ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್: ಟೀಮ್ ಇಂಡಿಯಾದ ಒಂದು ನಿರ್ಧಾರಕ್ಕೆ ಅಚ್ಚರಿಗೊಂಡ ಕ್ರಿಕೆಟ್ ಪಂಡಿತರು

India vs England: Cricketing fraternity in shock after team india management decision

ನಾಟಿಂಗ್‌ಹ್ಯಾಮ್, ಆಗಸ್ಟ್ 4: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಗೆ ಬುಧವಾರ ಚಾಲನೆ ದೊರೆತಿದೆ. ಇಂಗ್ಲೆಂಡ್ ವಿರುದ್ಧದ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಕಣಕ್ಕಿಳಿದಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ತಂಡ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು ಭಾರತ ಬೌಲಿಂಗ್ ದಾಳಿಗೆ ಇಳಿದಿದೆ.

ಈ ಪಂದ್ಯದ ಆರಂಭಕ್ಕೆ ಮುನ್ನ ಟೀಮ್ ಇಂಡಿಯಾ ತೆಗೆದುಕೊಂಡಿರುವ ಒಂದು ನಿರ್ಧಾರ ಹೆಚ್ಚಿನ ಕ್ರಿಕೆಟ್ ಪ್ರೇಮಿಗಳಿಗೆ ಅಚ್ಚರಿಯನ್ನುಂಟು ಮಾಡಿದೆ. ಅದಕ್ಕೆ ಕಾರಣ ಭಾರತದ ಆಡುವ ಬಳಗದಲ್ಲಿನ ಬದಲಾವಣೆ. ಟೀಮ್ ಇಂಡಿಯಾದ ಅನುಭವಿ ಹಾಗೂ ಪ್ರಮುಖ ಸ್ಪಿನ್ನರ್ ಆಗಿರುವ ಆರ್ ಅಶ್ವಿನ್ ಅವರನ್ನು ಮೊದಲ ಟೆಸ್ಟ್ ಪಂದ್ಯದ ಆಡುವ ಬಳಗದಿಂದ ಹೊರಗಿಡಲಾಗಿದೆ. ಓರ್ವ ಸ್ಪಿನ್ನರ್ ಸ್ಥಾನಕ್ಕೆ ರವೀಂದ್ರ ಜಡೇಜಾ ಆಯ್ಕೆಯಾಗಿದ್ದಾರೆ.

ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ತೆಗೆದುಕೊಂಡಿರುವ ಈ ನಿರ್ಧಾರವೇ ಕ್ರಿಕೆಟ್ ಪಂಡಿತರಿಗೆ ಹಾಗೂ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ. ಇತ್ತೀಚಿನ ದಿನಗಳಲ್ಲಿ ವಿದೇಶಿ ನಡಲದಲ್ಲಿ ಆರ್ ಅಶ್ವಿನ್ ಸಾಧಿಸುತ್ತಿರುವ ಯಶಸ್ಸಿನ ಹೊರತಾಗಿಯೂ ಅವರನ್ನು ಪಂದ್ಯದಿಂದ ಹೊರಗಿಟ್ಟಿರುವುದಕ್ಕೆ ಆಶ್ಚರ್ಯವನ್ನು ವ್ಯಕ್ತಪಡಿಸುತ್ತಿದ್ದಾರೆ.

ಭಾರತ vs ಇಂಗ್ಲೆಂಡ್: ಯಾವ ತಂಡ ಸರಣಿ ಗೆಲ್ಲಲಿದೆ ಎಂದು ಭವಿಷ್ಯ ನುಡಿದ ಹರ್ಭಜನ್ ಸಿಂಗ್ಭಾರತ vs ಇಂಗ್ಲೆಂಡ್: ಯಾವ ತಂಡ ಸರಣಿ ಗೆಲ್ಲಲಿದೆ ಎಂದು ಭವಿಷ್ಯ ನುಡಿದ ಹರ್ಭಜನ್ ಸಿಂಗ್

ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಈ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. "8ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿಯುವ ಬೌಲರ್‌ನನ್ನು ಆಯ್ಕೆ ಮಾಡುವುದಾದರೆ ಬೌಲಿಂಗ್‌ನಲ್ಲಿ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡುವ ಆಟಗಾರನನ್ನು ಆಯ್ಕೆ ಮಾಡಲು ಬಯಸುತ್ತೇನೆ. ನನ್ನ ಪ್ರಕಾರ ಅದು ಆರ್ ಅಶ್ವಿನ್. ಹಾಗಾಗಿ ನಾನು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ತಂಡದಲ್ಲಿದ್ದ ಸಮತೋಲನವನ್ನು ನೋಡಲು ಬಯಸುತ್ತೇನೆ" ಎಂದಿದ್ದಾರೆ ವಿವಿಎಸ್ ಲಕ್ಷ್ಮಣ್.

