
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಸೋಲು ಕಂಡ ಬಳಿಕ ಮತ್ತೆ ಟೀಮ್ ಇಂಡಿಯಾ ನಾಯಕತ್ವದ ಬಗ್ಗೆ ಚರ್ಚೆಗಳು ಕೂಡ ಮುಂದುವರಿದಿದೆ. ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ಕಳೆದ ನಾಲ್ಕು ಪಂದ್ಯಗಳಲ್ಲಿ ನಾಲ್ಕರಲ್ಲೂ ಸೋಲು ಕಂಡಿರುವುದರಿಂದ ವರಾಟ್ ಕೊಹ್ಲಿಯನ್ನು ನಾಯಕನಾಗಿ ಮುಂದುವರಿಯಬೇಕಾ ಎಂಬುದು ಚರ್ಚೆಯ ಮುಖ್ಯ ವಸ್ತುವಾಗಿದೆ. ಈ ಬಗ್ಗೆ ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ನಾಯಕ ಕೆವಿನ್ ಪೀಟರ್ಸನ್ ಪ್ರತಿಕ್ರಿಯಿಸಿದ್ದಾರೆ.
"ಖಂಡಿತಾವಾಗಿಯೂ ಬದಲಾವಣೆಯನ್ನು ಬಯಸುತ್ತಿಲ್ಲ. ಆದರೆ ಟೀಮ್ ಇಂಡಿಯಾದ ಟೆಸ್ಟ್ ನಾಯಕತ್ವ ಬದಲಾವಣೆಯ ಚರ್ಚೆಯಿಂದ ತಪ್ಪಿಸಿಕೊಳ್ಳುವುದು ಅಸಾಧ್ಯ. ವಿರಾಟ್ ಕೊಹ್ಲಿ ಈಗ ಸತತ ನಾಲ್ಕು ಪಂದ್ಯಗಳನ್ನು ಸೋತಿದ್ದಾರೆ ಹಾಗೂ ಅಜಿಂಕ್ಯ ಎಹಾನೆ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯನ್ನು ನಾಯಕನಾಗಿ ಗೆಲ್ಲಿಸಿಕೊಂಡು ಬಂದಿದ್ದಾರೆ" ಎಂದು 'ಬೆಟ್‌ವೇ'ಯ ಬ್ಲಾಗ್‌ಗೆ ಬರೆದ ಅಂಕಣವೊಂದರಲ್ಲಿ ಅವರು ಹೇಳಿಕೊಂಡಿದ್ದಾರೆ
ವಿರಾಟ್ ಕೊಹ್ಲಿ ನಾಯಕನಾಗಿ ನ್ಯೂಜಿಲೆಂಡ್‌ನಲ್ಲಿ ಕಳೆದ ವರ್ಷಾರಂಭದಲ್ಲಿ ನಡೆದ ಟೆಸ್ಟ್ ಸರಣಿಯ ಎರಡು ಪಂದ್ಯಗಳಲ್ಲಿ ಸೋಲು ಕಂಡಿದ್ದರು. ಆಸ್ಟ್ರೇಲಿಯಾದ ಅಡಿಲೇಡ್‌ನಲ್ಲಿ ನಡೆಸ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲೂ ಭಾರತ ಕೊಹ್ಲಿ ನಾಯಕತ್ವದಲ್ಲಿ ಮುಗ್ಗಿಸಿತ್ತು. ಈಗ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲೂ ಭಾರತ ಸೋಲು ಕಂಡಿದೆ.
"ಸಾಮಾಜಿಕ ಜಾಲತಾಣದಲ್ಲಿ, ಪ್ರತಿ ರೋಡಿಯೋ ಸ್ಟೇಶನ್‌ಗಳಲ್ಲಿ, ಪ್ರತಿ ಟಿವಿಗಳಲ್ಲಿ ಮತ್ತು ಪ್ರತಿಯೊಂದು ನ್ಯೂಸ್ ಚಾನೆಲ್‌ಗಳಲ್ಲಿಯೂ ಏನಾಗನೇಕಿದೆ ಎಂಬುದರ ಕುರಿತು ಗಂಭೀರ ಚರ್ಚೆಗಳು ನಡೆಯುತ್ತಿದೆ. ಭಾರತ ತಂಡವನ್ನು ಮುನ್ನಡೆಸುವುದು ಸುಲಭವಿಲ್ಲ" ಎಂದು ಕೆವಿನ್ ಪೀಟರ್‌ಸನ್ ಅಭಿಪ್ರಾಯಪಟ್ಟಿದ್ದಾರೆ.
"ಈ ಸಂಗತಿಗಳು ವಿರಾಟ್ ಕೊಹ್ಲಿಗೆ ಕಾರ್ಯಭಂಗ ಮಾಡುವುದರಿಂದ ಇದು ಖಂಡಿತಾ ಬೇಕಾಗಿಲ್ಲ. ಆದರೆ ಎರಡನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ತಂಡ ಗೆಲುವನ್ನು ಸಾಧಿಸಿದರೆ ಈ ಚರ್ಚೆ ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗಬಹುದು" ಎಂದು ಪೀಟರ್‌ಸನ್ ಹೇಳಿದ್ದಾರೆ.