For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್ ನಾಲ್ಕನೇ ಟೆಸ್ಟ್: ಎರಡನೇ ದಿನದಾಟಕ್ಕೆ ಮಳೆ ಅಡ್ಡಿಪಡಿಸಲಿದೆಯಾ?

India vs England Fourth Test: Day 2 Oval weather report

ಸದ್ಯ ಕ್ರಿಕೆಟ್ ಜಗತ್ತಿನಲ್ಲಿ ಅತಿ ಹೆಚ್ಚಾಗಿ ಚರ್ಚಿಸಲ್ಪಡುತ್ತಿರುವ ಸರಣಿ ಎಂದರೆ ಅದು ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ನಡೆಯುತ್ತಿರುವ 5 ಪಂದ್ಯಗಳ ಟೆಸ್ಟ್ ಸರಣಿ. ಹೌದು, ಇಂಗ್ಲೆಂಡ್ ನೆಲದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ 3 ಪಂದ್ಯಗಳು ಮುಗಿದಿದ್ದು ಎರಡೂ ತಂಡಗಳು ಸಹ ತಲಾ ಒಂದೊಂದು ಪಂದ್ಯದಲ್ಲಿ ಜಯ ಸಾಧಿಸುವುದರ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸಿವೆ. ಹೀಗಾಗಿ ಭಾರತ ಮತ್ತು ಇಂಗ್ಲೆಂಡ್ ನಡುವೆ ಓವಲ್ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 2 ರ ಗುರುವಾರದಿಂದ ಆರಂಭವಾಗಿರುವ ನಾಲ್ಕನೇ ಟೆಸ್ಟ್ ಪಂದ್ಯದ ಕುರಿತು ಕುತೂಹಲ ಮತ್ತು ನಿರೀಕ್ಷೆಗಳು ಹೆಚ್ಚಿತ್ತು.

ಸೆಪ್ಟೆಂಬರ್ 2 ರಂದು ಆರಂಭವಾದ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ಟೀಮ್ ಇಂಡಿಯಾ ಮೊದಲನೇ ಇನ್ನಿಂಗ್ಸ್‌ನಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 191 ರನ್ ಗಳಿಸಿತು. ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮ ಮತ್ತು ಕೆಎಲ್ ರಾಹುಲ್ ಉತ್ತಮ ಇನ್ನಿಂಗ್ಸ್ ಕಟ್ಟುವಲ್ಲಿ ಅಕ್ಷರಶಃ ವಿಫಲರಾದರು. ಉಳಿದಂತೆ ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ ಮತ್ತು ರಿಷಭ್ ಪಂತ್ ಕೂಡ ಓವಲ್ ಅಂಗಳದಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ಎಡವಿದ್ದಾರೆ. ಆದರೆ ಭಾರತದ ನಾಯಕ ವಿರಾಟ್ ಕೊಹ್ಲಿ ಮತ್ತು ಶಾರ್ದೂಲ್ ಠಾಕೂರ್ ಇಬ್ಬರೂ ಸಹ ಅರ್ಧಶತಕಗಳನ್ನು ಸಿಡಿಸುವುದರ ಮೂಲಕ ಜವಾಬ್ದಾರಿಯುತ ಆಟವನ್ನು ಆಡಿದ್ದಾರೆ. ವಿರಾಟ್ ಕೊಹ್ಲಿ 50 ಹಾಗೂ ಶಾರ್ದೂಲ್ ಠಾಕೂರ್ 57 ರನ್ ಬಾರಿಸುವುದರ ಮೂಲಕ ಇಂಡಿಯಾ ಮೊದಲನೇ ಇನ್ನಿಂಗ್ಸ್‌ನಲ್ಲಿ 191 ರನ್ ತಲುಪುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಪ್ರತ್ಯುತ್ತರವಾಗಿ ಮೊದಲನೇ ದಿನವೇ ತನ್ನ ಮೊದಲನೇ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿರುವ ಇಂಗ್ಲೆಂಡ್ ದಿನದಾಟದಂತ್ಯಕ್ಕೆ 53 ರನ್‌ಗೆ 3 ವಿಕೆಟ್‍ಗಳನ್ನು ಕಳೆದುಕೊಂಡಿದೆ.

