
ಸದ್ಯ ಕ್ರಿಕೆಟ್ ಜಗತ್ತಿನಲ್ಲಿ ಅತಿ ಹೆಚ್ಚಾಗಿ ಚರ್ಚಿಸಲ್ಪಡುತ್ತಿರುವ ಸರಣಿ ಎಂದರೆ ಅದು ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ನಡೆಯುತ್ತಿರುವ 5 ಪಂದ್ಯಗಳ ಟೆಸ್ಟ್ ಸರಣಿ. ಹೌದು, ಇಂಗ್ಲೆಂಡ್ ನೆಲದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ 3 ಪಂದ್ಯಗಳು ಮುಗಿದಿದ್ದು ಎರಡೂ ತಂಡಗಳು ಸಹ ತಲಾ ಒಂದೊಂದು ಪಂದ್ಯದಲ್ಲಿ ಜಯ ಸಾಧಿಸುವುದರ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸಿವೆ. ಹೀಗಾಗಿ ಭಾರತ ಮತ್ತು ಇಂಗ್ಲೆಂಡ್ ನಡುವೆ ಓವಲ್ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 2 ರ ಗುರುವಾರದಿಂದ ಆರಂಭವಾಗಲಿರುವ ನಾಲ್ಕನೇ ಟೆಸ್ಟ್ ಪಂದ್ಯದ ಕುರಿತು ಕುತೂಹಲ ಮತ್ತು ನಿರೀಕ್ಷೆಗಳು ಹೆಚ್ಚಿವೆ.
ಲಾರ್ಡ್ಸ್ ಅಂಗಳದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಅತ್ಯದ್ಭುತ ಪ್ರದರ್ಶನವನ್ನು ನೀಡುವುದರ ಮೂಲಕ 151 ರನ್‌ಗಳ ಭರ್ಜರಿ ಜಯವನ್ನು ಸಾಧಿಸಿದ್ದ ಟೀಮ್ ಇಂಡಿಯಾ ನಂತರ ಇಂಗ್ಲೆಂಡ್ ವಿರುದ್ಧ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಹೀನಾಯವಾಗಿ ಸೋಲನ್ನು ಅನುಭವಿಸಿತು. ಹೌದು, ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ತೃತೀಯ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಇನ್ನಿಂಗ್ಸ್ ಸಹಿತ 76 ರನ್‌ಗಳ ಸೋಲನ್ನು ಅನುಭವಿಸಿದ ಟೀಮ್ ಇಂಡಿಯಾ ಸದ್ಯ ಇಂಗ್ಲೆಂಡ್ ವಿರುದ್ಧ ಓವಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಜಯ ಗಳಿಸಲು ಸಾಕಷ್ಟು ಯೋಜನೆಗಳನ್ನು ಹಾಕಿಕೊಳ್ಳುತ್ತಿದೆ.
ಹೀಗೆ 3 ಪಂದ್ಯಗಳು ಮುಗಿದ ನಂತರ ಭಾರತ ಮತ್ತು ಇಂಗ್ಲೆಂಡ್ ತಂಡಗಳೆರಡೂ ತಲಾ ಒಂದೊಂದು ಪಂದ್ಯಗಳಲ್ಲಿ ಜಯ ಸಾಧಿಸುವುದರ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸಿದ್ದು, ಸೆಪ್ಟೆಂಬರ್ 2 ರ ಗುರುವಾರದಿಂದ ಓವಲ್ ಕ್ರೀಡಾಂಗಣದಲ್ಲಿ ಆರಂಭವಾಗಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯ ಎರಡೂ ತಂಡಗಳಿಗೂ ಸಹ ಬಹುಮುಖ್ಯದ್ದಾಗಿದೆ. ಇನ್ನು ಓವೆಲ್ ಕ್ರೀಡಾಂಗಣದಲ್ಲಿ ಇದುವರೆಗೂ ನಡೆದಿರುವ ಒಟ್ಟು 13 ಟೆಸ್ಟ್ ಪಂದ್ಯಗಳ ಪೈಕಿ ಕೇವಲ ಒಂದೇ ಒಂದು ಟೆಸ್ಟ್ ಪಂದ್ಯದಲ್ಲಿ ಮಾತ್ರ ಜಯ ಗಳಿಸಿರುವ ಟೀಮ್ ಇಂಡಿಯಾ ಈ ಬಾರಿಯ ಟೆಸ್ಟ್ ಪಂದ್ಯದಲ್ಲಿ ಜಯ ಗಳಿಸುವುದರ ಮೂಲಕ 50 ವರ್ಷಗಳ ಬಳಿಕ ಇತಿಹಾಸವನ್ನು ಸೃಷ್ಟಿಸಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.
