Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ಇಂಗ್ಲೆಂಡ್: ಕೋವಿಡ್‌ನಿಂದ ಚೇತರಿಸಿ ಇಂಗ್ಲೆಂಡ್‌ನಲ್ಲಿ ಭಾರತ ತಂಡವನ್ನು ಸೇರಿಕೊಂಡ ಅಶ್ವಿನ್

India vs England: Indian all-rounder R Ashwin joins Indian team before practice match

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ಮತ್ತೊಂದು ಸಂತಸದ ಸುದ್ದಿ ಲಭ್ಯವಾಗಿದೆ. ಕೊರೊನಾವೈರಸ್‌ನ ಕಾರಣದಿಂದಾಗಿ ನಿಗದಿತ ಸಮಯದಲ್ಲಿ ಇಂಗ್ಲೆಂಡ್‌ಗೆ ಪ್ರಯಾಣ ಬೆಳೆಸಲು ವಿಫಲವಾಗಿದ್ದ ಆರ್ ಅಶ್ವಿನ್ ಈಗ ಸಂಪೂರ್ಣ ಫಿಟ್ ಆಗಿದ್ದಾರೆ. ಮಾತ್ರವಲ್ಲದೆ ಈಗಾಗಲೇ ಇಂಗ್ಲೆಂಡ್‌ಗೆ ತಲುಪಿದ್ದು ಭಾರತ ತಂಡವನ್ನು ಸೇರಿಕೊಂಡಿದ್ದಾರೆ. ಭಾರತದ ಅಭ್ಯಾಸ ಪಂದ್ಯಕ್ಕೂ ಮುನ್ನ ಅಶ್ವಿನ್ ಭಾರತ ತಂಡವನ್ನು ಸೇರ್ಪಡೆಯಾಗಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯಕ್ಕಾಗಿ ವಿಮಾನ ಹತ್ತಲು ಸಜ್ಜಾಗಿದ್ದ ಆರ್ ಅಶ್ವಿನ್ ಕೋವಿಟ್ ಪಾಸಿಟಿವ್ ವರದಿ ಬಂದ ಕಾರಣ ಭಾರತದಲ್ಲಿಯೇ ಉಳಿಯುವಂತಾಗಿತ್ತು. ಆರ್ ಅಶ್ವಿನ್ ಈ ಸರಣಿಯ ಮೊದಲ ನಾಲ್ಕು ಟೆಸ್ಟ್ ಪಂದ್ಯಗಳು ಕಳೆದ ವರ್ಷ ಇಂಗ್ಲೆಂಡ್‌ನಲ್ಲಿ ನಡೆದಾಗ ಭಾರತ ತಂಡದ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆದುಕೊಂಡಿರಲಿಲ್ಲ. ಇದು ಸಾಕಷ್ಟ ಚರ್ಚೆಗೂ ಕಾರಣವಾಗಿತ್ತು.

ಲಂಕಾ ವಿರುದ್ಧದ ಸರಣಿಯಲ್ಲಿ ಮಿಂಚಿದ್ದ ಅಶ್ವಿನ್

ಲಂಕಾ ವಿರುದ್ಧದ ಸರಣಿಯಲ್ಲಿ ಮಿಂಚಿದ್ದ ಅಶ್ವಿನ್

ಕಳೆದ ಮಾರ್ಚ್‌ನಲ್ಲಿ ಬೆಂಗಳೂರಿನಲ್ಲಿ ನಡೆದ ಶ್ರೀಲಂಕಾ ತಂಡದ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಆರ್ ಅಶ್ವಿನ್ ಅದ್ಭುತ ಪ್ರದರ್ಶನ ನೀಡಿ ಮಿಂಚಿದ್ದಾರೆ. ಆ ಪಂದ್ಯದಲ್ಲಿ ಆರು ವಿಕೆಟ್‌ಗಳನ್ನು ಪಡೆದ ಅಶ್ವಿನ್ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ 100 ವಿಕೆಟ್‌ಗಳನ್ನು ಕಬಳಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಟೆಸ್ಟ್ ಮಾದರಿಯಲ್ಲಿ ಅಶ್ವಿನ್ ಭಾರತಕ್ಕೆ ಪ್ರಮುಖ ಅಸ್ತ್ರ

ಟೆಸ್ಟ್ ಮಾದರಿಯಲ್ಲಿ ಅಶ್ವಿನ್ ಭಾರತಕ್ಕೆ ಪ್ರಮುಖ ಅಸ್ತ್ರ

ಆರ್ ಅಶ್ವಿನ್ ಐಸಿಸಿ ಟೆಸ್ಟ್‌ ಶ್ರೇಯಾಂಕ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಆಲ್‌ರೌಂಡರ್. ಟೆಸ್ಟ್ ಮಾದರಿಯಲ್ಲಿ 450 ವಿಕೆಟ್‌ಗಳ ಮೈಲಿಗಲ್ಲು ತಲುಪಲು ಆರ್ ಅಶ್ವಿನ್‌ಗೆ ಇನ್ನು ಕೇವಲ 8 ವಿಕೆಟ್‌ಗಳ ಅಗತ್ಯವಿದ್ದರೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 700 ವಿಕೆಟ್‌ಗಳ ಮೈಲಿಗಲ್ಲು ತಲುಪಲು 46 ವಿಕೆಟ್‌ಗಳ ಅವಶ್ಯಕತೆಯಿದೆ. ಇನ್ನು ಟೆಸ್ಟ್ ಕ್ರಿಕೆಟ್‌ನಲ್ಲಿ ಬ್ಯಾಟಿಂಗ್‌ನಲ್ಲಿಯೂ ಮಿಂಚುತ್ತಿರುವ ಅಶ್ವಿನ್ 3000 ರನ್ ಪೂರೈಸಲು 69 ರನ್‌ಗಳ ಅಗತ್ಯವಿದೆ. ಈ ಮೂಲಕ ಆರ್ ಅಶ್ವಿನ್ ಟೆಸ್ಟ್ ಮಾದರಿಯಲ್ಲಿ ಭಾರತ ತಂಡದ ಪ್ರಮುಖ ಅಸ್ತ್ರ ಎನಿಸಿಕೊಂಡಿದ್ದಾರೆ.

ಅಭ್ಯಾಸ ಪಂದ್ಯದಲ್ಲಿ ವಿಫಲವಾದ ಪ್ರಮುಖರು

ಅಭ್ಯಾಸ ಪಂದ್ಯದಲ್ಲಿ ವಿಫಲವಾದ ಪ್ರಮುಖರು

ಇಂದಿನಿಂದ (ಜೂನ್ 23) ಭಾರತ ತಂಡ ಲೀಸೆಸ್ಟರ್‌ಶೈರ್ ವಿರುದ್ಧ ನಾಲ್ಕು ದಿನಗಳ ಅಭ್ಯಾಸ ಪಂದ್ಯದಲ್ಲಿ ಭಾಗಿಯಾಗಿದೆ. ಇದರಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಚೇತೇಶ್ವರ್ ಪೂಜಾರ, ರಿಷಭ್ ಪಂತ್, ಜಸ್ಪ್ರೀತ್ ಬುಮ್ರಾ ಮತ್ತು ಪ್ರಸಿದ್ಧ್ ಕೃಷ್ಣ ಲೀಸೆಸ್ಟರ್‌ಶೈರ್ ಪರವಾಗಿ ಆಡುತ್ತಿದ್ದಾರೆ. ಆದರೆ ಈ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ತಂಡದ ಪ್ರಮುಖ ದಾಂಡಿಗರು ಉತ್ತಮ ಪ್ರದರ್ಶನ ನೀಡಲು ವಿಫಲವಾಗಿದ್ದಾರೆ.

Rohit Sharma- ಫಾರ್ಮ್ ಕಳ್ಕೊಂಡು ಕಷ್ಟ ಪಡುತ್ತಿರುವ ಶರ್ಮಾ | *Cricket | Oneindia Kannada
ಟೆಸ್ಟ್ ಪಂದ್ಯವನ್ನಾಡುವ ಭಾರತದ ಸ್ಕ್ವಾಡ್ ಹೀಗಿದೆ

ಟೆಸ್ಟ್ ಪಂದ್ಯವನ್ನಾಡುವ ಭಾರತದ ಸ್ಕ್ವಾಡ್ ಹೀಗಿದೆ

ಟೀಮ್ ಇಂಡಿಯಾ ಸ್ಕ್ವಾಡ್: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ , ಶ್ರೀಕರ್ ಭಾರತ್ (ವಿಕೆಟ್ ಕೀಪರ್).

Story first published: Thursday, June 23, 2022, 17:39 [IST]
Other articles published on Jun 23, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+