ಭಾರತ vs ಇಂಗ್ಲೆಂಡ್ 4ನೇ ಟೆಸ್ಟ್: ಮೂರನೇ ದಿನದಾಟಕ್ಕೆ ಮಳೆಯ ಅಡ್ಡಿ ಉಂಟಾಗಲಿದೆಯಾ?

ಸೆಪ್ಟೆಂಬರ್ 2 ರಂದು ಆರಂಭವಾದ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ಟೀಮ್ ಇಂಡಿಯಾ ಮೊದಲನೇ ಇನ್ನಿಂಗ್ಸ್‌ನಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 191 ರನ್ ಗಳಿಸಿತು. ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮ ಮತ್ತು ಕೆಎಲ್ ರಾಹುಲ್ ಉತ್ತಮ ಇನ್ನಿಂಗ್ಸ್ ಕಟ್ಟುವಲ್ಲಿ ಅಕ್ಷರಶಃ ವಿಫಲರಾದರು. ಉಳಿದಂತೆ ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ ಮತ್ತು ರಿಷಭ್ ಪಂತ್ ಕೂಡ ಓವಲ್ ಅಂಗಳದಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ಎಡವಿದ್ದಾರೆ. ಆದರೆ ಭಾರತದ ನಾಯಕ ವಿರಾಟ್ ಕೊಹ್ಲಿ ಮತ್ತು ಶಾರ್ದೂಲ್ ಠಾಕೂರ್ ಇಬ್ಬರೂ ಸಹ ಅರ್ಧಶತಕಗಳನ್ನು ಸಿಡಿಸುವುದರ ಮೂಲಕ ಜವಾಬ್ದಾರಿಯುತ ಆಟವನ್ನು ಆಡಿದ್ದಾರೆ. ವಿರಾಟ್ ಕೊಹ್ಲಿ 50 ಹಾಗೂ ಶಾರ್ದೂಲ್ ಠಾಕೂರ್ 57 ರನ್ ಬಾರಿಸುವುದರ ಮೂಲಕ ಇಂಡಿಯಾ ಮೊದಲನೇ ಇನ್ನಿಂಗ್ಸ್‌ನಲ್ಲಿ 191 ರನ್ ತಲುಪುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಪ್ರತ್ಯುತ್ತರವಾಗಿ ಮೊದಲನೇ ದಿನವೇ ತನ್ನ ಮೊದಲನೇ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿರುವ ಇಂಗ್ಲೆಂಡ್ ದಿನದಾಟದಂತ್ಯಕ್ಕೆ 53 ರನ್‌ಗೆ 3 ವಿಕೆಟ್‍ಗಳನ್ನು ಕಳೆದುಕೊಂಡಿತ್ತು.

ಮೊದಲನೇ ದಿನದಾಟದಂತ್ಯಕ್ಕೆ 3 ವಿಕೆಟ್ ನಷ್ಟಕ್ಕೆ 53 ರನ್ ಗಳಿಸಿ 138 ರನ್ ಗಳ ಹಿನ್ನಡೆಯನ್ನು ಅನುಭವಿಸಿದ್ದ ಇಂಗ್ಲೆಂಡ್ ಎರಡನೇ ದಿನದಾಟದ ಆರಂಭದಲ್ಲಿಯೇ ಮತ್ತೆರಡು ವಿಕೆಟ್‍ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಎರಡನೇ ದಿನದಾಟ ಆರಂಭವಾದ ಕೆಲವೇ ನಿಮಿಷಗಳಲ್ಲಿ ತನ್ನೆರಡು ವಿಕೆಟ್ ಕಳೆದುಕೊಂಡ ಇಂಗ್ಲೆಂಡ್ 5 ವಿಕೆಟ್ ನಷ್ಟಕ್ಕೆ 62 ರನ್ ಗಳಿಸಿ ಸಂಕಷ್ಟದಲ್ಲಿತ್ತು. ಈ ಸಂದರ್ಭದಲ್ಲಿ ಆರನೇ ವಿಕೆಟ್‍ಗೆ ಜೊತೆಯಾದ ಜಾನಿ ಬೈರ್ ಸ್ಟೋ ಮತ್ತು ಒಲ್ಲಿ ಪೋಪ್ 89 ರನ್‌ಗಳ ಜತೆಯಾಟವನ್ನಾಡಿ ಇಂಗ್ಲೆಂಡ್ ತಂಡಕ್ಕೆ ಆಸರೆಯಾದರು. ಜಾನಿ ಬೈರ್ ಸ್ಟೋ 37 ರನ್‌ಗಳಿಗೆ ವಿಕೆಟ್ ಒಪ್ಪಿಸಿದರೆ ಒಲ್ಲಿ ಪೋಪ್ 81 ರನ್, ಕ್ರಿಸ್ ವೋಕ್ಸ್ 50 ರನ್ ಗಳಿಸಿ ಇಂಗ್ಲೆಂಡ್ 290 ರನ್ ಮುಟ್ಟುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಈ ಮೂಲಕ ಇಂಗ್ಲೆಂಡ್ ಮೊದಲನೇ ಇನ್ನಿಂಗ್ಸ್‌ನಲ್ಲಿ 99 ರನ್‌ಗಳ ಮುನ್ನಡೆಯನ್ನು ಸಾಧಿಸಿತು.

