ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್: ದಾಖಲೆ ಸನಿಹದಲ್ಲಿದ್ದಾರೆ ಚೇತೇಶ್ವರ ಪೂಜಾರ

India vs England: Cheteshwar Pujara close to another fine achievement

ಅಹ್ಮದಾಬಾದ್: ಆಸ್ಟ್ರೇಲಿಯಾ ಪ್ರವಾಸದ ವೇಳೆ ನಾಲ್ಕು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಭಾರತ 2-1ರ ಗೆಲುವು ದಾಖಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಭಾರತದ ಟೆಸ್ಟ್‌ ಸ್ಪೆಷಾಲಿಸ್ಟ್ ಚೇತೇಶ್ವರ ಪೂಜಾರ ಮತ್ತೊಂದು ದಾಖಲೆ ನಿಹದಲ್ಲಿದ್ದಾರೆ. ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್‌ನಲ್ಲಿ ದಾಖಲೆ ನಿರ್ಮಿಸಲು ಪೂಜಾರಗೆ ಅವಕಾಶವಿದೆ.

ಐಪಿಎಲ್: ಆರ್‌ಸಿಬಿ ಶೂಗೆ ಕನ್ನಡಪರ ಸಂಘಟನೆಗಳ ಅಸಮಾಧಾನಐಪಿಎಲ್: ಆರ್‌ಸಿಬಿ ಶೂಗೆ ಕನ್ನಡಪರ ಸಂಘಟನೆಗಳ ಅಸಮಾಧಾನ

ಇಂಗ್ಲೆಂಡ್ ವಿರುದ್ಧ ಮೂರು ಟೆಸ್ಟ್‌ ಪಂದ್ಯಗಳಲ್ಲಿ ಆಡಿದ್ದ ಚೇತೇಶ್ವರ ಪೂಜಾರ ಕೇವಲ ಒಂದು ಅರ್ಧ ಶತಕವಷ್ಟೇ ಬಾರಿಸಿದ್ದರು. ಚೆನ್ನೈನಲ್ಲಿ ನಡೆದಿದ್ದ ಆರಂಭಿಕ ಟೆಸ್ಟ್‌ನಲ್ಲಿ 73 ರನ್ ಬಾರಿಸಿದ್ದ ಪೂಜಾರ, ಆ ಬಳಿಕ ಎರಡು ಟೆಸ್ಟ್‌ ಪಂದ್ಯಗಳಲ್ಲಿ ಕ್ರಮವಾಗಿ 15, 21, 7 ಮತ್ತು 0 ರನ್ ಬಾರಿಸಿ ನಿರಾಸೆ ಮೂಡಿಸಿದ್ದರು.

ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್‌ನಲ್ಲಿ ಪೂಜಾರ ದಾಖಲೆ ಬರೆಯಲು ಅವಕಾಶವಿದೆ. ಇಂಗ್ಲೆಂಡ್ ವಿರುದ್ಧ ತವರಿನಲ್ಲಿ ನಡೆದ ಟೆಸ್ಟ್‌ ಪಂದ್ಯಗಳಲ್ಲಿ ಪೂಜಾರ ಈಗ 955 ರನ್ ಬಾರಿಸಿದ್ದಾರೆ. 4ನೇ ಟೆಸ್ಟ್‌ನಲ್ಲಿ ಪೂಜಾರ 45 ರನ್ ಬಾರಿಸಿದರೆ ಅವರ ಹೆಸರಿನಲ್ಲಿ ದಾಖಲೆ ನಿರ್ಮಾಣವಾಗಲಿದೆ.

'ವರ್ಲ್ಡ್‌ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ಭಾರತ vs ನ್ಯೂಜಿಲೆಂಡ್ ಸ್ಪರ್ಧೆ''ವರ್ಲ್ಡ್‌ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ಭಾರತ vs ನ್ಯೂಜಿಲೆಂಡ್ ಸ್ಪರ್ಧೆ'

ಭಾರತದಲ್ಲಿ ನಡೆದ ಟೆಸ್ಟ್‌ ಪಂದ್ಯಗಳಲ್ಲಿ ಇಂಗ್ಲೆಂಡ್ ವಿರುದ್ಧ 1000 ರನ್ ಬಾರಿಸಿದ ದಾಖಲೆ, ಭಾರತದ ಮಾಜಿ ಬ್ಯಾಟ್ಸ್‌ಮನ್‌ ಸುನಿಲ್ ಗವಾಸ್ಕರ್, ಕರ್ನಾಟಕದ ಗುಂಡಪ್ಪ ವಿಶ್ವನಾಥ್ ಮತ್ತು ಈಗಿನ ಭಾರತದ ನಾಯಕ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಮುಂದಿನ ಪಂದ್ಯದಲ್ಲಿ 45 ರನ್ ಬಾರಿಸಿದರೆ ಪೂಜಾರ ಕೂಡ ದಾಖಲೆ ಪಟ್ಟಿ ಸೇರಲಿದ್ದಾರೆ.

ಭಾರತದ ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ ತವರಿನಲ್ಲಿ ಇಂಗ್ಲೆಂಡ್ ವಿರುದ್ಧ ಒಟ್ಟು 15 ಟೆಸ್ಟ್‌ ಪಂದ್ಯಗಳನ್ನಾಡಿದ್ದಾರೆ. ಆದರೆ ಸಚಿನ್ 960 ರನ್ ಬಾರಿಸಿದ್ದಾರೆಯೇ ಹೊರತು ಆ ಸಾಧನೆಯನ್ನು 1000ದ ವರೆಗೆ ಕೊಂಡೊಯ್ಯಲಾಗಿರಲಿಲ್ಲ.

Story first published: Wednesday, March 3, 2021, 0:08 [IST]
Other articles published on Mar 3, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X