ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟೀಮ್ ಇಂಡಿಯಾ vs ಇಂಗ್ಲೆಂಡ್: ಚೆನ್ನೈಗೆ ಬಂದಿಳಿದ ಜೋ ರೂಟ್ ಪಡೆ

India vs England: England team players arrived in Chennai for Test series

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡುವಲ್ಲಿ ಯಶಸ್ವಿಯಾದ ಇಂಗ್ಲೆಂಡ್ ಈಗ ಟೀಮ್ ಇಂಡಿಯಾ ವಿರುದ್ಧದ ಸೆಣೆಸಾಟಕ್ಕೆ ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಜೋ ರೂಟ್ ನಾಯಕತ್ವದ ಇಂಗ್ಲೆಂಡ್ ತಂಡ ಚೆನ್ನೈ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ.

ಫೆಬ್ರವರಿ 5 ರಿಂದ ಭಾರತದ ವಿರುದ್ಧದ ಟೆಸ್ಟ್ ಸರಣಿ ಆರಂಭವಾಗಲಿದೆ. ಅದಕ್ಕೆ 9 ದಿನಗಳಿರುವಾದ ಇಂಗ್ಲೆಂಡ್ ತಂಡ ಭಾರತಕ್ಕೆ ಬಂದಿಳಿದಿದೆ. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಇಂಗ್ಲೆಂಡ್ ಕ್ರಿಕೆಟ್ ತಂಡ 6 ದಿನಗಳ ಕಾಲ ಕ್ವಾರಂಟೈನ್‌ನಲ್ಲಿ ಉಳಿದುಕೊಳ್ಳಲಿದ್ದು ಬಳಿಕ ನೆಟ್ ಅಭ್ಯಾಸದಲ್ಲಿ ತೊಡಗಿಸಿಕೊಳ್ಳಲಿದೆ.

ವಿರಾಟ್ ಕೊಹ್ಲಿ ಮತ್ತು ನನ್ನ ಮಧ್ಯೆ ಏನೂ ಬದಲಾಗಿಲ್ಲ: ಅಜಿಂಕ್ಯ ರಹಾನೆವಿರಾಟ್ ಕೊಹ್ಲಿ ಮತ್ತು ನನ್ನ ಮಧ್ಯೆ ಏನೂ ಬದಲಾಗಿಲ್ಲ: ಅಜಿಂಕ್ಯ ರಹಾನೆ

ಚೆನ್ನೈನ ಚೆಪಾಖ್ ಕ್ರೀಡಾಂಗಣದಲ್ಲಿ ಮೊದಲ ಎರಡು ಟೆಸ್ಟ್ ಪಂದ್ಯಗಳು ನಡೆಯಲಿದೆ. ಹೀಗಾಗಿ ಇಂಗ್ಲೆಂಡ್ ಕ್ರಿಕೆಟ್ ತಂಡ ಶ್ರೀಲಂಕಾದಿಂದ ನೇರವಾಗಿ ಚೆನ್ನೈಗೆ ಬಂದಿಳಿದಿದೆ. ನಾಯಕ ಜೋ ರೂಟ್ ಸಹಿತ ಎಲ್ಲಾ ಆಟಗಾರರು ಹಾಗೂ ಸಿಬ್ಬಂಧಿಗಳು ಚೆನ್ನೈನ ವಿಮಾನದಿಲ್ದಾಣಕ್ಕೆ ಆಗಮಿಸಿದ್ದಾರೆ. ಶ್ರೀಲಂಕಾದಿಂದ ರೂಟ್ ಬಳಗ ಬೆಳಗ್ಗೆ 10:30ರ ಸುಮಾರಿಗೆ ಚೆನ್ನೈಗೆ ಪ್ರಯಾಣ ಬೆಳೆಸಿತ್ತು. ಮುಂದಿನ ಆರು ದಿನಗಳ ಕಾಲ ಕಠಿಣ ಹೋಟೆಲ್ ಕ್ವಾರಂಟೈನ್‌ಲ್ಲಿ ಪ್ರತ್ಯೇಕವಾಗಿ ಉಳಿದುಕೊಳ್ಳಲಿದ್ದಾರೆ ಎಂದು ತಮಿಳುನಾಡು ಕ್ರಿಕೆಟ್ ಅಸೊಸಿಯೇಶನ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸೋಮವಾರ ಅಂತ್ಯವಾದ ಶ್ರೀಲಂಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಗೆಲುವನ್ನು ಸಾಧಿಸುವ ಮೂಲಕ ಇಂಗ್ಲೆಂಡ್ ತಂಡ 2-0 ಅಂತರದಿಂದ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮೂಲಕ ವಶಕ್ಕೆ ಪಡೆದುಕೊಮಡಿತ್ತು. ಈ ಸರಣಿಯಲ್ಲಿ ಇಂಗ್ಲೆಂಡ್ ನಾಯಕ ಒಂದು ದ್ವಿಶತಕ ಸಹಿತ ಎರಡು ಬೃತ್ ಶತಕ ದಾಖಲಿಸಿ ಮಿಂಚಿದ್ದರು.

ಯುಎಇ ಆಟಗಾರರಿಂದ ಮ್ಯಾಚ್ ಫಿಕ್ಸಿಂಗ್; ಅಮಾನತು ಮಾಡಿದ ಐಸಿಸಿಯುಎಇ ಆಟಗಾರರಿಂದ ಮ್ಯಾಚ್ ಫಿಕ್ಸಿಂಗ್; ಅಮಾನತು ಮಾಡಿದ ಐಸಿಸಿ

ಇನ್ನು ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಹಾಗೂ ಜೋಫ್ರಾ ಆರ್ಚರ್ ಕಳೆದ ಭಾನುವಾರ ಚೆನ್ನೈಗೆ ಬಂದಿಳಿದಿದ್ದಾರೆ. ಸದ್ಯ ಇವರು ಹೋಟೆ ಕ್ವಾರಂಟೈನ್‌ನಲ್ಲಿದ್ದಾರೆ. ಇನ್ನು ರೋಹಿತ್ ಶರ್ಮಾ, ಉಪನಾಯಕ ಅಜಿಂಕ್ಯ ರಹಾನೆ, ಚೇತೇಶ್ವರ್ ಪೂಜಾರ, ಜಸ್ಪ್ರೀತ್ ಬೂಮ್ರಾ ಮತ್ತು ರಿಷಭ್ ಪಂತ್ ಸಹಿತ ಟೀಮ್ ಇಂಡಿಯಾದ ಕೆಲ ಆಟಗಾರರು ಕೂಡ ಚೆನ್ನೈ ನಗರವನ್ನು ತಲುಪಿದ್ದಾರೆ.

Story first published: Wednesday, January 27, 2021, 17:53 [IST]
Other articles published on Jan 27, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X