Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs ENG 1st ODI: ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್; ಆಡುವ ಹನ್ನೊಂದರಿಂದ ಕೊಹ್ಲಿ ಔಟ್

ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ODI ಸರಣಿಯ ಮೊದಲ ಪಂದ್ಯ ನಾಗ್ಪುರದ ವಿಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಉಭಯ ತಂಡಗಳ ಮೊದಲ ಏಕದಿನ ಪಂದ್ಯ ಭಾರೀ ಕುತೂಹಲ ಮೂಡಿಸಿದೆ. ಈ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ರೋಹಿತ್ ಶರ್ಮಾ ಮುನ್ನಡೆಸುತ್ತಿರುವ ಭಾರತ ತಂಡ ಮೊದಲು ಬೌಲಿಂಗ್ ಮಾಡಲಿದೆ.

ಭಾರತ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಮಹತ್ವದ ಬದಲಾವಣೆಗಳಾಗಿವೆ. ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ಆಡುವ ಹನ್ನೊಂದರ ಬಳಗದಿಂದ ಹೊರಗುಳಿದಿದ್ದಾರೆ. ಮತ್ತೊಂದೆಡೆ ಯುವ ಕ್ರಿಕೆಟಿಗರಾದ ಯಶಸ್ವಿ ಜೈಸ್ವಾಲ್ ಮತ್ತು ಹರ್ಷಿತ್ ರಾಣಾ ಚೊಚ್ಚಲ ಏಕದಿನ ಅಂತಾರಾಷ್ಟ್ರೀಯ ಪಂದ್ಯವನ್ನಾಡುತ್ತಿದ್ದಾರೆ. ಇಬ್ಬರೂ ಆಟಗಾರರು ಇತ್ತೀಚೆಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾ ಪರ ಅದ್ಭುತ ಪ್ರದರ್ಶನ ನೀಡಿದ್ದಾರೆ.

India vs England first ODI toss playing 11

ಮೊದಲ ಏಕದಿನ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿ ಗಾಯಗೊಂಡಿದ್ದಾರೆ. ಬುಧುವಾರ ರಾತ್ರಿ ವಿರಾಟ್ ಮೊಣಕಾಲಿನಲ್ಲಿ ನೋವು ಕಾಣಿಸಿಕೊಂಡಿದೆ. ಹೀಗಾಗಿ ಅವರನ್ನು ಮೊದಲ ಏಕದಿನ ಪಂದ್ಯದಿಂದ ಕೈ ಬಿಡಲಾಗಿದೆ. ಈ ಬಗ್ಗೆ ಟಾಸ್ ಸಂದರ್ಭದಲ್ಲಿ ನಾಯಕ ರೋಹಿತ್ ಶರ್ಮಾ ಮಾಹಿತಿ ನೀಡಿದ್ದಾರೆ.

ವಿರಾಟ್ ಗಾಯ ಎಷ್ಟು ಗಂಭೀರವಾಗಿದೆ ಎಂಬುದರ ಕುರಿತು ಇನ್ನೂ ಅಧಿಕೃತ ಮಾಹಿತಿ ಇಲ್ಲ. ಪಂದ್ಯ ಆರಂಭವಾಗುವ ಮುನ್ನ, ವಿರಾಟ್ ತಂಡದೊಂದಿಗೆ ಅಭ್ಯಾಸದ ಅವಧಿಯಲ್ಲಿ ಎಚ್ಚರಿಕೆಯಿಂದ ನಡೆಯುತ್ತಿರುವುದು ಕಂಡುಬಂದಿತು. ಅವರ ಬಲ ಮೊಣಕಾಲಿಗೆ ಬ್ಯಾಂಡೇಜ್ ಕಟ್ಟಿರುವುದು ಕಂಡು ಬಂದಿತ್ತು.

ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ ಬಲಗೈ ವೇಗದ ಬೌಲರ್ ಮೊಹಮ್ಮದ್ ಶಮಿ ಪ್ಲೇಯಿಂಗ್-11 ರಲ್ಲಿ ಸ್ಥಾನ ಪಡೆದಿದ್ದಾರೆ . ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಭಾರತಕ್ಕೆ ಇದು ಒಳ್ಳೆಯ ಸುದ್ದಿ. ಶಮಿ ಕೊನೆಯ ಬಾರಿಗೆ 2023ರ ಏಕದಿನ ವಿಶ್ವಕಪ್‌ನಲ್ಲಿ ಭಾರತ ತಂಡದ ಪರ ಕಾಣಿಸಿಕೊಂಡಿದ್ದರು. ಒಂದು ವರ್ಷಕ್ಕೂ ಹೆಚ್ಚು ಸಮಯದ ನಂತರ ಅವರು ಭಾರತ ಪರ ವಿಕೆಟ್ ಪಡೆಯಲು ಸಿದ್ಧರಾಗಿದ್ದಾರೆ.

ಪ್ಲೇಯಿಂಗ್ ಇಲೆವೆನ್

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಶುಭಮನ್ ಗಿಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ.

ಇಂಗ್ಲೆಂಡ್ ತಂಡ: ಬೆನ್ ಡಕೆಟ್, ಫಿಲ್ ಸಾಲ್ಟ್ (ವಿಕೆಟ್ ಕೀಪರ್), ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಾಕೋಬ್ ಬೆಥೆಲ್, ಬ್ರೈಡನ್ ಕಾರ್ಸೆ, ಜೋಫ್ರಾ ಆರ್ಚರ್, ಆದಿಲ್ ರಶೀದ್, ಸಾಕಿಬ್ ಮಹಮೂದ್.

Story first published: Thursday, February 6, 2025, 13:15 [IST]
Other articles published on Feb 6, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+