ಭಾರತ vs ಇಂಗ್ಲೆಂಡ್: ವಿರೇಂದ್ರ ಸೆಹ್ವಾಗ್ ದಾಖಲೆ ಮುರಿದ ಶಾರ್ದೂಲ್ ಠಾಕೂರ್ಭಾರತ vs ಇಂಗ್ಲೆಂಡ್: ವಿರೇಂದ್ರ ಸೆಹ್ವಾಗ್ ದಾಖಲೆ ಮುರಿದ ಶಾರ್ದೂಲ್ ಠಾಕೂರ್

ನಂತರ ಎರಡನೇ ದಿನದಲ್ಲಿಯೇ ತನ್ನ ದ್ವಿತೀಯ ಇನ್ನಿಂಗ್ಸ್‌ ಬ್ಯಾಟಿಂಗ್ ಆರಂಭಿಸಿದ ಟೀಮ್ ಇಂಡಿಯಾ ದಿನದಾಟದಂತ್ಯಕ್ಕೆ ಯಾವುದೇ ವಿಕೆಟ್ ನಷ್ಟವಿಲ್ಲದೇ 43 ರನ್ ಗಳಿಸಿ 56 ರನ್‌ಗಳ ಹಿನ್ನಡೆಯನ್ನು ಅನುಭವಿಸಿದೆ. ಭಾರತದ ಆರಂಭಿಕ ಆಟಗಾರರಾದ ಕೆ ಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಅಜೇಯರಾಗಿ ಉಳಿದಿದ್ದು ಸೆಪ್ಟೆಂಬರ್ 4ರ ಶನಿವಾರದಂದು ಆರಂಭವಾಗಲಿರುವ ಮೂರನೇ ದಿನದಾಟವನ್ನು ಆರಂಭಿಸಲಿದ್ದಾರೆ. ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ ಒತ್ತಡ ಹೇರಿ ಪಂದ್ಯದ ಮೇಲೆ ಹಿಡಿತವನ್ನು ಸಾಧಿಸಬೇಕೆಂದರೆ ಈ ದಿನದ ಪೂರ್ತಿ ಬ್ಯಾಟಿಂಗ್ ನಡೆಸಿ ಹೆಚ್ಚಿನ ವಿಕೆಟ್ ಕಳೆದುಕೊಳ್ಳದೆ ದೊಡ್ಡ ಮೊತ್ತವನ್ನು ಕಲೆ ಹಾಕಬೇಕಿದೆ. ಒಂದುವೇಳೆ ಟೀಮ್ ಇಂಡಿಯಾ ವೇಗವಾಗಿ ವಿಕೆಟ್ ಕಳೆದುಕೊಂಡು ಅಲ್ಪ ಮೊತ್ತಕ್ಕೆ ಕುಸಿದರೆ ಪಂದ್ಯದಲ್ಲಿ ಸೋಲು ಕಾಣಬೇಕಾಗುತ್ತದೆ. ಅತ್ತ ಮೊದಲನೇ ಇನ್ನಿಂಗ್ಸ್‌ನಲ್ಲಿ 99 ರನ್ ಮುನ್ನಡೆಯನ್ನು ಸಾಧಿಸಿ ಉತ್ತಮ ಹಂತದಲ್ಲಿರುವ ಇಂಗ್ಲೆಂಡ್ ಯಾವುದೇ ವಿಕೆಟ್ ಕಳೆದುಕೊಳ್ಳದೇ ಟೀಮ್ ಇಂಡಿಯಾವನ್ನು ಮೂರನೇ ದಿನ ಒತ್ತಡಕ್ಕೆ ತಳ್ಳಬೇಕೆಂದರೆ ವೇಗವಾಗಿ ವಿಕೆಟ್ ಪಡೆದುಕೊಳ್ಳುವುದೊಂದೇ ದಾರಿಯಾಗಿದೆ..

ನಾಲ್ಕನೇ ಟೆಸ್ಟ್ ಪಂದ್ಯದ ಮೂರನೇ ದಿನದ ಹವಾಮಾನ ವರದಿ

ಭಾರತ ಮತ್ತು ಇಂಗ್ಲೆಂಡ್ ನಡುವೆ ಲಂಡನ್ ನಗರದ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ಮೂರನೇ ದಿನದ ಹವಾಮಾನ ವರದಿಯ ಪ್ರಕಾರ ದಿನದ ಬಹುತೇಕ ಸಮಯದವರೆಗೆ ಮೋಡ ಕವಿದ ವಾತಾವರಣವಿರಲಿದೆ. ಉಷ್ಣಾಂಶವು ಕನಿಷ್ಠ 13° ಸೆಲ್ಸಿಯಸ್ ಮತ್ತು ಗರಿಷ್ಠ 20° ಸೆಲ್ಸಿಯಸ್ ಇರಲಿದ್ದು ಬೌಲರ್‌ಗಳಿಗೆ ಹೆಚ್ಚಿನ ಅನುಕೂಲ ಉಂಟಾಗಲಿದೆ. ದಿನದುದ್ದಕ್ಕೂ ಮೋಡ ಕವಿದ ವಾತಾವರಣವಿರಲಿದ್ದು ಮಳೆಯಾಗುವ ಸಂಭವ ತೀರಾ ಕಡಿಮೆ ಇದೆ.

ಮತ್ತೆ ಟೀಮ್ ಇಂಡಿಯಾ ಸೇರಿ ಎಂದು ಧೋನಿ ಮನವೊಲಿಸಲು ಮುಂದಾದ ರವಿಶಾಸ್ತ್ರಿಗೆ ಸಿಕ್ಕ ಉತ್ತರವಿದು!ಮತ್ತೆ ಟೀಮ್ ಇಂಡಿಯಾ ಸೇರಿ ಎಂದು ಧೋನಿ ಮನವೊಲಿಸಲು ಮುಂದಾದ ರವಿಶಾಸ್ತ್ರಿಗೆ ಸಿಕ್ಕ ಉತ್ತರವಿದು!

ನೇರ ಪ್ರಸಾರ:

ಟೆಸ್ಟ್ ಮ್ಯಾಚ್ ನಡುವೆ ಕ್ಲಿಕ್ ಮಾಡಿದ ಫೋಟೋ ವೈರಲ್! | Oneindia Kannada

ಭಾರತ ಮತ್ತು ಇಂಗ್ಲೆಂಡ್ ನಡುವೆ ಓವಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್ ಪಂದ್ಯವನ್ನು ಸೋನಿ ಸಿಕ್ಸ್ ಚಾನೆಲ್‌ನಲ್ಲಿ ವೀಕ್ಷಿಸಬಹುದಾಗಿದೆ ಮತ್ತು ಸೋನಿ ಲಿವ್ ಅಪ್ಲಿಕೇಶನ್‌ನಲ್ಲಿಯೂ ಸಹ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದಾಗಿದೆ.

ಐಸಿಸಿ ಟಿ20 ವಿಶ್ವಕಪ್ 2021 ಊಹಿಸು
Match 15 - October 24 2021, 03:30 PM
ಶ್ರೀಲಂಕಾ
ಬಾಂಗ್ಲಾದೇಶ್
Predict Now

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Saturday, September 4, 2021, 12:58 [IST]
Other articles published on Sep 4, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X