
ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ದಿನಗಣನೆ ಆರಂಭವಾಗಿದ್ದು ಎರಡು ತಂಡಗಳ ಆಟಗಾರರು ಕೂಡ ಕಠಿಣ ತರಬೇತಿಯನ್ನು ನಡೆಸುತ್ತಿದ್ದಾರೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಫಿನಿಷರ್ ಜವಾಬ್ಧಾರಿಯ ಜೊತೆಗೆ ಮತ್ತೆ ಬೌಲಿಂಗ್ ಮೂಲಕವೂ ಕಮಾಲ್ ಮಾಡಲು ಸಜ್ಜಾಗಿದ್ದಾರೆ.
ಬೆನ್ನು ನೋವಿನ ಶಸ್ತ್ರಚಿಕಿತ್ಸೆಯ ನಂತರ ಹಾರ್ದಿಕ್ ಪಾಂಡ್ಯ ಸಂಪೂರ್ಣ ಚೇತರಿಸಿಕೊಂಡಿದ್ದರೂ ಬೌಲಿಂಗ್‌ನಿಂದ ಅವರು ದೂರವಿದ್ದರೂ. ಕಳೆದ ಐಪಿಎಲ್‌ನಲ್ಲೂ ಪಾಂಡ್ಯ ಬೌಲಿಂಗ್ ದಾಳಿ ನಡೆಸಿಲಿಲ್ಲ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಪಾಂಡ್ಯ ಬೌಲಿಂಗ್ ನಡೆಸಿದ್ದರಾದರೂ ಬಳಿಕ ಸಾಹಸಕ್ಕೆ ಮುಂದಾಗಿರಲಿಲ್ಲ.
ಆದರೆ ಈಗ ಹಾರ್ದಿಕ್ ಪಾಂಡ್ಯ ಪೂರ್ಣ ಪ್ರಮಾಣದಲ್ಲಿ ಬೌಲಿಂಗ್ ದಾಳಿಯನ್ನು ನಡೆಸಲು ಸಿದ್ಧತೆಯನ್ನು ನಡೆಸುತ್ತಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೂ ಮುನ್ನ ಅವರು ನೆಟ್‌ನಲ್ಲಿ ಬೌಲಿಂಗ್ ಅಭ್ಯಾಸವನ್ನೂ ನಡೆಸುತ್ತಿದ್ದಾರೆ.
ಹಾರ್ದಿಕ್ ಪಾಂಡ್ಯ ಟಿ20 ಸರಣಿಗೆ ಸಜ್ಜಾಗುತ್ತಿರುವ ವಿಡಿಯೋವನ್ನು ಟ್ವಿಟ್ಟರ್ ಖಾತೆಯಲ್ಲ ಹಂಚಿಕೊಂಡಿದ್ದಾರೆ. ಇದರಲ್ಲಿ ಬ್ಯಾಟಿಂಗ್ ಜೊತೆಗೆ ಬೌಲಿಂಗ್ ಅಭ್ಯಾಸವನ್ನೂ ಕೂಡ ಹಾರ್ದಿಕ್ ಪಾಂಡ್ಯ ನಡೆಸುತ್ತಿದ್ದಾರೆ. 12ನೇ ತಾರೀಕಿನಂದು ನಡೆಯುವ ಪಂದ್ಯಕ್ಕೆ ಕಾಯಲು ಸಾಧ್ಯವಾಗುತ್ತಿಲ್ಲ ಎಂದು ಈ ವಿಡಿಯೋ ಜೊತೆಗೆ ಹಾರ್ದಿಕ್ ಪಾಂಡ್ಯ ಬರೆದುಕೊಂಡಿದ್ದಾರೆ.
Preparation done ✅🇮🇳
— hardik pandya (@hardikpandya7) March 9, 2021
Can’t wait to get on the field on 12th 🌪 pic.twitter.com/Nyr6Bys2EF
ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನು 3-1 ಅಂತರದಿಂದ ವಶಪಡಿಸಿಕೊಂಡ ನಂತರ ಈಗ ಚುಟುಕು ಸರಣಿಯತ್ತ ಟೀಮ್ ಇಂಡಿಯಾ ಚಿತ್ತ ನೆಟ್ಟಿದೆ. ಮಾರ್ಚ್ 12ರಿಂದ ಈ ಸರಣಿ ಆರಂಭವಾಗಲಿದ್ದು ಸಂಪೂರ್ಣ ಸಾಮರ್ಥ್ಯದೊಂದಿಗೆ ಭಾರತ ಹಾಅಗೂ ಇಂಗ್ಲೆಂಡ್ ತಂಡಗಳು ಕಣಕ್ಕಿಳಿಯಲಿದೆ.