ಭಾರತ vs ಇಂಗ್ಲೆಂಡ್: ಯಾವ ತಂಡ ಸರಣಿ ಗೆಲ್ಲಲಿದೆ ಎಂದು ಭವಿಷ್ಯ ನುಡಿದ ಹರ್ಭಜನ್ ಸಿಂಗ್

ಕ್ರಿಕೆಟ್ ಜಗತ್ತಿನಲ್ಲಿ ಸದ್ಯ ಸಖತ್ ಸದ್ದು ಮಾಡುತ್ತಿರುವ ವಿಷಯವೆಂದರೆ ಅದು ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿ. ಹೌದು ಭಾರತ ಇಂಗ್ಲೆಂಡ್ ಪ್ರವಾಸವನ್ನು ಕೈಗೊಂಡು ನ್ಯೂಜಿಲೆಂಡ್ ವಿರುದ್ಧದ ಮೊದಲನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದಲ್ಲಿ ಸೋತಿತ್ತು. ಈ ಪಂದ್ಯ ಮುಗಿದ ಬಳಿಕ ಇಂಗ್ಲೆಂಡ್‌ನಲ್ಲಿಯೇ ಉಳಿದುಕೊಂಡ ಟೀಮ್ ಇಂಡಿಯಾ ಇಂಗ್ಲೆಂಡ್ ತಂಡದ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಗೆ ಸಜ್ಜಾಗಿದೆ.
ಆಗಸ್ಟ್ 4ರಿಂದ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲನೇ ಪಂದ್ಯ ನಾಟಿಂಗ್‍ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆಯಲಿದ್ದು ಈ ಪಂದ್ಯದ ಕುರಿತು ಕ್ರೀಡಾಭಿಮಾನಿಗಳಲ್ಲಿ ದೊಡ್ಡ ಮಟ್ಟದ ನಿರೀಕ್ಷೆ ಮತ್ತು ಕುತೂಹಲಗಳು ಹುಟ್ಟುಕೊಂಡಿವೆ. ಇಂಗ್ಲೆಂಡ್ ಪ್ರವಾಸವನ್ನು ಕೈಗೊಂಡಿರುವ ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಜಯ ಸಾಧಿಸಿ ಟ್ರೋಫಿಯನ್ನು ತನ್ನದಾಗಿಸಿಕೊಳ್ಳಲಿದೆ ಎಂದು ಕೆಲವರು ಹೇಳುತ್ತಿದ್ದರೆ ಮತ್ತೊಂದಿಷ್ಟು ಜನ ನ್ಯೂಜಿಲೆಂಡ್ ವಿರುದ್ಧ ಸೋತ ಹಾಗೆ ಇಂಗ್ಲೆಂಡ್ ವಿರುದ್ಧವೂ ಟೀಂ ಇಂಡಿಯಾ ಇಂಗ್ಲೆಂಡ್ ನೆಲದಲ್ಲಿ ಸೋಲನುಭವಿಸಲಿದೆ ಎನ್ನುತ್ತಿದ್ದಾರೆ.
ಈ ಕುರಿತು ಇದೀಗ ಭಾರತದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಕೂಡ ಮಾತನಾಡಿದ್ದು ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಯಾವ ತಂಡ ಕೈವಶ ಮಾಡಿಕೊಳ್ಳಲಿದೆ ಎಂಬುದರ ಕುರಿತು ಈ ಕೆಳಕಂಡಂತೆ ಭವಿಷ್ಯವನ್ನು ನುಡಿದಿದ್ದಾರೆ.

ಖಚಿತವಾಗಿಯೂ ಭಾರತ ತಂಡ ಗೆಲುವು ಸಾಧಿಸಲಿದೆ
ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಕುರಿತು ಮಾತನಾಡಿರುವ ಹರ್ಭಜನ್ ಸಿಂಗ್ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ ಸರಣಿ ಗೆಲುವನ್ನು ಸಾಧಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ಕಳಪೆ ಪ್ರದರ್ಶನ ನೀಡಿದ್ದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಗೆಲ್ಲುವುದರ ಮೂಲಕ ಗೆಲುವಿನ ಹಾದಿಗೆ ಮರಳಲಿದೆ ಎಂದು ಹರ್ಭಜನ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡ 2-3 ಪಂದ್ಯಗಳಲ್ಲಿ ಜಯ ಸಾಧಿಸಲಿದೆ ಮತ್ತು ಒಂದು ಪಂದ್ಯ ಡ್ರಾ ಆಗಲಿದೆ ಎಂದು ಹರ್ಭಜನ್ ಸಿಂಗ್ ಭವಿಷ್ಯ ನುಡಿದಿದ್ದಾರೆ.

ಇಂಗ್ಲೆಂಡ್ ಒತ್ತಡಕ್ಕೆ ಸಿಲುಕುವುದು ಖಚಿತ
ಇನ್ನೂ ಮುಂದುವರಿದು ಮಾತನಾಡಿರುವ ಹರ್ಭಜನ್ ಸಿಂಗ್ ಇಂಗ್ಲೆಂಡ್ ತಂಡದ ಬಗ್ಗೆಯೂ ಕೂಡ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಇಂಗ್ಲೆಂಡ್ ತಂಡದ ಪ್ರಮುಖ ಆಲ್‌ರೌಂಡರ್ ಆಟಗಾರ ಬೆನ್ ಸ್ಟೋಕ್ಸ್ ಭಾರತದ ವಿರುದ್ಧದ ಸರಣಿಯಲ್ಲಿ ಭಾಗವಹಿಸುತ್ತಿಲ್ಲ, ಈ ಕಾರಣದಿಂದಾಗಿ ಖಚಿತವಾಗಿಯೂ ಇಂಗ್ಲೆಂಡ್ ತಂಡ ಒತ್ತಡಕ್ಕೆ ಸಿಲುಕಲಿದೆ ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ. ಬೆನ್ ಸ್ಟೋಕ್ಸ್ ಇಲ್ಲದ ಇಂಗ್ಲೆಂಡ್ ತಂಡದ ವಿರುದ್ಧ ಟೀಮ್ ಇಂಡಿಯಾ ಸುಲಭವಾಗಿ ಹಿಡಿತ ಸಾಧಿಸಲಿದೆ ಎಂದು ಹರ್ಭಜನ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

ಕೊಹ್ಲಿ, ರೋಹಿತ್ ಮತ್ತು ಪೂಜಾರ ಆಡಲೇಬೇಕು
ಟೀಮ್ ಇಂಡಿಯಾದ ಪರ ಪ್ರಮುಖವಾಗಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮ ಮತ್ತು ಚೇತೇಶ್ವರ್ ಪೂಜಾರ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಲೇ ಬೇಕಾಗಿದೆ. ಈ ಮೂವರು ಆಟಗಾರರು ಉತ್ತಮ ಇನ್ನಿಂಗ್ಸ್ ನಿರ್ಮಿಸಿದರೆ ಇಂಗ್ಲೆಂಡ್ ಬ್ಯಾಟ್ಸ್‌ಮನ್‌ಗಳನ್ನು ಭಾರತ ತಂಡದ ಬೌಲರ್‌ಗಳು ನೋಡಿಕೊಳ್ಳಲಿದ್ದಾರೆ ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications