ಭಾರತ vs ಇಂಗ್ಲೆಂಡ್: ಮತ್ತೆ ವಿಫಲವಾದ ರೋಹಿತ್ ಶರ್ಮಾ, ಭಾರತಕ್ಕೆ ಆರಂಭಿಕ ಆಘಾತ

ಟೀಮ್ ಇಂಡಿಯಾದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ನಲ್ಲಿ ಕಳಪೆ ಪ್ರದರ್ಶನವನ್ನು ಭಾರತದಲ್ಲೂ ಮುಂದುವರಿಸಿದ್ದಾರೆ. ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್‌ನ ಮೂರನೇ ದಿನದಾಟದ ವೇಲೆ ಭಾರತದ ಆರಂಭಿಕ ಆಟಗಾರನಾಗಿ ಮೊದಲ ಇನ್ನಿಂಗ್ಸ್‌ನಲ್ಲಿ ಕಣಕ್ಕಿಳಿದ ರೋಹಿತ್ ಶರ್ಮಾ ಕೇವಲ 6 ರನ್ ಗಳಿಸಲಷ್ಟೇ ಶಕ್ತರಾದರು.
ರೋಹಿತ್ ಶರ್ಮಾ ಕಳೆದ 7 ಟೆಸ್ಟ್ ಇನ್ನಿಂಗ್ಸ್‌ಗಳಲ್ಲಿ ಕೇವಲ ಒಂದು ಬಾರಿ ಮಾತ್ರವೇ 50+ ರನ್ ಬಾರಿಸಿದ್ದಾರೆ. 2015-16ರ ಬಳಿಕ ಇದೇ ಮೊದಲ ಬಾರಿಗೆ ಸತತ ಎರಡು ಇನ್ನಿಂಗ್ಸ್‌ಗಳಲ್ಲಿ ಭಾರತೀಯ ಆರಂಭಿಕ ಆಟಗಾರ ರೋಹಿತ್ ಶರ್ಮಾ ಎರಡಂಕಿ ತಲುಪದೆಯೇ ವಿಕೆಟ್ ಒಪ್ಪಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಬ್ರಿಸ್ಬೇನ್ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ರೋಹಿತ್ ಶರ್ಮಾ 7 ರನ್ ಗಳಿಸಿ ಔಟಾಗಿದ್ದರು.
ಟೀಮ್ ಇಮಡಿಯಾದ ನಾಲ್ಕನೇ ಓವರ್‌ನಲ್ಲಿ ಜೋಫ್ರಾ ಆರ್ಚರ್ ರೋಹಿತ್ ಶರ್ಮಾ ಅವರನ್ನು ತಮ್ಮ ಬೌಲಿಂಗ್ ದಾಳಿಯಲ್ಲಿ ಕೆಡವಿದರು. ಆರ್ಚರ್ ಎಸೆತದಲ್ಲಿ ಬೌಂಡರಿ ಬಾರಿದ ಶರ್ಮಾಗೆ ಶರ್ಟ್ ಬಾಲ್ ಎಸೆದರು ಆರ್ಚರ್. ಆದರೆ ಈ ಎಸೆತವನ್ನು ಅರ್ಥ ಮಾಡಿಕೊಳ್ಳುವಲ್ಲಿ ರೋಹಿತ್ ವಿಫಲವಾಗಿ ಕೀಪರ್ ಜೋಸ್ ಬಟ್ಲರ್‌ಗೆ ಸುಲಭವಾಗಿ ಕ್ಯಾಚ್ ನೀಡಿ ನಿರ್ಗಮಿಸಿದರು.
ಹೀಗೆ ಟೀಮ್ ಇಂಡಿಯಾ ತಮ್ಮ ಮೊದಲ ವಿಕೆಟ್‌ಅನ್ನು 19 ರನ್ ಗಳಿಸುತ್ತಿದ್ದಂತೆಯೇ ಕಳೆದುಕೊಂಡಿತು. ಬಳಿಕ ಅದ್ಭುತವಾಗಿ ಆಡುತ್ತಿದ್ದ ಶುಬ್ಮನ್ ಗಿಲ್ ವೇಗವಾಗಿ ರನ್ ಗಳಿಸುತ್ತಿದ್ದರು. 28 ಎಸೆತಗಳಲ್ಲಿ 29 ರನ್ ಬಾರಿಸಿದ ವೇಳೆ ಗಿಲ್ ಕೂಡ ಜೋಫ್ರಾ ಆರ್ಚರ್‌ಗೆ ವಿಕೆಟ್ ಒಪ್ಪಿಸಿದರು. ಈ ಮೂಲಕ 44 ರನ್‌ಗಳಿಗೆ ಟೀಮ್ ಇಂಡಿಯಾ ಎರಡು ವಿಕೆಟ್ ಕಳೆದುಕೊಂಡಿತು. ಚೇತೇಶ್ವರ್ ಪೂಜಾರ ಹಾಗೂ ವಿರಾಟ್ ಕೊಹ್ಲಿ ಬ್ಯಾಟಿಂಗ್ ಮುಂದುವರಿಸಿದ್ದಾರೆ.
ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 578 ರನ್ ಗಳಿಸಿ ಆಲೌಟ್ ಆಯಿತು. ಟೀಮ್ ಇಂಡಿಯಾ ಪರವಾಗಿ ಆರ್ ಅಶ್ವಿನ್ ಹಾಗೂ ಜಸ್ಪ್ರೀತ್ ಬೂಮ್ರಾ ತಲಾ ಮೂರು ವಿಕೆಟ್ ಕಿತ್ತರೆ ಇಶಾಂತ್ ಶರ್ಮಾ ಹಾಗೂ ನದೀಮ್ ತಲಾ ಎರಡು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications