ಭಾರತ vs ಇಂಗ್ಲೆಂಡ್ ಮೊದಲ ಟೆಸ್ಟ್; ಪಂದ್ಯಶ್ರೇಷ್ಠ ಪ್ರಶಸ್ತಿ ಕುರಿತು ಜಹೀರ್ ಖಾನ್ ಬೇಸರ
ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲನೇ ಪಂದ್ಯ ನಾಟಿಂಗ್‍ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ಇತ್ತೀಚಿಗಷ್ಟೇ ಮುಗಿದಿದೆ. ಮಳೆಯ ಕಾಟದಿಂದ ಡ್ರಾನಲ್ಲಿ ಅಂತ್ಯವಾದ ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡರು.
ಮೊದಲ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ ಬೌಲರ್‌ಗಳ ದಾಳಿಗೆ ಇಂಗ್ಲೆಂಡ್ ಬ್ಯಾಟ್ಸ್‌ಮನ್‌ಗಳು ತತ್ತರಿಸಿದ ಸಂದರ್ಭದಲ್ಲಿ ಇಂಗ್ಲೆಂಡ್ ತಂಡಕ್ಕೆ ಆಸರೆಯಾದ ಜೋ ರೂಟ್ 64 ರನ್ ಗಳಿಸಿ ಜವಾಬ್ದಾರಿಯುತ ಆಟವನ್ನಾಡಿದರು. ಎರಡನೇ ಇನ್ನಿಂಗ್ಸ್‌ನಲ್ಲಿ ಅಬ್ಬರದ ಶತಕ (109) ಬಾರಿಸಿದ ಜೋ ರೂಟ್ ಇಂಗ್ಲೆಂಡ್ ಮುನ್ನೂರರ ಗಡಿ ದಾಟುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದರು. ಹೀಗಾಗಿಯೇ ಮೊದಲ ಪಂದ್ಯದಲ್ಲಿ ಜೋ ರೂಟ್ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಲಭಿಸಿತು.
ಪಂದ್ಯ ಮುಗಿದ ನಂತರ ಮಾತನಾಡಿರುವ ಭಾರತದ ಮಾಜಿ ಕ್ರಿಕೆಟಿಗ ಜಹೀರ್ ಖಾನ್ ಮೊದಲನೇ ಪಂದ್ಯದಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಜೋ ರೂಟ್ ಬದಲಾಗಿ ಭಾರತದ ಪರ ಅತ್ಯುತ್ತಮ ಪ್ರದರ್ಶನ ತೋರಿದ ಜಸ್ಪ್ರೀತ್ ಬುಮ್ರಾಗೆ ಸಿಗಬೇಕಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ. ಎರಡು ಇನ್ನಿಂಗ್ಸ್ ಪೈಕಿ 9 ವಿಕೆಟ್‍ಗಳನ್ನು ಪಡೆದ ಜಸ್ ಪ್ರೀತ್ ಬುಮ್ರಾ ಇಂಗ್ಲೆಂಡ್ ತಂಡದ ಪ್ರಮುಖ ಬ್ಯಾಟ್ಸ್‌ಮನ್‌ಗಳನ್ನು ಪೆವಿಲಿಯನ್ ಕಡೆ ಕಳುಹಿಸುವ ಮೂಲಕ ಭಾರತ ತಂಡದ ಮುನ್ನಡೆಯಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸಿದರು. ಹೀಗಾಗಿ ಮೊದಲನೇ ಪಂದ್ಯದಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಜೋ ರೂಟ್ ಬದಲು ಭಾರತದ ಜಸ್ ಪ್ರೀತ್ ಬುಮ್ರಾಗೆ ನೀಡಬೇಕಿತ್ತು ಎಂದು ಜಹೀರ್ ಖಾನ್ ಅಭಿಪ್ರಾಯಪಟ್ಟಿದ್ದಾರೆ.

ಜೋ ರೂಟ್ ಉತ್ತಮ ಆಟವನ್ನಾಡಿದರು ಅದರೆ ಪಂದ್ಯಶ್ರೇಷ್ಠ ಪ್ರಶಸ್ತಿ ಬುಮ್ರಾಗೆ ಲಭಿಸಬೇಕಿತ್ತು
ಈ ಕುರಿತು ಮಾತನಾಡಿರುವ ಜಹೀರ್ ಖಾನ್ ಇಂಗ್ಲೆಂಡ್ ತಂಡದ ಪರ ನಾಯಕ ಜೋ ರೂಟ್ ಉತ್ತಮ ಆಟವನ್ನಾಡಿದರು, ಅದರಲ್ಲಿ ಯಾವುದೇ ಸಂಶಯವಿಲ್ಲ. ಸಂಕಷ್ಟದಲ್ಲಿದ್ದ ಇಂಗ್ಲೆಂಡ್ ತಂಡದ ಪರ ಮೊದಲ ಇನ್ನಿಂಗ್ಸ್‌ನಲ್ಲಿ ಜೋ ರೂಟ್ ಜವಾಬ್ದಾರಿಯುತ ಆಟವನ್ನಾಡಿದರು ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿಯೂ ಶತಕ ಬಾರಿಸುವುದರ ಮೂಲಕ ಅಬ್ಬರದ ಬ್ಯಾಟಿಂಗ್ ಮಾಡಿದರು. ಆದರೆ ಒಟ್ಟಾರೆಯಾಗಿ ಪಂದ್ಯವನ್ನು ಗಮನಿಸಿದರೆ ಜಸ್ ಪ್ರೀತ್ ಬೂಮ್ರಾಗೆ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ನೀಡಬೇಕಾಗಿತ್ತು ಎಂದು ಜಹೀರ್ ಖಾನ್ ಹೇಳಿದ್ದಾರೆ.

ಮೊದಲ ಓವರ್‌ನಿಂದಲೇ ಬುಮ್ರಾ ಪಾರುಪತ್ಯ
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರ ರೊರಿ ಬರ್ನ್ಸ್ ಮೊದಲ ಇನ್ನಿಂಗ್ಸ್‌ನ ಮೊದಲನೇ ಓವರ್‌ನಲ್ಲಿಯೇ ಜಸ್ ಪ್ರೀತ್ ಬುಮ್ರಾಗೆ ವಿಕೆಟ್ ಒಪ್ಪಿಸಿದರು. ಯಾವುದೇ ರನ್ ಗಳಿಸದೇ ಶೂನ್ಯಕ್ಕೆ ಜಸ್ ಪ್ರೀತ್ ಬುಮ್ರಾ ಎಸೆತದಲ್ಲಿ ಔಟ್ ಆದ ರೊರಿ ಬರ್ನ್ಸ್ ಪೆವಿಲಿಯನ್ ಕಡೆ ಪ್ರಯಾಣ ಬೆಳೆಸಿದರು. ಹೀಗೆ ಪಂದ್ಯದ ಮೊದಲ ಓವರ್‌ನಿಂದಲೇ ಪದ್ಯದ ಮೇಲೆ ಹಿಡಿತವನ್ನು ಸಾಧಿಸಲು ಆರಂಭಿಸಿದ ಜಸ್ ಪ್ರೀತ್ ಬುಮ್ರಾ ಇಡೀ ಪಂದ್ಯದಲ್ಲಿ ಉತ್ತಮ ಪ್ರದರ್ಶನವನ್ನು ತೋರಿದ್ದಾರೆ. ಹೀಗಾಗಿ ಒಟ್ಟಾರೆ ಪಂದ್ಯದಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಯಾರಿಗೆ ಕೊಡಬೇಕು ಎಂಬ ಆಯ್ಕೆ ಎದುರಾದರೆ ನಾನು ಖಡಾಖಂಡಿತವಾಗಿ ಜಸ್ ಪ್ರೀತ್ ಬುಮ್ರಾ ಹೆಸರನ್ನು ಆಯ್ಕೆ ಮಾಡುತ್ತೇನೆ ಎಂದು ಜಹೀರ್ ಖಾನ್ ಹೇಳಿದ್ದಾರೆ.

ಒಟ್ಟಾರೆ 9 ವಿಕೆಟ್ ಪಡೆದು ಮಿಂಚಿದ ಬುಮ್ರಾ
ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಎರಡು ಇನ್ನಿಂಗ್ಸ್ ಪೈಕಿ ಒಟ್ಟು 9 ವಿಕೆಟ್ ಪಡೆದುಕೊಳ್ಳುವುದರ ಮೂಲಕ ಮಿಂಚಿದ ಜಸ್ ಪ್ರೀತ್ ಬುಮ್ರಾ ಮೊದಲನೇ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡದ ಆಕ್ರಮಣಕಾರಿ ಆಟಗಾರರಾದ ರೊರಿ ಬರ್ನ್ಸ್ ಮತ್ತು ಜೋಸ್ ಬಟ್ಲರ್ ಅವರ ವಿಕೆಟ್ ಪಡೆದು ಉತ್ತಮ ಪ್ರದರ್ಶನ ನೀಡಿದರು. ಹಾಗೂ ಎರಡನೇ ಇನ್ನಿಂಗ್ಸ್‌ನಲ್ಲಿ ಶತಕ ಬಾರಿಸಿದ್ದ ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್, ಡೊಮಿನಿಕ್ ಸಿಬ್ಲೆ, ಜಾಕ್ ಕ್ರಾವ್ಲೆ ಮತ್ತು ಸ್ಯಾಮ್ ಕರನ್ ಅವರ ವಿಕೆಟ್‍ಗಳನ್ನು ಪಡೆದು ಜಸ್ಪ್ರೀತ್ ಬುಮ್ರಾ ಉತ್ತಮ ಪ್ರದರ್ಶನ ನೀಡಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications