ಬ್ಯಾಟಿಂಗ್‌ನಲ್ಲಿ ಮಿಂಚಿದ ನಾಯಕ: ಏಕದಿನ ಕ್ರಿಕೆಟ್‌ನಲ್ಲಿ ಭಾರತದ ಪರ ಹೊಸ ದಾಖಲೆ ಬರೆದ ರೋಹಿತ್

ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ ಭಾರತದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿ ಮಿಂಚಿದ್ದಾರೆ. ಈ ಮೂಲಕ ಇತ್ತೀಚೆಗೆ ಬ್ಯಾಟಿಂಗ್‌ನಲ್ಲಿ ಅನುಭವಿಸುತ್ತಿದ್ದ ವೈಫಲ್ಯಕ್ಕೆ ರೋಹಿತ್ ಬ್ಯಾಟ್‌ನಲ್ಲಿಯೇ ಉತ್ತರ ನೀಡಿದ್ದಾರೆ. ಈ ಸಂದರ್ಭದಲ್ಲಿ ರೋಹಿತ್ ಶರ್ಮಾ ಏಕದಿನ ಕ್ರಿಕೆಟ್‌ನಲ್ಲಿ ಮಹತ್ವದ ದಾಖಲೆಯೊಂದನ್ನು ಬರೆದಿದ್ದಾರೆ.
ರೋಹಿತ್ ಶರ್ಮಾ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಅಜೇಯ 76 ರನ್‌ಗಳ ಕೊಡುಗೆ ನೀಡಿದ್ದಾರೆ. ಈ ಪಂದ್ಯದಲ್ಲಿ ರೋಹಿತ್ ಒಟ್ಟು ಐದು ಸಿಕ್ಸರ್ ಸಿಡಿಸಿದ್ದು ಈ ಮೂಲಕ ಏಕದಿನ ಮಾದರಿಯಲ್ಲಿ 250 ಸಿಕ್ಸರ್ ಸಿಡಿಸಿದ ಸಾಧನೆ ಮಾಡಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್‌ನ ಇತಿಹಾಸದಲ್ಲಿ ಈ ಸಾಧನೆ ಮಾಡಿದ ಭಾರತದ ಮೊದಲ ಕ್ರಿಕೆಟಿಗ ಎನಿಸಿದ್ದಾರೆ ರೋಹಿತ್ ಶರ್ಮಾ.

ಇಂಗ್ಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್
ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 111 ರನ್‌ಗಳ ಸುಲಭ ಸವಾಲು ಪಡೆದ ಭಾರತ ತಂಡದ ಪರವಾಗಿ ಆರಂಭಿಕನಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಅಜೇಯವಾಗುಳಿದು ಗುರಿ ಮುಟ್ಟಿಸಿದ್ದಾರೆ. ಈ ಸಂದರ್ಭದಲ್ಲಿ ಭಾರತದ ನಾಯಕ ರೋಹಿತ್ ಶರ್ಮಾ ಸ್ಪೋಟಕವಾಗಿಯೇ ಬ್ಯಾಟಿಂಗ್ ನಡೆಸಿದರು. ಕೇವಲ 58 ಎಸೆತಗಳಲ್ಲಿ 76 ರನ್‌ಗಳಿಸಿದ ಶರ್ಮಾ 7 ಬೌಂಡರಿ ಹಾಗೂ 5 ಸಿಕ್ಸರ್ ಸಿಡಿಸಿದ್ದಾರೆ. ಮತ್ತೊಂದು ತುದಿಯಲ್ಲಿದ್ದ ಧವನ್ 31 ರನ್‌ಗಳಿಸಿ ಅಜೇಯವಾಗುಳಿದರು. ಈ ಮೂಲಕ ಕೇವಲ 18.4 ಓವರ್‌ಗಳಲ್ಲಿಯೇ ಭಾರತ ಗುರಿ ತಲುಪಿತು.

5000 ರನ್‌ಗಳ ಜೊತೆಯಾಟ
ಇನ್ನು ಭಾರತದ ಆರಂಭಿಕ ಜೋಡಿಯಾದ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಏಕದಿನ ಮಾದರಿಯಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ದಾಟಿದ್ದಾರೆ. ಆರಂಬಿಕರಾಗಿ ಈ ಆಟಗಾರರು 5000 ರನ್‌ಗಳ ಜೊತೆಯಾಟದಲ್ಲಿ ಭಾಗಿಯಾಗುವ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ. ಈ ಮೂಲಕ ದಿಗ್ಗಜ ಜೋಡಿಯಾದ ಸಚಿನ್ ತೆಂಡೂಲ್ಕರ್ ಹಾಗೂ ಸೌರವ್ ಗಂಗೂಲಿ ಬಳಿಕ ಈ ಸಾಧನೆ ಮಾಡಿದ ಕೇವಲ ಎರಡನೇ ಆರಂಭಿಕ ಜೋಡಿ ಎನಿಸಿಕೊಂಡಿದ್ದಾರೆ. ಇನ್ನು ಒಟ್ಟಾರೆಯಾಗಿ ಆರಂಭಿಕ ಜೊತೆಯಾಟದಲ್ಲಿ ಅತಿ ಹೆಚ್ಚು ರನ್‌ಗಳ ಜೊತೆಯಾಟ ನಡೆಸಿದ ಆಟಗಾರರ ಪಟ್ಟಿಯಲ್ಲಿಯೂ ರೋಹಿತ್-ಧವನ್ ಜೊಡಿ ಈಗ ನಾಲ್ಕನೇ ಸ್ಥಾನಕ್ಕೇರಿದ್ದಾರೆ.

9 ವಿಕೆಟ್ ಹಂಚಿಕೊಂಡ ಬೂಮ್ರಾ- ಶಮಿ
ಇನ್ನು ಬೌಲಿಂಗ್‌ನಲ್ಲಿ ಭಾರತದ ವೇಗದ ಬೌಲಿಂಗ್ ಜೋಡಿಯಾದ ಜಸ್ಪ್ರೀತ್ ಬೂಮ್ರಾ ಹಾಗೂ ಮೊಹಮ್ಮದ್ ಶಮಿ ಇಂಗ್ಲೆಂಡ್ ತಂಡದ ಬ್ಯಾಟಿಂಗ್ ವಿಭಾಗವನ್ನು ಸಂಪೂರ್ಣವಾಗಿ ಕೆಡವಿ ಹಾಕಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ವೈಯಕ್ತಿಕ ಅತ್ಯುತ್ತಮ ಬೌಲಿಂಗ್ ದಾಳಿ ನಡೆಸಿದ ಬೂಮ್ರಾ 7.2 ಓವರ್‌ಗಳಲ್ಲಿ ಕೇವಲ 19 ರನ್ ನೀಡಿ 6 ವಿಕೆಟ್ ಸಂಪಾದಿಸಿದ್ದಾರೆ. ಮತ್ತೊಂದೆಡೆ ಶಮಿ ಕೂಡ 3 ವಿಕೆಟ್ ಪಡೆದು ಮಿಂಚಿದ್ದಾರೆ, ಈ ಮೂಲಕ ಈ ಇಬ್ಬರು ಬೌಲರ್‌ಗಳೇ 9 ವಿಕೆಟ್‌ಗಳನ್ನು ತಮ್ಮಲ್ಲಿ ಹಂಚಿಕೊಂಡರು. ಇನ್ನುಳಿದ ಒಂದು ವಿಕೆಟ್ ಕನ್ನಡಿಗ ಪ್ರಸಿದ್ಧ್ ಕೃಷ್ಣ ಪಾಲಾಯಿತು.

ಇತ್ತಂಡಗಳ ಆಡುವ ಬಳಗ
ಇಂಗ್ಲೆಂಡ್ ಆಡುವ ಬಳಗ: ಜೇಸನ್ ರಾಯ್, ಜಾನಿ ಬೈರ್‌ಸ್ಟೋ, ಜೋ ರೂಟ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್(ನಾಯಕ, ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಕ್ರೇಗ್ ಓವರ್‌ಟನ್, ಡೇವಿಡ್ ವಿಲ್ಲಿ, ಬ್ರೈಡನ್ ಕಾರ್ಸೆ, ರೀಸ್ ಟೋಪ್ಲಿ
ಬೆಂಚ್: ಮ್ಯಾಥ್ಯೂ ಪಾರ್ಕಿನ್ಸನ್, ಸ್ಯಾಮ್ ಕುರಾನ್, ಫಿಲಿಪ್ ಸಾಲ್ಟ್, ಹ್ಯಾರಿ ಬ್ರೂಕ್
ಭಾರತ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಶ್ರೇಯಸ್ ಐಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ
ಬೆಂಚ್: ಅಕ್ಷರ್ ಪಟೇಲ್, ಇಶಾನ್ ಕಿಶನ್, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ವಿರಾಟ್ ಕೊಹ್ಲಿ, ಶಾರ್ದೂಲ್ ಠಾಕೂರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications