ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್: ನಿರ್ಣಾಯಕ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾ ಸಂಭಾವ್ಯ ಆಡುವ ಬಳಗ

India Vs England: india Probable XI for final match of the test series against England in Ahmedabad

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿ ಅಂತಿಮ ಹಂತಕ್ಕೆ ಬಂದು ತಲುಪಿದೆ. ಮೂರು ಪಂದ್ಯಗಳು ಮುಕ್ತಾಯವಾಗಿದ್ದು ಅಂತಿಮ ಪಂದ್ಯ ಮಾತ್ರವೇ ಬಾಕಿಯಿದೆ. ಮಾರ್ಚ್ 4ರಿಂದ ನಾಲ್ಕನೇ ಪಂದ್ಯ ಆರಂಭವಾಗಲಿದ್ದು ಭಾರತಕ್ಕೆ ಸರಣಿ ಗೆಲ್ಲುವುದರ ಜೊತೆಗೆ ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ಸ್ಥಾನ ಪಡೆಯಲು ಕನಿಷ್ಟ ಡ್ರಾ ಮಾಡಿಕೊಳ್ಳುವ ಅಗತ್ಯವಿದೆ. ಮತ್ತೊಂದೆಡೆ ಇಂಗ್ಲೆಂಡ್ ಈಗಾಗಲೇ WTC ಫೈನಲ್ ಸ್ಪರ್ಧೆಯಿಂದ ಹೊರಬಿದ್ದಿದ್ದು ಸರಣಿಯನ್ನು ಡ್ರಾ ಮಾಡಿಕೊಳ್ಳಲು ಪಂದ್ಯವನ್ನು ಗೆಲ್ಲಬೇಕಾದ ಅನಿವಾರ್ಯತೆಯಲ್ಲಿದೆ.

ಈ ಸರಣಿಯಲ್ಲಿ ಟೀಮ್ ಇಂಡಿಯಾ ಸದ್ಯ 2-1 ಅಂತರದಿಂದ ಮುನ್ನಡೆಯನ್ನು ಸಾಧಿಸಿದೆ. ಭಾರತ ಅಂತಿಮ ಪಂದ್ಯವನ್ನು ಗೆದ್ದರೆ 3-1 ಅಂತರದಿಂದ ಸರಣಿಯನ್ನು ವಶಕ್ಕೆ ಪಡೆಯುವಂತಾಗಲಿದೆ. ಆದರೆ ಈ ಅಂತಿಮ ಪಂದ್ಯದಲ್ಲಿ ಭಾರತದ ಆಡುವ ಬಳಗ ಹೇಗಿರಲಿದೆ ಎಂಬುದು ಕುತೂಹಲವನ್ನು ಮೂಡಿಸಿದೆ.

ಮೈದಾನದ ಹೊರಗೊಂದು ವಿಶೇಷ ದಾಖಲೆ ಬರೆದ ವಿರಾಟ್ ಕೊಹ್ಲಿಮೈದಾನದ ಹೊರಗೊಂದು ವಿಶೇಷ ದಾಖಲೆ ಬರೆದ ವಿರಾಟ್ ಕೊಹ್ಲಿ

ಭಾರತ ಈ ಪಂದ್ಯಕ್ಕೆ ಜಸ್ಪ್ರೀತ್ ಬೂಮ್ರಾ ಅವರ ಸೇವೆಯಿಂದ ವಂಚಿತವಾಗಲಿದೆ. ವೈಯಕ್ತಿಕ ಕಾರಣಗಳಿಂದ ಅವರು ತಂಡದಿಂದ ಬಿಡುಗಡೆಗೊಂಡಿದ್ದಾರೆ. ಉಳಿದಂತೆ ಸಂಭಾವ್ಯ ಆಡುವ ಬಳಗ ಹೇಗಿರಲಿದೆ ಎಂಬುದನ್ನು ಮುಂದೆ ನೋಡೋಣ

ರೋಹಿತ್ ಶರ್ಮಾ

ರೋಹಿತ್ ಶರ್ಮಾ

ಸೀಮಿತ ಓವರ್‌ಗಳಲ್ಲಿ ಟೀಮ್ ಇಂಡಿಯಾ ಉಪನಾಯಕನಾಗಿರುವ ರೋಹಿತ್ ಶರ್ಮಾ ಆಸ್ಟ್ರೇಲಿಯಾದಲ್ಲಿ ಆಡಿದ ಎರಡು ಪಂದ್ಯಗಳಲ್ಲಿ ಹೇಳಿಕೊಳ್ಳುವಂತಾ ಪ್ರದರ್ಶನ ನೀಡಿರಲಿಲ್ಲ. ಆದರೆ ತವರಿನಲ್ಲಿ ನಡೆಯುತ್ತಿರುವ ಸರಣಿಯಲ್ಲಿ ಅದ್ಭುತವಾಗಿ ಪ್ರದರ್ಶನವನ್ನು ನೀಡುತ್ತಿದ್ದಾರೆ. ಚೆನ್ನೈನಲ್ಲಿ ನಡೆದ ಎರಡನೇ ಟೆಸ್ಟ್‌ನಲ್ಲಿ 161 ರನ್ ಗಳಿಸಿದ್ದ ರೋಹಿತ್ ಅಹ್ಮದಾಬಾದ್‌ನ ಪಂದ್ಯದಲ್ಲಿ ಮಹತ್ವದ 66 ರನ್‌ಗಳ ಕೊಡುಗೆಯನ್ನು ನೀಡಿದ್ದರು. ಈಗ ಮತ್ತೊಂದು ಪಂದ್ಯದಲ್ಲಿ ಮಹತ್ವದ ಕೊಡುಗೆಯನ್ನು ನೀಡಲು ಮುಂಬೈ ಬ್ಯಾಟ್ಸ್‌ಮನ್ ಸಿದ್ಧರಾಗಿದ್ದಾರೆ.

ಶುಬ್ಮನ್ ಗಿಲ್

ಶುಬ್ಮನ್ ಗಿಲ್

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದ ಶುಬ್ಮನ್ ಗಿಲ್ ಸಹಜವೆಂಬಂತೆ ಇಂಗ್ಲೆಂಡ್ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದರು. ಆದರೆ ಗಿಲ್ ತವರಿನಲ್ಲಿ ನಡೆದ ಪಂದ್ಯದಲ್ಲಿ ಮಿಂಚಲು ವಿಫಲರಾಗಿದ್ದಾರೆ. ಮೊದಲ ಟೆಸ್ಟ್‌ನ ಎರಡನೇ ಇನ್ನಿಂಗ್ಸ್‌ನಲ್ಲಿ ಅರ್ಧ ಶತಕವನ್ನು ಹೊರತುಪಡಿಸಿ ಗಿಲ್ ಬ್ಯಾಟ್‌ನಿಂದ ಉತ್ತಮ ಪ್ರದರ್ಶನ ಹೊರ ಬಂದಿಲ್ಲ. ಆದರೆ ಅಂತಿಮ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸುವ ವಿಶ್ವಾಸವಿದೆ

ಚೇತೇಶ್ವರ್ ಪೂಜಾರ

ಚೇತೇಶ್ವರ್ ಪೂಜಾರ

ಭಾರತದ ಪ್ರಮುಖ ಬ್ಯಾಟ್ಸ್‌ಮನ್ ಆಗಿರುವ ಚೇತೇಶ್ವರ್ ಪೂಜಾರ ಕೂಡ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಉತ್ತಮ ಕೊಡುಗೆಯನ್ನು ನೀಡುವಲ್ಲಿ ವಿಫಲರಾಗಿದ್ದಾರೆ. ಗಿಲ್ ರೀತಿಯಲ್ಲೇ ಕೇವಲ ಒಂದು ಅರ್ಧ ಶತಕ ಮಾತ್ರವೇ ಪೂಜಾರ ಬ್ಯಾಟ್‌ನಿಂದ ಸಿಡಿದಿದೆ. ಆದರೆ ಅಂತಿಮ ಪಂದ್ಯದಲ್ಲಿ ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವುದರಲ್ಲಿ ಯಾವುದೇ ಅನುಮಾನವಿಲ್ಲ.

ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ

ನಾಯಕ ವಿರಾಟ್ ಕೊಹ್ಲಿ ಕೂಡ ಈ ಬಾರಿಯ ಇಂಗ್ಲೆಂಡ್ ಸರಣಿಯಲ್ಲಿ ಮಿಂಚಿಲ್ಲ. ಸುದೀರ್ಘ ಕಾಲದಿಂದ ಶತಕವನ್ನು ಗಳಿಸಲು ವಿರಾಟ್ ಕೊಹ್ಲಿ ಪರದಾಡುತ್ತಿದ್ದಾರೆ. ಈ ಶತಕದ ಬರ ಇಂಗ್ಲೆಂಡ್ ವಿರುದ್ಧದ ಸರಣಿಯ ಅಂತಿಮ ಪಂದ್ಯದಲ್ಲಿ ನೀಗಬಹುದು ಎಂಬುದು ಅಭಿಮಾನಿಗಳ ನಿರೀಕ್ಷೆಯಾಗಿದೆ.

