Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs ENG 4th T20: ಕೊನೆಗೂ ಟಾಸ್ ಗೆಲ್ಲುವಲ್ಲಿ ಬಟ್ಲರ್ ಯಶಸ್ವಿ; ಭಾರತ ಬ್ಯಾಟಿಂಗ್

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಸರಣಿಯ ನಾಲ್ಕನೇ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ಒಂದೆಡೆ, ಆತಿಥೇಯ ಭಾರತ ಸರಣಿ ವಶಪಡಿಸಿಕೊಳ್ಳಲು ನೋಡುತ್ತಿದೆ. ಮತ್ತೊಂದೆಡೆ ಆಂಗ್ಲರ ಪಡೆ ಸರಣಿಯಲ್ಲಿ ಸಮಬಲ ಸಾಧಿಸಲು ಹವಣಿಸುತ್ತಿದೆ. ಪುಣೆಯಲ್ಲಿ ನಡೆಯುತ್ತಿರುವ ನಾಲ್ಕನೇ ಟಿ20 ಪಂದ್ಯದಲ್ಲಿ ಕೊನೆಗೂ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ಜೋಸ್ ಬಟ್ಲರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಭಾರತ ತಂಡ ಸೂರ್ಯಕುಮಾರ್ ಯಾದವ್ ನೇತೃತ್ವದಲ್ಲಿ ಮೊದಲು ಬ್ಯಾಟಿಂಗ್ ಮಾಡಲಿದೆ.

ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಆಡುವ ಹನ್ನೊಂದರ ಬಳಗದಲ್ಲಿ ಮೂರು ಬದಲಾವಣೆ ಆಗಿದೆ. ಇಂಗ್ಲೆಂಡ್ ತಂಡದಲ್ಲಿಯೂ ಎರಡು ಬದಲಾವಣೆಗಳು ಆಗಿರುವುದನ್ನು ಜೋಸ್ ಬಟ್ಲರ್ ತಿಳಿಸಿದ್ದಾರೆ.

India vs England Fourth T20 match toss playing-11 report

ಟೀಮ್ ಇಂಡಿಯಾ ಪ್ಲೇಯಿಂಗ್-11 ರಲ್ಲಿ ಅರ್ಷದೀಪ್ ಸಿಂಗ್, ರಿಂಕು ಸಿಂಗ್, ಮತ್ತು ಶಿವಂ ದುಬೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ. ಮೊಹಮ್ಮದ್ ಶಮಿ ಬದಲಿಗೆ ಅರ್ಷದೀಪ್ ಸಿಂಗ್, ಧ್ರುವ್ ಜುರೆಲ್ ಸ್ಥಾನಕ್ಕೆ ರಿಂಕು ಸಿಂಗ್, ಹಾಗು ವಾಷಿಂಗ್ಟನ್ ಸುಂದರ್ ಬದಲಿಗೆ ಶಿವಂ ದುಬೆ ಆಡುವ ಅವಕಾಶ ಪಡೆದಿದ್ದಾರೆ. ಮತ್ತೊಂದೆಡೆ ಇಂಗ್ಲೆಂಡ್ ತಂಡದಲ್ಲಿ ಮಾರ್ಕ್ ವುಡ್ ಬದಲಿಗೆ ಸಾಕಿಬ್ ಮಹಮೂದ್ ಮತ್ತು ಸ್ಮಿತ್ ಜಾಗಕ್ಕೆ ಜಾಕೋಬ್ ಬೆಥೆಲ್ ಬಂದಿದ್ದಾರೆ.

ಐದು ಪಂದ್ಯಗಳ ಟಿ20 ಸರಣಿಯಲ್ಲಿ ಮೂರು ಪಂದ್ಯಗಳು ಮುಕ್ತಾಯವಾಗಿದ್ದು, ಭಾರತ 2-1 ಮುನ್ನಡೆ ಸಾಧಿಸಿದೆ. ಕೋಲ್ಕತ್ತಾ ಮತ್ತು ಚೆನ್ನೈನಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸುವ ಮೂಲಕ ಸರಣಿ ಮೇಲೆ ಭಾರತ ಹಿಡಿತ ಹೊಂದಿದೆ. ಇದಾದ ಬಳಿಕ ರಾಜ್‌ಕೋಟ್‌ನಲ್ಲಿ ಭಾರತವನ್ನು ಸೋಲಿಸುವ ಮೂಲಕ ಇಂಗ್ಲೆಂಡ್ ತಂಡವು 2-1 ರಿಂದ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಈಗ ಟೀಮ್ ಇಂಡಿಯಾ ಈ ಪಂದ್ಯವನ್ನು ಗೆದ್ದು ಸರಣಿಯನ್ನು ಗೆಲ್ಲಲು ನೀರಿಕ್ಷೆಯಲ್ಲಿದೆ.

ಪುಣೆಯಲ್ಲಿ ಭಾರತ ತಂಡ ಇದುವರೆಗೆ 4 ಟಿ20 ಪಂದ್ಯಗಳನ್ನು ಆಡಿದೆ. 2012ರಲ್ಲಿ ಇದೇ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾ ಟಿ20 ಪಂದ್ಯ ಆಡಿದ್ದು, ಅದ್ಭುತ ಗೆಲುವು ದಾಖಲಿಸಿತ್ತು. ಆದರೆ ಶ್ರೀಲಂಕಾ ಈ ಪಿಚ್‌ನಲ್ಲಿ ಭಾರತವನ್ನು ಎರಡು ಬಾರಿ ಸೋಲಿಸಿದೆ.

ಉಭಯ ತಂಡಗಳ ಪ್ಲೇಯಿಂಗ್-11

ಭಾರತ: ಸಂಜು ಸ್ಯಾಮ್ಸನ್(ವಿಕೆಟ್‌ಕೀಪರ್), ಅಭಿಷೇಕ್ ಶರ್ಮಾ, ಸೂರ್ಯಕುಮಾರ್ ಯಾದವ್(ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರಿಂಕು ಸಿಂಗ್, ಅಕ್ಸರ್ ಪಟೇಲ್, ಅರ್ಷದೀಪ್ ಸಿಂಗ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ.

ಇಂಗ್ಲೆಂಡ್: ಫಿಲಿಪ್ ಸಾಲ್ಟ್ (ವಿಕೆಟ್‌ಕೀಪರ್), ಬೆನ್ ಡಕೆಟ್, ಜೋಸ್ ಬಟ್ಲರ್ (ನಾಯಕ), ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಜಾಕೋಬ್ ಬೆಥೆಲ್, ಜೇಮೀ ಓವರ್‌ಟನ್, ಬ್ರೈಡನ್ ಕಾರ್ಸೆ, ಜೋಫ್ರಾ ಆರ್ಚರ್, ಆದಿಲ್ ರಶೀದ್, ಸಾಕಿಬ್ ಮಹಮೂದ್.

Story first published: Friday, January 31, 2025, 18:35 [IST]
Other articles published on Jan 31, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+