ಅತ್ತ ಓವಲ್ ಕ್ರೀಡಾಂಗಣದಲ್ಲಿ ಭಾರತದ ವಿರುದ್ಧ ನಡೆದಿರುವ 13 ಪಂದ್ಯಗಳ ಪೈಕಿ 5 ಪಂದ್ಯಗಳಲ್ಲಿ ಜಯ ಸಾಧಿಸಿರುವ ಇಂಗ್ಲೆಂಡ್ ಈ ಕ್ರೀಡಾಂಗಣದಲ್ಲಿ ಬಲಿಷ್ಠ ತಂಡದಂತೆ ಕಾಣುತ್ತಿದೆ. ಅಷ್ಟೇ ಅಲ್ಲದೆ ಈ ಕ್ರೀಡಾಂಗಣದಲ್ಲಿ ನಡೆದಿರುವ 13 ಪಂದ್ಯಗಳಲ್ಲಿ 7 ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿದ್ದು ಇದೀಗ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯಲಿರುವ ಪಂದ್ಯಕ್ಕೆ ಮಳೆ ಅಡ್ಡಿ ಉಂಟು ಮಾಡಲಿದೆ ಎಂಬ ಆತಂಕ ಮೂಡಿದೆ.
ಹವಾಮಾನ ವರದಿ:
ಹವಾಮಾನ ವರದಿಯ ಪ್ರಕಾರ ಭಾರತ ಮತ್ತು ಇಂಗ್ಲೆಂಡ್ ನಡುವೆ ಸೆಪ್ಟೆಂಬರ್ 2 ರಿಂದ ಓವಲ್ ಕ್ರೀಡಾಂಗಣದಲ್ಲಿ ಆರಂಭವಾಗಲಿರುವ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲನೇ ದಿನ ಮಳೆಯ ಅಡ್ಡಿ ಇರುವುದಿಲ್ಲ ಎನ್ನಲಾಗುತ್ತಿದೆ. ಲಂಡನ್ ನಗರದ ಬೆಳಗಿನ ಸಮಯದಲ್ಲಿ ಮೋಡ ಕವಿದ ವಾತಾವರಣವಿರಲಿದೆ ಹಾಗೂ ಮಧ್ಯಾಹ್ನದ ನಂತರ ಬಿಸಿಲಿನ ವಾತಾವರಣವಿರಲಿದ್ದು ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ದಿನ ಮಳೆಯಾಗುವುದಿಲ್ಲ ಎಂದು ಹವಾಮಾನ ವರದಿ ಹೇಳುತ್ತಿದೆ.
ಭಾರತ ಮತ್ತು ಇಂಗ್ಲೆಂಡ್ ತಂಡಗಳ ಸಂಭಾವ್ಯ ಆಡುವ ಬಳಗ
ಭಾರತದ ಸಂಭಾವ್ಯ ಆಡುವ ಬಳಗ: ಕೆಎಲ್ ರಾಹುಲ್, ರೋಹಿತ್ ಶರ್ಮಾ, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ / ರವಿಚಂದ್ರನ್ ಅಶ್ವಿನ್, ಇಶಾಂತ್ ಶರ್ಮಾ / ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.
ಇಂಗ್ಲೆಂಡ್ ಸಂಭಾವ್ಯ ಆಡುವ ಬಳಗ: ರೋರಿ ಬರ್ನ್ಸ್, ಹಸೀಬ್ ಹಮೀದ್, ಡಾವಿಡ್ ಮಲನ್, ಜೋ ರೂಟ್ (ನಾಯಕ), ಜಾನಿ ಬೈರ್‌ಸ್ಟೊ (ವಿಕೆಟ್ ಕೀಪರ್), ಒಲ್ಲಿ ಪೋಪ್ / ಡೇನಿಯಲ್ ಲಾರೆನ್ಸ್, ಮೊಯೀನ್ ಅಲಿ, ಒಲ್ಲಿ ರಾಬಿನ್ಸನ್, ಕ್ರಿಸ್ ವೋಕ್ಸ್ / ಸ್ಯಾಮ್ ಕರನ್, ಕ್ರೇಗ್ ಓವರ್‌ಟನ್ / ಮಾರ್ಕ್ ವುಡ್, ಮತ್ತು ಜೇಮ್ಸ್ ಆಂಡರ್ಸನ್.
ನೇರ ಪ್ರಸಾರ:
ಭಾರತ ಮತ್ತು ಇಂಗ್ಲೆಂಡ್ ನಡುವೆ ಓವಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್ ಪಂದ್ಯವನ್ನು ಸೋನಿ ಸಿಕ್ಸ್ ಚಾನೆಲ್‌ನಲ್ಲಿ ವೀಕ್ಷಿಸಬಹುದಾಗಿದೆ ಮತ್ತು ಸೋನಿ ಲಿವ್ ಅಪ್ಲಿಕೇಶನ್‌ನಲ್ಲಿಯೂ ಸಹ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದಾಗಿದೆ.