For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್: ಟೆಸ್ಟ್ ಪಂದ್ಯಗಳಿಗೆ ಇಂಗ್ಲೆಂಡ್ ತಂಡ ಪ್ರಕಟ

India vs England: England Squad for the First 2 Test Match

ನವದೆಹಲಿ: ಮುಂದಿನ ತಿಂಗಳು ಭಾರತ ಮತ್ತು ಇಂಗ್ಲೆಂಡ್ ಮಧ್ಯೆ ಸುದೀರ್ಘ ಪ್ರವಾಸ ಸರಣಿ ನಡೆಯಲಿದೆ. ಇದರಲ್ಲಿ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯೂ ಸೇರಿರಲಿದೆ. ಈ ಟೆಸ್ಟ್ ಸರಣಿಯ ಆರಂಭಿಕ ಎರಡು ಪಂದ್ಯಗಳಿಗಾಗಿ ಇಂಗ್ಲೆಂಡ್ ತಂಡ ಪ್ರಕಟಗೊಂಡಿದೆ.

ಭಾರತಕ್ಕೆ ಪ್ರವಾಸ ಬರಲಿರುವ ಇಂಗ್ಲೆಂಡ್ ತಂಡ ಇಲ್ಲಿ 4 ಪಂದ್ಯಗಳ ಟೆಸ್ಟ್ ಸರಣಿ, 5 ಪಂದ್ಯಗಳ ಟಿ20ಐ ಸರಣಿ ಮತ್ತು 3 ಪಂದ್ಯಗಳ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಆರಂಭಿಕ ಎರಡು ಟೆಸ್ಟ್ ಪಂದ್ಯಗಳು ಫೆಬ್ರವರಿ 5ರಿಂದ ಆರಂಭಗೊಳ್ಳಲಿದೆ.

ಫೆಬ್ರವರಿ 5ರಿಂದ ಫೆಬ್ರವರಿ 9ರ ವರೆಗೆ ನಡೆಯಲಿರುವ ಆರಂಭಿಕ ಟೆಸ್ಟ್ ಮತ್ತು ಫೆಬ್ರವರಿ 13ರಿಂದ ಫೆಬ್ರವರಿ 17ರ ವರೆಗೆ ನಡೆಯಲಿರುವ ದ್ವಿತೀಯ ಟೆಸ್ಟ್‌ಗಾಗಿ ಇಂಗ್ಲೆಂಡ್ ವೇಲ್ಸ್ ಕ್ರಿಕೆಟ್ ಬೋರ್ಡ್ (ಇಸಿಬಿ) ತಂಡ ಪ್ರಕಟಿಸಿದೆ. ಜೋ ರೂಟ್ ಅವರು ತಂಡ ಮುನ್ನಡೆಸಲಿದ್ದಾರೆ.

ಭಾರತ ವಿರುದ್ಧ ಆರಂಭಿಕ ಎರಡು ಟೆಸ್ಟ್ ಪಂದ್ಯಗಳಿಗೆ ಇಂಗ್ಲೆಂಡ್ ತಂಡ
ಜೋ ರೂಟ್ (ನಾಯಕ), ಮೊಯೀನ್ ಅಲಿ, ಜೇಮ್ಸ್ ಆ್ಯಂಡರ್ಸನ್, ಡಾಮ್ ಬೆಸ್, ಸ್ಟುವರ್ಟ್ ಬ್ರಾಡ್, ಜೋ ಬರ್ನ್ಸ್, ಜೋಸ್ ಬಟ್ಲರ್, ಝ್ಯಾಕ್ ಕ್ರಾಲೆ, ಬೆನ್ ಫೋಕ್ಸ್, ಡ್ಯಾನ್ ಲಾರೆನ್ಸ್, ಜ್ಯಾಕ್ ಲೀಚ್, ಡಾಮ್ ಸಿಬ್ಲಿ, ಬೆನ್ ಸ್ಟೋಕ್ಸ್, ಆಲಿ ಸ್ಟೋನ್, ಕ್ರಿಸ್ ವೋಕ್ಸ್.

Story first published: Friday, January 22, 2021, 9:46 [IST]
Other articles published on Jan 22, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+