ಟ್ವೀಟ್ ಮೂಲಕ ಅಚ್ಚರಿ ವ್ಯಕ್ತಪಡಿಸಿದ ಜಾಫರ್, ಮೈಕಲ್ ವಾನ್: ಇನ್ನು ಭಾರತ ತಂಡದಲ್ಲಿನ ಈ ಬದಲಾವಣೆ ಬಗ್ಗೆ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ವಾಸಿಂ ಜಾಫರ್ ತಮ್ಮದೇ ಶೈಲಿಯಲ್ಲಿ ತಮಾಷೆಯಾಗಿ ಪ್ರತಿಕ್ರಿಯಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾದ ನಿರ್ಧಾರಕ್ಕೆ ಆಶ್ಚರ್ಯವನ್ನು ವ್ಯಕ್ತಪಡಿಸಿದ್ದಾರೆ. ಇನ್ನು ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್ ಆರ್ ಅಶ್ವಿನ್ ತಂಡದಲ್ಲಿ ಇಲ್ಲದ ಕಾರಣಕ್ಕೆ ತಮಗಾದ ಸಂತಸವನ್ನು ಟ್ವೀಟ್ ಮೂಲಕ ವ್ಯಕ್ತಪಡಿಸಿದ್ದಾರೆ. "ವಾವ್, ಆರ್ ಅಶ್ವಿನ್ ಇಲ್ಲ" ಎಂದು ಟ್ವೀಟ್ ಮಾಡಿದ್ದಾರೆ ಮೈಕಲ್ ವಾನ್.

ಆರ್ ಅಶ್ವಿನ್ ಟೀಮ್ ಇಂಡಿಯಾದ ಅತ್ಯಂತ ಅನುಭವಿ ಆಟಗಾರರಲ್ಲಿ ಒಬ್ಬರು. ಎದುರಾಳಿಗಳಿಗೆ ಯಾವಾಗಲೂ ಆರ್ ಅಶ್ವಿನ್ ಸಿಂಹಸ್ವಪ್ನ ಎಂಬುದರಲ್ಲಿ ಅನುಮಾನವಿಲ್ಲ. ಅದರಲ್ಲೂ ವಿದೇಶಿ ನೆಲದಲ್ಲಿ ಇತ್ತೀಚಿನ ವರ್ಷಗಳಲ್ಲಿ ಅವರು ಸಾಧಿಸಿದ ಯಶಸ್ಸು ಕೂಡ ಇದಕ್ಕೆ ಕಾರಣವಾಗಿದೆ. ಕಳೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿಯೂ ಆರ್ ಅಶ್ವಿನ್ ಎರಡು ಇನ್ನಿಂಗ್ಸ್‌ಗಳಲ್ಲಿಯೂ ತಲಾ ಎರಡು ವಿಕೆಟ್ ಕಿತ್ತು ಮಿಂಚಿದ್ದರು.

ಭಾರತ ತಂಡದ ಆಡುವ ಬಳಗ: ರೋಹಿತ್ ಶರ್ಮಾ, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿಮಿ, ಮೊಹಮ್ಮದ್ ಸಿರಾಜ್

ಟೀಮ್ ಇಂಡಿಯಾ ಬೌಲರ್ ಗಳ ದಾಳಿಗೆ ತತ್ತರಿಸಿದ ಇಂಗ್ಲೆಂಡ್ | Oneindia Kannada

ಇಂಗ್ಲೆಂಡ್ ತಂಡದ ಆಡುವ ಬಳಗ: ರೋರಿ ಬರ್ನ್ಸ್, ಡೊಮಿನಿಕ್ ಸಿಬ್ಲಿ, ಜ್ಯಾಕ್ ಕ್ರಾವ್ಲಿ, ಜೋ ರೂಟ್ (ನಾಯಕ), ಜಾನಿ ಬೈರ್‌ಸ್ಟೊ, ಡೇನಿಯಲ್ ಲಾರೆನ್ಸ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಸ್ಯಾಮ್ ಕರನ್, ಒಲ್ಲಿ ರಾಬಿನ್ಸನ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್

Story first published: Wednesday, August 4, 2021, 20:05 [IST]
Other articles published on Aug 4, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X