ಇಂಗ್ಲೆಂಡ್ ಪರ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ಮಿಂಚಿದ್ದ ರೊರಿ ಬರ್ನ್ಸ್ 5 ರನ್, ಹಸೀಬ್ ಹಮೀದ್ 0 ಮತ್ತು ಜೋ ರೂಟ್ 21 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ಇಂಗ್ಲೆಂಡ್ ಪರ ಆರಂಭಿಕ ಆಟಗಾರರಾಗಿ ಬಂದ ರೊರಿ ಬರ್ನ್ಸ್ ಮತ್ತು ಹಸೀಬ್ ಹಮೀದ್ ಅವರ ವಿಕೆಟ್‍ಗಳನ್ನು ಪಡೆದುಕೊಳ್ಳುವುದರ ಮೂಲಕ ಜಸ್ಪ್ರೀತ್ ಬುಮ್ರಾ ಮಿಂಚಿದರು. ಸದ್ಯ ಇಂಗ್ಲೆಂಡ್ ಪರ ಡಾವಿಡ್ ಮಲನ್ ಅಜೇಯ 26 ರನ್ ಮತ್ತು ಕ್ರೈಗ್ ಓವರ್‌ಟನ್ ಅಜೇಯ 1 ರನ್ ಗಳಿಸಿದ್ದು ಎರಡನೇ ದಿನದಾಟವನ್ನು ಆರಂಭಿಸಲು ಸಿದ್ಧರಾಗಿದ್ದಾರೆ.

ನಾಲ್ಕನೇ ಟೆಸ್ಟ್ ಪಂದ್ಯದ ಎರಡನೇ ದಿನದ ಹವಾಮಾನ ವರದಿ:

ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಪ್ರಥಮ ಪಂದ್ಯ ಮಳೆಯ ಹೊಡೆತಕ್ಕೆ ಸಿಕ್ಕು ಯಾವುದೇ ಫಲಿತಾಂಶವಿಲ್ಲದೆ ನೀರಸ ಡ್ರಾನಲ್ಲಿ ಅಂತ್ಯಗೊಂಡಿತ್ತು. ಈ ಪಂದ್ಯವನ್ನು ಹೊರತುಪಡಿಸಿದರೆ ಬೇರೆ ಯಾವುದೇ ಪಂದ್ಯಕ್ಕೂ ಸಹ ಮಳೆ ದೊಡ್ಡ ಮಟ್ಟದಲ್ಲಿ ಅಡ್ಡಿಯನ್ನು ಉಂಟು ಮಾಡಿಲ್ಲ.

ಇನ್ನು ಸದ್ಯಕ್ಕೆ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದ ಎರಡನೇ ದಿನದಂದು ಯಾವುದೇ ರೀತಿಯ ಮಳೆಯ ಆಗಮನವಾಗುವುದಿಲ್ಲ ಎಂದು ಹವಾಮಾನ ವರದಿ ಹೇಳುತ್ತಿದೆ. ಈ ಪಂದ್ಯದ ಮೊದಲನೇ ದಿನ ಮಳೆಯ ತೊಂದರೆಯಿಲ್ಲದೆ ಸರಾಗವಾಗಿ ನಡೆದಿದೆ.

ಸದ್ಯ ಇಂಗ್ಲೆಂಡ್ 3 ವಿಕೆಟ್ ನಷ್ಟಕ್ಕೆ 53 ರನ್ ಗಳಿಸಿದ್ದು 138 ರನ್‌ಗಳ ಹಿನ್ನಡೆಯನ್ನು ಕಾಯ್ದುಕೊಂಡಿದೆ. ಸೆಪ್ಟೆಂಬರ್ 3, ಶುಕ್ರವಾರದಂದು ನಡೆಯಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದಂದು ಇಂಗ್ಲೆಂಡ್ ಉತ್ತಮ ಪ್ರದರ್ಶನ ನೀಡಿ ಪಂದ್ಯವನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳುತ್ತಾ ಅಥವಾ ಭಾರತೀಯ ಬೌಲರ್‌ಗಳು ತಮ್ಮ ಉತ್ತಮ ಪ್ರದರ್ಶನವನ್ನು ಮುಂದುವರಿಸಿ ಇಂಗ್ಲೆಂಡ್ ಆಟಗಾರರನ್ನು ಕಟ್ಟಿ ಹಾಕುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ನೇರ ಪ್ರಸಾರ:

ಭಾರತ ಮತ್ತು ಇಂಗ್ಲೆಂಡ್ ನಡುವೆ ಓವಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್ ಪಂದ್ಯವನ್ನು ಸೋನಿ ಸಿಕ್ಸ್ ಚಾನೆಲ್‌ನಲ್ಲಿ ವೀಕ್ಷಿಸಬಹುದಾಗಿದೆ ಮತ್ತು ಸೋನಿ ಲಿವ್ ಅಪ್ಲಿಕೇಶನ್‌ನಲ್ಲಿಯೂ ಸಹ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದಾಗಿದೆ.

Story first published: Friday, September 3, 2021, 17:30 [IST]
Other articles published on Sep 3, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+