ಅಜಿಂಕ್ಯ ರಹಾನೆ

ಅಜಿಂಕ್ಯ ರಹಾನೆ

ಟೀಮ್ ಇಂಡಿಯಾ ಟೆಸ್ಟ್ ತಂಡದ ಉಪನಾಯಕ ಅಜಿಂಕ್ಯ ರಹಾನೆ ಕೂಡ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ತಮ್ಮ ಸಾಮರ್ಥ್ಯಕ್ಕೆ ತಕ್ಕ ಪ್ರದರ್ಶನ ನೀಡಲು ವಿಫಲರಾಗಿದ್ದಾರೆ. ಆಡಿದ ಐದು ಇನ್ನಿಂಗ್ಸ್‌ಗಳಲ್ಲಿ ರಹಾನೆ ಒಂದು ಅರ್ಧ ಶತಕವನ್ನು ಮಾತ್ರವೇ ಗಳಿಸಿದ್ದು ಅಂತಿಮ ಪಂದ್ಯದಲ್ಲಿ ಮಿಂಚುವ ಉತ್ಸಾಹದಲ್ಲಿದ್ದಾರೆ

ರಿಷಭ್ ಪಂತ್

ರಿಷಭ್ ಪಂತ್

ಕಳೆದ ಎರಡು ಪಂದ್ಯಗಳಲ್ಲಿ ರಿಷಭ್ ಪಂತ್ ವಿಕೆಟ್ ಕೀಪಿಂಗ್‌ನಲ್ಲಿ ಸಾಕಷ್ಟು ಸಕಾರಾತ್ಮಕ ಅಂಶಗಳು ಕಂಡಿದೆ. ಆದರೆ ಬ್ಯಾಟಿಂಗ್‌ನಲ್ಲಿ ಮತ್ತಷ್ಟು ಕೊಡುಗೆಯನನು ನಿರೀಕ್ಷಿಸಲಾಗುತ್ತಿದೆ.

ಆರ್ ಅಶ್ವಿನ್

ಆರ್ ಅಶ್ವಿನ್

ಎರಡನೇ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಆರ್ ಅಶ್ವಿನ್ ಶತಕವನ್ನು ಸಿಡಿಸಿದ್ದರು. ಬಳಿಕ ಎರಡನೇ ಟೆಸ್ಟ್‌ನಲ್ಲಿಯೂ ಆರ್ ಅಶ್ವಿನ್ ಅದ್ಭುತವಾಗಿ ಕೊಡುಗೆಯನ್ನು ನೀಡಿದ್ದಾರೆ. ಕಳೆದ ಪಂದ್ಯದಲ್ಲಿ ಆರ್ ಅಶ್ವಿನ್ 400 ವಿಕೆಟ್‌ಗಳ ಕ್ಲಬ್‌ಗೆ ಸೇರಿಕೊಂಡಿದ್ದಾರೆ.

ಅಕ್ಷರ್ ಪಟೇಲ್

ಅಕ್ಷರ್ ಪಟೇಲ್

ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಬೌಲಿಂಗ್‌ನಲ್ಲಿ ಅದ್ಭುತವಾದ ಯಶಸ್ಸು ಸಾಧಿಸಿದ ಆಟಗಾರ ಅಕ್ಷರ್ ಪಟೇಲ್. ಮೊದಲ ಪಂದ್ಯದಲ್ಲಿ ಐದು ವಿಕೆಟ್‌ಗಳ ಗೊಂಚಲು ಪಡೆದ ಅಕ್ಷರ್ ಎರಡನೇ ಪಂದ್ಯದಲ್ಲಿ 11 ವಿಕೆಟ್‌ಗಳನ್ನು ಕಬಳಿಸುವ ಮೂಲಕ 10 ವಿಕೆಟ್‌ಗಳ ಗೊಂಚಲನ್ನೂ ತನ್ನದಾಗಿಸಿಕೊಂಡಿದ್ದಾರೆ. ನಾಲ್ಕನೇ ಟೆಸ್ಟ್‌ನಲ್ಲಿ ಇವರು ಸ್ಥಾನವನ್ನು ಪಡೆಯುವುದು ಖಚಿತ.

ವಾಶಿಂಗ್ಟನ್ ಸುಂದರ್/ಕುಲ್‌ದೀಪ್ ಯಾದವ್

ವಾಶಿಂಗ್ಟನ್ ಸುಂದರ್/ಕುಲ್‌ದೀಪ್ ಯಾದವ್

ಅಂತಿಮ ಟೆಸ್ಟ್ ಪಂದ್ಯದಲ್ಲಿ ವಾಶಿಂಗ್ಟನ್ ಸುಂದರ್ ಹಾಗೂ ಕುಲ್ದೀಪ್ ಯಾದವ್ ಈ ಇಬ್ಬರಲ್ಲಿ ಯಾರು ಅವಕಾಶವನ್ನು ಪಡೆಯಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಮೂರನೇ ಟೆಸ್ಟ್ ಪಂದ್ಯದಲ್ಲಿ ಸುಂದರ್ ಆಡುವ ಬಳಗದಲ್ಲಿ ಕಾಣಿಸಿಕೊಂಡರಾದರೂ ಅವರಿಗೆ ಬೌಲಿಂಗ್ ಮಾಡಲು ಹೆಚ್ಚಿನ ಅವಕಾಶ ದೊರೆಯಲಿಲ್ಲ. ಕುಲ್ದೀಪ್ ಯಾದವ್ ಕೂಡ ಸರಣಿಯಲ್ಲಿ ಒಂದು ಅವಕಾಶವನ್ನು ಪಡೆದುಕೊಂಡಿದ್ದು ಹೆಚ್ಚಿನ ಅವಕಾಶ ಅವರಿಗೂ ದೊರೆತಿರಲಿಲ್ಲ. ಈ ಇಬ್ಬರಲ್ಲಿ ಅವಕಾಶ ಪಡೆಯುವವರು ಯಾರು ಎಂಬುದು ಕುತೂಹಲ ಮೂಡಿಸಿದೆ.

ಇಶಾಂತ್ ಶರ್ಮಾ

ಇಶಾಂತ್ ಶರ್ಮಾ

ಅನುಭವಿ ಇಶಾಂತ್ ಶರ್ಮಾ ಕಳೆದ ಪಂದ್ಯದಲ್ಲಿ ತಮ್ಮ 100 ಟೆಸ್ಟ್ ಪಂದ್ಯವನ್ನು ಆಡಿದ್ದರು. ಮೊಟೇರಾ ಪಿಚ್‌ನಲ್ಲಿ ಶೀಘ್ರವಾಗಿ ವಿಕೆಟ್ ಪಡೆಯುವ ಮೂಲಕ ತಂಡಕ್ಕೆ ಆರಂಭದಿಂದಲೇ ಮೇಲುಗೈ ನೀಡುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಅಂತಿಮ ಪಂದ್ಯದಲ್ಲಿ ಮತ್ತಷ್ಟು ವಿಕೆಟ್ ಕಬಳಿಸುವುದು ಇಶಾಂತ್ ಗುರಿಯಾಗಿದೆ.

ಉಮೇಶ್ ಯಾದವ್/ಮೊಹಮ್ಮದ್ ಸಿರಾಜ್

ಉಮೇಶ್ ಯಾದವ್/ಮೊಹಮ್ಮದ್ ಸಿರಾಜ್

ಟೀಮ್ ಇಂಡಿಯಾದ ವೇಗಿ ಜಸ್ಪ್ರೀತ್ ಬೂಮ್ರಾ ಅಂತಿಮ ಪಂದ್ಯಕ್ಕೂ ಮುನ್ನ ತಂಡದಿಂದ ವೈಯಕ್ತಿಕ ಕಾರಣಗಳನ್ನು ನೀಡಿ ಹೊರಗಿಳಿದಿದ್ದಾರೆ. ಹೀಗಾಗಿ ಅಂತಿಮ ಪಂದ್ಯದಲ್ಲಿ ಅವಕಾಶವನ್ನು ಪಡೆಯಲು ಉಮೇಶ್ ಯಾದವ್ ಹಾಗೂ ಮೊಹಮದ್ ಸಿರಾಜ್ ಮಧ್ಯೆ ಸ್ಪರ್ಧೆ ಏರ್ಪಟ್ಟಿದೆ. ಕಿರು ಅವಧಿಯಲ್ಲಿ ಸಿರಾಜ್ ಉತ್ತಮ ಪ್ರದರ್ಶನ ನೀಡುವ ಮೂಲಕ ಗಮನಸೆಳೆದಿದ್ದರೆ.

Story first published: Wednesday, March 3, 2021, 9:28 [IST]
Other articles published on Mar 3, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X