IND vs ENG 2ನೇ ಟಿ20: ಟಾಸ್ ಸೋತ ಭಾರತ ಮೊದಲು ಬ್ಯಾಟಿಂಗ್; ಆಡುವ 11ರ ಬಳಗ

3 ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ ಭಾರತ ಇಂದು (ಶನಿವಾರ, ಜುಲೈ 9) ಎಡ್ಜ್‌ಬಾಸ್ಟನ್‌ನಲ್ಲಿ 2ನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ಅನ್ನು ಎದುರಿಸಲಿದೆ.
ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್ ಸ್ಟೇಡಿಯಂನಲ್ಲಿ ಎರಡನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಟಾಸ್ ಗೆದ್ದಿದ್ದು, ಮೊದಲು ಬೌಲಿಂಗ್ ಆಯ್ದುಕೊಂಡರು. ಹೀಗಾಗಿ ಪ್ರವಾಸಿ ತಂಡ ಭಾರತ ಮೊದಲು ಬ್ಯಾಟಿಂಗ್ ಮಾಡಲಿದೆ.
ರೋಹಿತ್ ಶರ್ಮಾ ನೇತೃತ್ವದ ತಂಡವು ಬ್ಯಾಟ್‌ನೊಂದಿಗೆ ಹೆಚ್ಚಿನ ಆಕ್ರಮಣಕಾರಿ ವಿಧಾನವನ್ನು ಅಳವಡಿಸಿಕೊಳ್ಳುವುದರೊಂದಿಗೆ, ಮಲಾಹೈಡ್‌ನಲ್ಲಿ ಐರ್ಲೆಂಡ್ ವಿರುದ್ಧ ಶತಕ ಮತ್ತು ಸೌತಾಂಪ್ಟನ್‌ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಕೇವಲ 17 ಎಸೆತಗಳಲ್ಲಿ 33 ರನ್ ಗಳಿಸುವ ಮೂಲಕ ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಂಡ ದೀಪಕ್ ಹೂಡಾ ಅವರ ಜಾಗಕ್ಕೆ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬಂದಿದ್ದಾರೆ.
ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ಶನಿವಾರ ನಡೆಯಲಿರುವ ಸರಣಿಯ ಎರಡನೇ ಪಂದ್ಯ ಆತಿಥೇಯರ ವಿರುದ್ಧ ಸರಣಿ ಗೆಲುವಿನ ಮೇಲೆ ಕಣ್ಣಿಟ್ಟಿರುವ ಟೀಂ ಇಂಡಿಯಾಗೆ ಇದು ನಿರ್ಣಾಯಕ ಪಂದ್ಯವಾಗಿದೆ.
ಮೊದಲ ಪಂದ್ಯವನ್ನು ಭಾರತ 50 ರನ್‌ಗಳಿಂದ ಗೆದ್ದುಕೊಂಡಿತ್ತು. ಹಾರ್ದಿಕ್ ಪಾಂಡ್ಯ ಅವರ ಆಲ್‌ರೌಂಡ್ ಶೋ (51 ಆಫ್ 33 ಮತ್ತು 4/33) ನೀಡಿದರು. ಪ್ರವಾಸಿಗರು ಅತ್ಯಂತ ಸುಲಭವಾಗಿ ಪಂದ್ಯ ಗೆಲ್ಲಲು ಸಹಾಯ ಮಾಡಿದರು.
ಮೊದಲು ಬ್ಯಾಟಿಂಗ್ ಮಾಡಿದ ಭಾರತ 198/8 ಸ್ಕೋರ್ ಮಾಡಿತು ಮತ್ತು ಉತ್ತರವಾಗಿ ಇಂಗ್ಲೆಂಡ್ ಅನ್ನು 148 ರನ್‌ಗಳಿಗೆ ಆಲೌಟ್ ಮಾಡಿತು. ಆತಿಥೇಯರು ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗಗಳೆರಡರಲ್ಲೂ ಉತ್ತಮ ಪ್ರದರ್ಶನವನ್ನು ನಿರೀಕ್ಷಿಸುತ್ತಾರೆ.
ಎರಡು ತಂಡಗಳ ಆಡುವ 11ರ ಬಳಗ
ಭಾರತ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ರವೀಂದ್ರ ಜಡೇಜಾ, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಾಹಲ್
ಇಂಗ್ಲೆಂಡ್: ಜೇಸನ್ ರಾಯ್, ಜೋಸ್ ಬಟ್ಲರ್ (ನಾಯಕ/ವಿಕೆಟ್ ಕೀಪರ್), ಡೇವಿಡ್ ಮಲಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಸ್ಯಾಮ್ ಕುರಾನ್, ಡೇವಿಡ್ ವಿಲ್ಲಿ, ಕ್ರಿಸ್ ಜೋರ್ಡಾನ್, ರಿಚರ್ಡ್ ಗ್ಲೀಸನ್, ಮ್ಯಾಥ್ಯೂ ಪಾರ್ಕಿನ್ಸನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications