆತದಲ್ಲಿಯೇ ವಿಕೆಟ್ ಪಡೆದ ಭಾರತದ ಎರಡನೇ ಸ್ಪಿನ್ ಬೌಲರ್ ಎನಿಸಿದರು. ಆರ್ ಅಶ್ವಿನ್ ಚೆನ್ನೈನ ಎರಡನೇ ಟೆಸ್ಟ್‌ನಲ್ಲಿ ಈ ಸಾಧನೆಯನ್ನು ಮಾಡಿದ್ದರು.

ಸತತ ಮೂರನೇ ಐದು ವಿಕೆಟ್ ಗೊಂಚಲು

ಸತತ ಮೂರನೇ ಐದು ವಿಕೆಟ್ ಗೊಂಚಲು

ಅಕ್ಷರ್ ಪಟೇಲ್ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿಯೂ ಐದು ವಿಕೆಟ್‌ಗಳ ಗೊಂಚಲು ಪಡೆಯುವ ಮೂಲಕ ಸತತ ಮೂರನೇ ಐದು ವಿಕೆಟ್‌ಗಳ ಗೊಂಚಲನ್ನು ಪಡೆದಿದ್ದಾರೆ. ಈ ಮೂಲಕ ಸತತ ಮೂರು ಅಥವಾ ಅದಕ್ಕೂ ಹೆಚ್ಚಿನ ಇನ್ನಿಂಗ್ಸ್‌ಗಳಲ್ಲಿ ಐದು ವಿಕೆಟ್ ಗೊಂಚಲು ಪಡೆದ ನಾಲ್ಕನೇ ಭಾರತೀಯ ಬೌಲರ್ ಎನಿಸಿದ್ದಾರೆ. ಹರ್ಭಜನ್ ಸಿಂಗ್ ಸತತ ನಾಲ್ಕು ಇನ್ನಿಂಗ್ಸ್‌ಗಳಲ್ಲಿ ಐದು ವಿಕೆಟ್ ಗೊಂಚಲು ಪಡೆದಿರುವುದು ಭಾರತೀಯ ಬೌಲರ್‌ನ ದಾಖಲೆಯಾಗಿದೆ.

ಎರಡೂ ಇನ್ನಿಂಗ್ಸ್‌ಗಳಲ್ಲಿ ಐದು ವಿಕೆಟ್

ಎರಡೂ ಇನ್ನಿಂಗ್ಸ್‌ಗಳಲ್ಲಿ ಐದು ವಿಕೆಟ್

ಅಕ್ಷರ್ ಪಟೇಲ್ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ಐದು ವಿಕೆಟ್ ಗೊಂಚಲನ್ನು ಪಡೆದಿದ್ದಾರೆ. ಈ ಮೂಲಕ ಅವರು ಈ ಸಾಧನೆ ಮಾಡಿದ ಭಾರತದ 16ನೇ ಬೌಲರ್ ಎನಿಸಿದ್ದಾರೆ. ಸುದೀರ್ಘ ಮಾದರಿಯ ಕ್ರಿಕೆಟ್‌ನಲ್ಲಿ ಆರ್ ಅಶ್ವಿನ್ ಈ ಸಾಧನೆಯನ್ನು 4 ಬಾರಿ ಮಾಡಿದ್ದಾರೆ.

Story first published: Friday, February 26, 2021, 8:48 [IST]
Other articles published on Feb 26, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X